ವಿಮೋಚನಕಾಂಡ 10:13 - ಪರಿಶುದ್ದ ಬೈಬಲ್13 ಅಂತೆಯೇ ಮೋಶೆ ಈಜಿಪ್ಟ್ ದೇಶದ ಮೇಲೆ ಕೈ ಚಾಚಿದನು. ಆಗ ಯೆಹೋವನು ಪೂರ್ವದಿಂದ ಬಲವಾದ ಗಾಳಿ ಬೀಸುವಂತೆ ಮಾಡಿದನು. ಗಾಳಿಯು ಹಗಲಿರುಳು ಬೀಸಿತು. ಮುಂಜಾನೆಯಾದಾಗ ಆ ಗಾಳಿಯಿಂದ ಈಜಿಪ್ಟ್ ದೇಶಕ್ಕೆ ಮಿಡತೆಗಳು ಬಂದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಮೋಶೆ ತನ್ನ ಕೋಲನ್ನು ಐಗುಪ್ತ ದೇಶದ ಮೇಲೆ ಚಾಚಿದಾಗ, ಯೆಹೋವನು ಹಗಲಿರುಳು ಮೂಡಣದಿಕ್ಕಿನಿಂದ ಗಾಳಿಯನ್ನು ಬೀಸುವಂತೆ ಮಾಡಿದನು. ಹೊತ್ತಾರೆ ಗಾಳಿಯ ದೆಸೆಯಿಂದ ಮಿಡತೆಗಳು ಬಂದಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅಂತೆಯೇ ಮೋಶೆ ತನ್ನ ಕೋಲನ್ನು ಈಜಿಪ್ಟ್ ದೇಶದ ಮೇಲೆ ಚಾಚಿದನು. ಸರ್ವೇಶ್ವರ ಹಗಲಿರುಳು ಪೂರ್ವದಿಕ್ಕಿನಿಂದ ಗಾಳಿ ಬೀಸುವಂತೆ ಮಾಡಿದರು. ಆ ಗಾಳಿಯಿಂದಾಗಿ ಮುಂಜಾನೆಯಲ್ಲೇ ಮಿಡತೆಗಳು ಬಂದಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಮೋಶೆ ತನ್ನ ಕೋಲನ್ನು ಐಗುಪ್ತದೇಶದ ಮೇಲೆ ಚಾಚಿದಾಗ ಯೆಹೋವನು ಆ ಹಗಲಿರುಳು ಮೂಡಣದಿಕ್ಕಿನಿಂದ ಗಾಳಿಯನ್ನು ಬೀಸಮಾಡಿದನು. ಹೊತ್ತಾರೆ ಆ ಗಾಳಿಯ ದೆಸೆಯಿಂದ ವಿುಡಿತೆಗಳು ಬಂದಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಮೋಶೆಯು ತನ್ನ ಕೋಲನ್ನು ಈಜಿಪ್ಟ್ ದೇಶದ ಮೇಲೆ ಚಾಚಿದಾಗ, ಯೆಹೋವ ದೇವರು ಹಗಲಲ್ಲೂ ರಾತ್ರಿಯಲ್ಲೂ ಪೂರ್ವದಿಕ್ಕಿನಿಂದ ಗಾಳಿಯನ್ನು ಬರಮಾಡಿದರು. ಉದಯವಾದಾಗ ಆ ಗಾಳಿಯು ಮಿಡತೆಗಳನ್ನು ಅಟ್ಟಿಕೊಂಡು ಬಂದಿತು. ಅಧ್ಯಾಯವನ್ನು ನೋಡಿ |