Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 1:9 - ಪರಿಶುದ್ದ ಬೈಬಲ್‌

9 ಈ ರಾಜನು ತನ್ನ ಜನರಿಗೆ, “ಇಸ್ರೇಲರ ಸಂಖ್ಯೆಯು ಹೆಚ್ಚಾಯಿತು; ಅವರು ನಮಗಿಂತಲೂ ಬಲಿಷ್ಠರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅರಸನು ತನ್ನ ಜನರಿಗೆ, “ಇಸ್ರಾಯೇಲರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಮತ್ತು ನಮಗಿಂತ ಬಹಳ ಬಲಶಾಲಿಗಳೂ ಆಗಿದ್ದಾರೆ ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವನು ತನ್ನ ಜನರಿಗೆ, “ಇಸ್ರಯೇಲರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ, ಬಲಾಢ್ಯರಾಗಿದ್ದಾರೆ, ಅಧೀನದಲ್ಲಿರಿಸಲು ಕಷ್ಟಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವನು ತನ್ನ ಜನರಿಗೆ - ಇಸ್ರಾಯೇಲ್ಯರು ನಮ್ಮ ಅಧೀನದಲ್ಲಿರದಷ್ಟು ಬಹಳವಾಗಿಯೂ ಬಲವಾಗಿಯೂ ಇದ್ದಾರೆ ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವನು ತನ್ನ ಜನರಿಗೆ, “ಇಸ್ರಾಯೇಲರು ನಮಗಿಂತ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಮತ್ತು ಹೆಚ್ಚು ಬಲವುಳ್ಳವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 1:9
12 ತಿಳಿವುಗಳ ಹೋಲಿಕೆ  

ಆಮೇಲೆ ನಾನು, “ಜನರು ಪ್ರಯಾಸಪಟ್ಟು ಕೆಲಸ ಮಾಡುವುದೇಕೆ?” ಎಂದು ಆಲೋಚಿಸಿದೆ. ಜನರು ಏಳಿಗೆ ಹೊಂದಲು ಮತ್ತು ಬೇರೆಯವರಿಗಿಂತ ಹೆಚ್ಚು ಅಭಿವೃದ್ಧಿಯಾಗಲು ಪ್ರಯತ್ನಿಸುವರು; ಅದಕ್ಕೆ ಅವರ ಮತ್ಸರವೇ ಕಾರಣ. ಇದೂ ಗಾಳಿಯನ್ನು ಹಿಂದಟ್ಟಿದ್ದ ಹಾಗೆ ವ್ಯರ್ಥ.


ಮೊದಲು ನಾವು ಸಹ ಅವಿವೇಕಿಗಳಾಗಿದ್ದೆವು. ನಾವು ವಿಧೇಯರಾಗಿರಲಿಲ್ಲ. ನಾವು ಮೋಸಹೋಗಿದ್ದೆವು. ಅನೇಕ ಬಗೆಯ ಆಸೆಗಳಿಗೆ ಮತ್ತು ಭೋಗಗಳಿಗೆ ದಾಸರಾಗಿದ್ದೆವು; ಕೆಟ್ಟದ್ದನ್ನು ಮಾಡುವವರೂ ಹೊಟ್ಟೆಕಿಚ್ಚುಳ್ಳವರೂ ಆಗಿದ್ದೆವು. ಜನರು ನಮ್ಮನ್ನು ದ್ವೇಷಿಸುತ್ತಿದ್ದರು. ನಾವು ಒಬ್ಬರನ್ನೊಬ್ಬರು ದ್ವೇಷಿಸುತ್ತಿದ್ದೆವು.


ಕೋಪವು ಕ್ರೂರ; ಅದು ಪ್ರವಾಹದಂತೆ ನಾಶಕರ. ಹೊಟ್ಟೆಕಿಚ್ಚು ಅದಕ್ಕಿಂತಲೂ ನಾಶಕರ.


ಅಧಿಕ ಜನಸಂಖ್ಯೆಯು ರಾಜನಿಗೆ ಗೌರವ. ಪ್ರಜೆಗಳೇ ಇಲ್ಲದಿದ್ದರೆ ರಾಜನಿಗೆ ಬೆಲೆಯೇ ಇಲ್ಲ.


ಪವಿತ್ರ ಗ್ರಂಥವು ಅರ್ಥವಿಲ್ಲದ್ದೆಂದು ಯೋಚಿಸುವಿರಾ? “ದೇವರು ನಮ್ಮಲ್ಲಿ ಇರಿಸಿರುವ ಆತ್ಮದ ಅಪೇಕ್ಷೆಯೇನೆಂದರೆ, ನಾವು ಆತನಿಗೋಸ್ಕರ ಮಾತ್ರ ಇರಬೇಕೆಂದಷ್ಟೆ” ಎಂದು ಪವಿತ್ರ ಗ್ರಂಥವು ಹೇಳುತ್ತದೆ.


ಮೂಢನ ಕೋಪವು ಅವನನ್ನೇ ಕೊಲ್ಲುವುದು. ಮೂರ್ಖನ ಹೊಟ್ಟೆಕಿಚ್ಚು ಅವನನ್ನೇ ಕೊಲ್ಲುವುದು.


ಅಬೀಮೆಲೆಕನು ಇಸಾಕನಿಗೆ, “ನಮ್ಮ ದೇಶವನ್ನು ಬಿಟ್ಟುಹೋಗು. ನೀನು ನಮಗಿಂತಲೂ ತುಂಬ ಬಲಿಷ್ಠನಾದೆ” ಎಂದು ಹೇಳಿದನು.


ದೇವರು ಅವನಿಗೆ, “ನಾನೇ ದೇವರು, ನಾನೇ ನಿನ್ನ ತಂದೆಯ ದೇವರು. ನೀನು ಈಜಿಪ್ಟಿಗೆ ಹೋಗಲು ಹೆದರಬೇಡ. ಈಜಿಪ್ಟಿನಲ್ಲಿ ನಿನ್ನನ್ನು ದೊಡ್ಡ ಜನಾಂಗವನ್ನಾಗಿ ಮಾಡುವೆ.


ಇಲ್ಲಿ ಬಹಳ ಮಂದಿ ಕೆಲಸಗಾರರಿದ್ದಾರೆ; ಅವರು ಕೆಲಸ ಮಾಡದಂತೆ ನೀವು ತಡೆಯುವುದೇಕೆ?” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು