Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 1:8 - ಪರಿಶುದ್ದ ಬೈಬಲ್‌

8 ಬಳಿಕ ಒಬ್ಬ ಹೊಸ ರಾಜನು ಈಜಿಪ್ಟನ್ನು ಆಳತೊಡಗಿದನು. ಈ ರಾಜನಿಗೆ ಯೋಸೇಫನ ವಿಷಯವಾಗಿ ತಿಳಿದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ತರುವಾಯ ಯೋಸೇಫನನ್ನು ಅರಿಯದ ಹೊಸ ಅರಸನು ಐಗುಪ್ತದೇಶದ ಆಳ್ವಿಕೆಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅನಂತರ ಹೊಸ ರಾಜನೊಬ್ಬನು ಈಜಿಪ್ಟ್ ದೇಶದ ಆಳ್ವಿಕೆಗೆ ಬಂದನು. ಅವನಿಗೆ ಜೋಸೆಫನ ವಿಷಯ ತಿಳಿದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ತರುವಾಯ ಯೋಸೇಫನನ್ನು ಅರಿಯದ ಬೇರೊಬ್ಬ ಅರಸನು ಐಗುಪ್ತದೇಶದ ಆಳಿಕೆಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ತರುವಾಯ ಯೋಸೇಫನನ್ನೇ ಅರಿಯದ ಬೇರೊಬ್ಬ ಅರಸನು, ಈಜಿಪ್ಟಿನಲ್ಲಿ ಅಧಿಕಾರಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 1:8
10 ತಿಳಿವುಗಳ ಹೋಲಿಕೆ  

ಬಳಿಕ, ಬೇರೊಬ್ಬ ರಾಜನು ಈಜಿಪ್ಟನ್ನು ಆಳಲಾರಂಭಿಸಿದನು. ಅವನಿಗೆ ಯೋಸೇಫನ ಬಗ್ಗೆ ಏನೂ ತಿಳಿದಿರಲಿಲ್ಲ.


ಆ ನಗರದಲ್ಲಿ ಒಬ್ಬ ಜ್ಞಾನಿ ಇದ್ದನು. ಆದರೆ ಅವನು ಬಡವನಾಗಿದ್ದನು, ಅವನು ತನ್ನ ಜ್ಞಾನದಿಂದ ಆ ನಗರವನ್ನು ಕಾಪಾಡಿದನು; ಆದರೆ ಜನರು ಅವನನ್ನು ಮರೆತೇಬಿಟ್ಟರು.


ಈ ರಾಜನು ನಮ್ಮ ಜನರಿಗೆ ಮೋಸ ಮಾಡಿದನು. ಅವನು ನಮ್ಮ ಪಿತೃಗಳಿಗೆ ಕೇಡನ್ನು ಮಾಡಿದನು. ಅವರ ಕೂಸುಗಳನ್ನು ಸಾಯಿಸಬೇಕೆಂದು ಹೊರಗೆ ಹಾಕಿಸಿದನು.


ಈಜಿಪ್ಟಿನವರು ನಮ್ಮನ್ನು ಕಠಿಣವಾಗಿ ನೋಡಿಕೊಳ್ಳುತ್ತಿದ್ದರು. ನಮ್ಮನ್ನು ಗುಲಾಮರಾಗಿ ಉಪಯೋಗಿಸಿದರು. ನಮ್ಮನ್ನು ಹಿಂಸಿಸಿ, ಕಷ್ಟಕರವಾದ ಕೆಲಸವನ್ನು ಕೊಟ್ಟರು.


ಆದ್ದರಿಂದ ಈಜಿಪ್ಟಿನವರು ಯಾಕೋಬನ ಕುಟುಂಬವನ್ನು ದ್ವೇಷಿಸತೊಡಗಿದರು. ಅವರು ತಮ್ಮ ಗುಲಾಮರ ವಿರೋಧವಾಗಿ ಸಂಚುಗಳನ್ನು ಮಾಡತೊಡಗಿದರು.


ಆಗ ಯೆಹೋವನು, “ನನ್ನ ಜನರು ಈಜಿಪ್ಟಿನಲ್ಲಿ ಅನುಭವಿಸುತ್ತಿರುವ ಕಷ್ಟಗಳನ್ನು ನೋಡಿದ್ದೇನೆ. ಅಧಿಕಾರಿಗಳು ಅವರನ್ನು ಹಿಂಸಿಸುವಾಗ ಅವರು ಇಟ್ಟ ಮೊರೆಯನ್ನು ಕೇಳಿದ್ದೇನೆ. ಅವರ ದುಃಖವನ್ನೆಲ್ಲಾ ಬಲ್ಲೆನು.


ನಾನು ಇಸ್ರೇಲರ ಮೊರೆಯನ್ನು ಕೇಳಿದ್ದೇನೆ. ಈಜಿಪ್ಟಿನವರು ಅವರಿಗೆ ಕೊಡುವ ಹಿಂಸೆಯನ್ನು ನೋಡಿದ್ದೇನೆ.


ಇದಲ್ಲದೆ ಯೆಹೋವನು ಅವನಿಗೆ, “ನೀನು ಹೋಗಿ ಇಸ್ರೇಲರ ನಾಯಕರನ್ನು ಒಟ್ಟುಗೂಡಿಸಿ ಅವರಿಗೆ, ‘ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನನಗೆ ಕಾಣಿಸಿಕೊಂಡನು. ಅಬ್ರಹಾಮನ, ಇಸಾಕನ, ಯಾಕೋಬನ ದೇವರು ಹೇಳುವುದೇನೆಂದರೆ, ಈಜಿಪ್ಟಿನಲ್ಲಿ ನಿಮಗೆ ಸಂಭವಿಸಿದವುಗಳನ್ನು ನಾನು ಲಕ್ಷ್ಯವಿಟ್ಟು ನೋಡಿದ್ದೇನೆ.


ಈ ಪೀಳಿಗೆಯವರೆಲ್ಲರು ಸತ್ತುಹೋದ ಮೇಲೆ ಮುಂದಿನ ಪೀಳಿಗೆಯು ಬೆಳೆಯಿತು. ಈ ಹೊಸ ಪೀಳಿಗೆಗೆ ಯೆಹೋವನ ಬಗ್ಗೆ ಮತ್ತು ಯೆಹೋವನು ಇಸ್ರೇಲಿನ ಜನರಿಗಾಗಿ ಮಾಡಿದ ಮಹತ್ಕಾರ್ಯಗಳ ಬಗ್ಗೆ ಏನೂ ಗೊತ್ತಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು