ವಿಮೋಚನಕಾಂಡ 10:12 - ಪರಿಶುದ್ದ ಬೈಬಲ್12 ಯೆಹೋವನು ಮೋಶೆಗೆ, “ಈಜಿಪ್ಟ್ ದೇಶದ ಮೇಲೆ ನಿನ್ನ ಕೈಯನ್ನೆತ್ತು. ಆಗ ಮಿಡತೆಗಳು ಬರುವವು! ಮಿಡತೆಗಳು ಈಜಿಪ್ಟ್ ದೇಶದಲ್ಲೆಲ್ಲಾ ಹರಡಿಕೊಳ್ಳುವವು. ಆಲಿಕಲ್ಲಿನ ಮಳೆಯಿಂದ ನಾಶವಾಗದೆ ಉಳಿದುಕೊಂಡ ಪೈರುಗಳನ್ನೆಲ್ಲಾ ಮಿಡತೆಗಳು ತಿಂದುಬಿಡುವವು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆಗ ಯೆಹೋವನು ಮೋಶೆಗೆ, “ಐಗುಪ್ತ ದೇಶದ ಮೇಲೆ ನಿನ್ನ ಕೈಯನ್ನು ಚಾಚಿ, ಮಿಡತೆಗಳನ್ನು ಬರಮಾಡು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿರುವ ಪೈರುಗಳನ್ನೆಲ್ಲಾ ಮಿಡತೆಗಳು ತಿಂದುಬಿಡಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಸರ್ವೇಶ್ವರ ಮೋಶೆಗೆ, “ಈಜಿಪ್ಟ್ ದೇಶದ ಮೇಲೆ ಕೈಚಾಚಿ ಮಿಡಿತೆಗಳನ್ನು ಬರಮಾಡು. ಆನೆಕಲ್ಲಿನ ಮಳೆಯಿಂದ ನಾಶ ಆಗದೆ ಉಳಿದಿರುವ ಪೈರುಗಳನ್ನೆಲ್ಲಾ ಮಿಡತೆಗಳು ತಿಂದುಬಿಡಲಿ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆಗ ಯೆಹೋವನು ಮೋಶೆಗೆ - ಐಗುಪ್ತದೇಶದ ಮೇಲೆ ನಿನ್ನ ಕೈಚಾಚಿ ವಿುಡಿತೆಗಳನ್ನು ಬರಮಾಡು; ಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿರುವ ಪೈರುಗಳನ್ನೆಲ್ಲಾ ವಿುಡಿತೆಗಳು ತಿಂದುಬಿಡಲಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆಗ ಯೆಹೋವ ದೇವರು ಮೋಶೆಗೆ, “ಮಿಡತೆಗಳಿಗಾಗಿ ನಿನ್ನ ಕೈಯನ್ನು ಈಜಿಪ್ಟಿನ ಮೇಲೆ ಚಾಚು. ಅವು ಈಜಿಪ್ಟಿನ ಮೇಲೆ ಬಂದು, ಆಲಿಕಲ್ಲಿನ ಮಳೆಯು ದೇಶದಲ್ಲಿ ಉಳಿಸಿದ ಹಸುರಾದದ್ದನ್ನೆಲ್ಲಾ ತಿಂದುಬಿಡಲಿ,” ಎಂದರು. ಅಧ್ಯಾಯವನ್ನು ನೋಡಿ |