Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 10:1 - ಪರಿಶುದ್ದ ಬೈಬಲ್‌

1 ಯೆಹೋವನು ಮೋಶೆಗೆ, “ಫರೋಹನ ಬಳಿಗೆ ಹೋಗು. ನಾನು ಅದ್ಭುತಕಾರ್ಯಗಳನ್ನು ತೋರಿಸಲು ಅವಕಾಶವಾಗಲೆಂದು ಫರೋಹನ ಮತ್ತು ಅವನ ಅಧಿಕಾರಿಗಳ ಹೃದಯಗಳನ್ನು ಕಠಿಣಪಡಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ತರುವಾಯ ಯೆಹೋವನು ಮೋಶೆಗೆ, “ಫರೋಹನ ಬಳಿಗೆ ಹಿಂತಿರುಗಿ ಹೋಗು. ನಾನು ಫರೋಹನ ಮತ್ತು ಅವನ ಪರಿವಾರದವರ ಹೃದಯಗಳನ್ನು ಕಠಿಣಗೊಳಿಸಿದ್ದೇನೆ. ಏಕೆಂದರೆ ನಾನು ಈ ಮಹತ್ಕಾರ್ಯಗಳನ್ನು ಅವರ ಮುಂದೆ ನಡೆಸುವುದಕ್ಕೆ ಇದು ಕಾರಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಬಳಿಕ ಸರ್ವೇಶ್ವರ ಸ್ವಾಮಿ ಮೋಶೆಗೆ: “ಫರೋಹನ ಬಳಿಗೆ ಮತ್ತೆ ಹೋಗು. ನಾನು ಅವನ ಮತ್ತು ಅವನ ಪರಿವಾರದವರ ಹೃದಯಗಳನ್ನು ಮೊಂಡಾಗಿಸಿದ್ದೇನೆ. ಏಕೆಂದರೆ ಈ ಸೂಚಕಕಾರ್ಯಗಳನ್ನು ಅವರ ಮುಂದೆ ನಡೆಸಲು ಆಸ್ಪದವಾಗಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ತರುವಾಯ ಯೆಹೋವನು ಮೋಶೆಗೆ ಇಂತೆಂದನು - ಫರೋಹನ ಬಳಿಗೆ ತಿರಿಗಿ ಹೋಗು. ನಾನು ಫರೋಹನ ಮತ್ತು ಅವನ ಪರಿವಾರದವರ ಮುಂದೆ ಈ ಮಹತ್ಕಾರ್ಯಗಳನ್ನು ನಡಿಸುವದಕ್ಕೆ ಆಸ್ಪದವಾಗುವದಕ್ಕೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ತರುವಾಯ ಯೆಹೋವ ದೇವರು ಮೋಶೆಗೆ, “ಫರೋಹನ ಬಳಿಗೆ ಹೋಗು, ಏಕೆಂದರೆ ನಾನು ನನ್ನ ಅದ್ಭುತ ಸೂಚಕಕಾರ್ಯಗಳನ್ನು ಅವನ ಮುಂದೆ ತೋರಿಸುವುದಕ್ಕಾಗಿ ಅವನ ಹೃದಯವನ್ನೂ ಅವನ ಅಧಿಕಾರಿಗಳ ಹೃದಯಗಳನ್ನೂ ಕಠಿಣ ಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 10:1
19 ತಿಳಿವುಗಳ ಹೋಲಿಕೆ  

ಮೋಶೆ ಈಜಿಪ್ಟಿಗೆ ಪ್ರಯಾಣ ಮಾಡುತ್ತಿದ್ದಾಗ ಯೆಹೋವನು ಅವನೊಡನೆ ಮಾತಾಡಿ, “ನೀನು ಫರೋಹನೊಂದಿಗೆ ಮಾತಾಡುವಾಗ ನಾನು ತೋರಿಸಿಕೊಟ್ಟ ಅದ್ಭುತಕಾರ್ಯಗಳನ್ನೆಲ್ಲಾ ಅವನ ಮುಂದೆ ಮಾಡು. ಆದರೂ ನಾನು ಫರೋಹನ ಹೃದಯವನ್ನು ಕಠಿಣಗೊಳಿಸುವುದರಿಂದ ಅವನು ಇಸ್ರೇಲರನ್ನು ಹೋಗಗೊಡಿಸುವುದಿಲ್ಲ.


ಪವಿತ್ರ ಗ್ರಂಥದಲ್ಲಿ ದೇವರು ಫರೋಹನಿಗೆ, “ನಾನು ನಿನಗೆ ನನ್ನ ಶಕ್ತಿಯನ್ನು ತೋರಿಸಬೇಕೆಂತಲೂ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಖ್ಯಾತಿಪಡಿಸಬೇಕೆಂತಲೂ ನಿನ್ನನ್ನು ರಾಜನನ್ನಾಗಿ ಮಾಡಿದೆನು” ಎಂದು ಹೇಳಿದ್ದಾನೆ.


ಆದ್ದರಿಂದ ನಾನು ಕೈಚಾಚಿ ಈಜಿಪ್ಟಿನ ವಿರುದ್ಧ ಮಹತ್ಕಾರ್ಯಗಳನ್ನು ಮಾಡಿ ಅನೇಕ ವಿಧದಲ್ಲಿ ಅದನ್ನು ಬಾಧಿಸುವೆನು. ಆಗ ಅವನು ನಿಮ್ಮನ್ನು ಹೋಗಗೊಡಿಸುವನು.


ದೇವರು ನೀತಿವಂತನಾದ ನ್ಯಾಯಾಧೀಶನಾಗಿದ್ದಾನೆ. ಆತನು ದುಷ್ಟರ ವಿಷಯದಲ್ಲಿ ಯಾವಾಗಲೂ ಕೋಪವುಳ್ಳವನು.


ಅಯ್ಯೋ, ಮಹಾಶಕ್ತಿಶಾಲಿಗಳಾದ ಈ ದೇವರುಗಳಿಂದ ನಮ್ಮನ್ನು ರಕ್ಷಿಸುವವರು ಯಾರು! ಈಜಿಪ್ಟಿನವರಿಗೆ ಕಾಯಿಲೆಗಳನ್ನು ಬರಮಾಡಿದ ದೇವರುಗಳು ಇವರೇ ಅಲ್ಲವೇ.


ಫರೋಹನು ಮೋಶೆ ಆರೋನರನ್ನು ಕರೆಸಿ ಅವರಿಗೆ, “ಈ ಸಾರಿ ನಾನು ಪಾಪಮಾಡಿದ್ದೇನೆ. ಯೆಹೋವನೇ ನೀತಿವಂತನು. ನಾನೂ ನನ್ನ ಜನರೂ ದೋಷಿಗಳಾಗಿದ್ದೇವೆ.


ಆದರೆ, ನನ್ನ ಶಕ್ತಿಯನ್ನು ನಿನಗೆ ತೋರಿಸಬೇಕೆಂದೂ ಲೋಕದ ಜನರೆಲ್ಲರು ನನ್ನ ಬಗ್ಗೆ ತಿಳಿದುಕೊಳ್ಳಬೇಕೆಂದೂ ನಾನು ನಿನ್ನನ್ನು ಇನ್ನೂ ಉಳಿಸಿದ್ದೇನೆ.


ಆಗ ನಾನು ಈಜಿಪ್ಟನ್ನು ಭಯಂಕರವಾಗಿ ದಂಡಿಸಿ ನನ್ನ ಜನರನ್ನು ಆ ದೇಶದಿಂದ ಹೊರತರುವೆನು.


“ತಮ್ಮ ಕಣ್ಣುಗಳಿಂದ ಕಾಣದಂತೆ ತಮ್ಮ ಮನಸ್ಸುಗಳಿಂದ ಅರ್ಥಮಾಡಿಕೊಳ್ಳದಂತೆ ಪರಿವರ್ತನೆಗೊಂಡು ಗುಣಹೊಂದದಂತೆ ಆತನು ಅವರನ್ನು ಕುರುಡರನ್ನಾಗಿ ಮಾಡಿದ್ದಾನೆ, ಅವರ ಮನಸ್ಸುಗಳನ್ನು ಕಲ್ಲಾಗಿಸಿದ್ದಾನೆ.”


ಆದ್ದರಿಂದ ದೇವರು ತಾನು ಯಾರಿಗೆ ಕರುಣೆಯನ್ನು ತೋರಬಯಸುತ್ತಾನೋ ಅವರಿಗೆ ಕರುಣೆಯನ್ನು ತೋರಿಸುತ್ತಾನೆ. ದೇವರು ಯಾರನ್ನು ಮೊಂಡರನ್ನಾಗಿ ಮಾಡಬಯಸುತ್ತಾನೋ ಅವರನ್ನು ಮೊಂಡರನ್ನಾಗಿ ಮಾಡುತ್ತಾನೆ.


ಆದರೆ ಯೆಹೋವನು ಫರೋಹನ ಹೃದಯವನ್ನು ಕಠಿಣಗೊಳಿಸಿದ್ದರಿಂದ ಫರೋಹನು ಮೋಶೆ ಆರೋನರ ಮಾತನ್ನು ಕೇಳಲಿಲ್ಲ. ಯೆಹೋವನು ಹೇಳಿದಂತೆಯೇ ಇದಾಯಿತು.


ತಾವು ಶಕ್ತಿಶಾಲಿಗಳೆಂಬ ಭಾವನೆಯನ್ನು ಯೆಹೋವನು ಆ ಜನರಲ್ಲಿ ಹುಟ್ಟಿಸಿ ಅವರನ್ನು ಇಸ್ರೇಲರ ಮೇಲೆ ಯುದ್ಧಕ್ಕೆ ಬರಮಾಡಿದನು. ಯುದ್ಧದಲ್ಲಿ ಕರುಣೆಯಿಲ್ಲದೆ ಅವರನ್ನು ಸಂಹರಿಸಬೇಕೆಂಬುದು ಯೆಹೋವನ ಯೋಜನೆಯಾಗಿತ್ತು. ಯೆಹೋವನು ಮೋಶೆಗೆ ಹೇಳಿದ ರೀತಿಯಲ್ಲಿ ಯೆಹೋಶುವನು ಆ ಪಟ್ಟಣಗಳನ್ನು ನಾಶಮಾಡಲು ಇದರಿಂದ ಸಾಧ್ಯವಾಯಿತು.


ಆದರೆ ಫರೋಹನು ಮತ್ತೆ ಹೃದಯವನ್ನು ಕಠಿಣಪಡಿಸಿಕೊಂಡು ಇಸ್ರೇಲರನ್ನು ಕಳುಹಿಸಿಕೊಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು