ವಿಮೋಚನಕಾಂಡ 10:15 - ಪರಿಶುದ್ದ ಬೈಬಲ್15 ಮಿಡತೆಗಳು ನೆಲವನ್ನು ಮುಚ್ಚಿಕೊಂಡವು; ಇದರಿಂದಾಗಿ ನೆಲವು ಕಾಣದಂತಾಯಿತು. ಆಲಿಕಲ್ಲಿನ ಮಳೆಗೆ ನಾಶವಾಗದೆ ಉಳಿದಿದ್ದ ಎಲ್ಲಾ ಪೈರುಗಳನ್ನೂ ಮರಗಳಲ್ಲಿದ್ದ ಕಾಯಿಗಳನ್ನೂ ಅವು ತಿಂದುಬಿಟ್ಟವು. ಈಜಿಪ್ಟಿನಲ್ಲೆಲ್ಲಾ ಮರಗಳಲ್ಲಾಗಲಿ ಗಿಡಗಳಲ್ಲಾಗಲಿ ಹಸುರಾಗಿದ್ದ ಒಂದಾದರೂ ಉಳಿಯಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅವು ಭೂಮಿಯನ್ನೆಲ್ಲಾ ಮುಚ್ಚಿಕೊಂಡಿದ್ದರಿಂದ ನೆಲವು ಕಾಣದೇ ಹೋಯಿತು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿದ್ದ ಎಲ್ಲಾ ಪೈರುಗಳನ್ನೂ, ಮರಗಳಲ್ಲಿದ್ದ ಎಲ್ಲಾ ಕಾಯಿಗಳನ್ನೂ ಅವು ತಿಂದುಬಿಟ್ಟವು. ಐಗುಪ್ತ ದೇಶದಲ್ಲೆಲ್ಲಾ ಮರಗಳಲ್ಲಾಗಲಿ, ಹೊಲದ ಗಿಡಗಳಲ್ಲಾಗಲಿ ಹಸುರಾದದ್ದು ಒಂದೂ ಉಳಿಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನೆಲವೆಲ್ಲ ಕರ್ರಗೆ ಕಾಣಿಸುವಷ್ಟು ಅವು ಭೂಮಿಯನ್ನೆಲ್ಲಾ ಆವರಿಸಿಕೊಂಡವು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿದ್ದ ಪಚ್ಚೆ ಪೈರುಗಳನ್ನೂ ಗಿಡಮರ ಕಾಯಿಗಳನ್ನೂ ತಿಂದುಬಿಟ್ಟವು. ಈಜಿಪ್ಟ್ ದೇಶದಲ್ಲೆಲ್ಲಾ ಹಸುರಾದ ಗಿಡಮರಗಳೊಂದೂ ಉಳಿಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅವು ಭೂವಿುಯನ್ನೆಲ್ಲಾ ಮುಚ್ಚಿಕೊಂಡದ್ದರಿಂದ ನೆಲವು ಕಾಣದೆಹೋಯಿತು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿದ್ದ ಎಲ್ಲಾ ಪೈರುಗಳನ್ನೂ ಮರಗಳಲ್ಲಿದ್ದ ಎಲ್ಲಾ ಕಾಯಿಗಳನ್ನೂ ತಿಂದುಬಿಟ್ಟವು. ಐಗುಪ್ತ ದೇಶದಲ್ಲೆಲ್ಲಾ ಮರಗಳಲ್ಲಾಗಲಿ ಅಡವಿಯ ಗಿಡಗಳಲ್ಲಾಗಲಿ ಹಸುರಾದದ್ದು ಒಂದೂ ಉಳಿಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಏಕೆಂದರೆ ಅವು ಭೂಮಿಯನ್ನೆಲ್ಲಾ ಮುತ್ತಿಕೊಂಡದ್ದರಿಂದ, ಆ ದೇಶದಲ್ಲಿ ಕತ್ತಲಾಯಿತು. ಅವು ಭೂಮಿಯ ಎಲ್ಲಾ ಸೊಪ್ಪನ್ನೂ, ಆಲಿಕಲ್ಲಿನ ಮಳೆಯು ಉಳಿಸಿದ ಎಲ್ಲಾ ಫಲವನ್ನೂ ತಿಂದುಬಿಟ್ಟವು. ಮರಗಳಲ್ಲಾಗಲಿ, ಹೊಲದ ಗಿಡಗಳಲ್ಲಾಗಲಿ ಹಸುರಾದದ್ದು ಈಜಿಪ್ಟ್ ದೇಶದಲ್ಲೆಲ್ಲಿಯೂ ಉಳಿಯಲಿಲ್ಲ. ಅಧ್ಯಾಯವನ್ನು ನೋಡಿ |
ಬೆಯೋರನ ಮಗನಾದ ಬಿಳಾಮನನ್ನು ಕರೆಸುವುದಕ್ಕೆ ಕೆಲವು ಸಂದೇಶಕರನ್ನು ಕಳುಹಿಸಿದನು. ಬಿಳಾಮನು ಯೂಫ್ರೆಟೀಸ್ ನದಿಯ ಬಳಿ “ಪೆತೋರ್” ಎಂಬ ಸ್ಥಳದಲ್ಲಿದ್ದನು. ಬಿಳಾಮನ ಜನರು ಇಲ್ಲಿ ವಾಸಿಸುತ್ತಿದ್ದರು. ಬಾಲಾಕನು ತನ್ನ ಸಂದೇಶಕರನ್ನು ಕಳುಹಿಸಿ ಬಿಳಾಮನಿಗೆ, “ಒಂದು ಜನಾಂಗವು ಈಜಿಪ್ಟಿನಿಂದ ಬಂದಿದೆ. ಅವರು ದೇಶವನ್ನೆಲ್ಲಾ ಮುಚ್ಚಿಕೊಂಡು ನನ್ನ ಪಕ್ಕದಲ್ಲಿ ನೆಲೆಸಿದ್ದಾರೆ. ಅವರು ನಮಗಿಂತ ಬಲಿಷ್ಠರು.