Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 10:19 - ಪರಿಶುದ್ದ ಬೈಬಲ್‌

19 ಆದ್ದರಿಂದ ಯೆಹೋವನು ಗಾಳಿಯ ದಿಕ್ಕನ್ನು ಬದಲಾಯಿಸಿ, ಪಶ್ಚಿಮದಿಂದ ಬಲವಾದ ಗಾಳಿ ಬೀಸುವಂತೆ ಮಾಡಿದನು; ಅದು ಮಿಡತೆಗಳನ್ನು ಕೆಂಪು ಸಮುದ್ರಕ್ಕೆ ಹಾರಿಸಿತು. ಈಜಿಪ್ಟಿನಲ್ಲಿ ಒಂದು ಮಿಡತೆಯೂ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೆಹೋವನು ಪಶ್ಚಿಮದಿಂದ ಬಿರುಗಾಳಿ ಬೀಸುವಂತೆ ಮಾಡಿದನು. ಅದು ಆ ಮಿಡತೆಗಳನ್ನು ಎತ್ತಿಕೊಂಡು ಹೋಗಿ ಕೆಂಪುಸಮುದ್ರದೊಳಗೆ ಹಾಕಿಬಿಟ್ಟಿತು. ಐಗುಪ್ತ ದೇಶದ ಮೇರೆಗಳೊಳಗೆ ಒಂದು ಮಿಡತೆಯೂ ನಿಲ್ಲಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಸರ್ವೇಶ್ವರ ಪಶ್ಚಿಮದಿಂದ ಬಿರುಗಾಳಿ ಬೀಸುವಂತೆ ಮಾಡಿದರು. ಅದು ಆ ಮಿಡಿತೆಗಳನ್ನು ಬಡಿದುಕೊಂಡು ಹೋಗಿ ಕೆಂಪು ಸಮುದ್ರದೊಳಗೆ ಹಾಕಿಬಿಟ್ಟಿತು. ಈಜಿಪ್ಟ್ ದೇಶದ ಮೇರೆಗಳೊಳಗೆ ಒಂದು ಮಿಡಿತೆಯನ್ನೂ ನಿಲ್ಲಲು ಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯೆಹೋವನು ಪಶ್ಚಿಮದಿಂದ ಬಿರುಗಾಳಿ ಬೀಸುವಂತೆ ಮಾಡಿದನು; ಅದು ಆ ವಿುಡಿತೆಗಳನ್ನು ಎತ್ತಿಕೊಂಡು ಹೋಗಿ ಕೆಂಪುಸಮುದ್ರದೊಳಗೆ ಹಾಕಿಬಿಟ್ಟಿತು. ಐಗುಪ್ತದೇಶದ ಮೇರೆಗಳೊಳಗೆ ಒಂದು ವಿುಡಿತೆಯೂ ನಿಲ್ಲಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯೆಹೋವ ದೇವರು ಬಲವಾದ ಪಶ್ಚಿಮ ಗಾಳಿಯನ್ನು ಬೀಸುವಂತೆ ಮಾಡಿದರು. ಅದು ಮಿಡತೆಗಳನ್ನು ಎತ್ತಿಕೊಂಡು ಹೋಗಿ ಕೆಂಪು ಸಮುದ್ರದಲ್ಲಿ ಹಾಕಿತು. ಈಜಿಪ್ಟ್ ಮೇರೆಗಳಲ್ಲೆಲ್ಲಾ ಒಂದು ಮಿಡತೆಯಾದರೂ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 10:19
7 ತಿಳಿವುಗಳ ಹೋಲಿಕೆ  

ಉತ್ತರದಿಂದ ಬಂದ ದಂಡನ್ನು ನಿಮ್ಮ ದೇಶದಿಂದ ಹೊರಡಿಸುವೆನು. ಅವರನ್ನು ಒಣ ಬೆಂಗಾಡಿಗೆ ಕಳುಹಿಸುವೆನು. ಅವರಲ್ಲಿ ಕೆಲವರು ಪೂರ್ವದ ಸಮುದ್ರಕ್ಕೆ ಹೋಗುವರು, ಕೆಲವರು ಪಶ್ಚಿಮದ ಸಮುದ್ರಕ್ಕೆ ಹೋಗುವರು. ಅವರು ಭಯಂಕರ ಕೃತ್ಯಗಳನ್ನು ಮಾಡಿದುದರಿಂದ ಸತ್ತು ಕೊಳೆಯುವ ಸ್ಥಿತಿಗೆ ಬರಮಾಡುವೆನು. ಆಗ ಭಯಂಕರ ಹೊಲಸು ವಾಸನೆ ಇರುವದು.”


ಮೋಶೆಯಿಂದ ಮುನ್ನಡೆಸಲ್ಪಟ್ಟ ಜನರು ಕೆಂಪುಸಮುದ್ರವನ್ನು ಒಣಭೂಮಿಯೋ ಎಂಬಂತೆ ದಾಟಿದ್ದು ನಂಬಿಕೆಯಿಂದಲೇ. ಆದರೆ ಈಜಿಪ್ಟ್ ದೇಶದವರು ಕೆಂಪುಸಮುದ್ರವನ್ನು ದಾಟಲು ಪ್ರಯತ್ನಿಸಿ, ಮುಳುಗಿಹೋದರು.


ಆತನು ಫರೋಹನ ರಥಗಳನ್ನೂ ಸೈನಿಕರನ್ನೂ ಸಮುದ್ರದೊಳಗೆ ಕೆಡವಿದನು; ಫರೋಹನ ಮಹಾವೀರರನ್ನು ಕೆಂಪು ಸಮುದ್ರದಲ್ಲಿ ಮುಳುಗಿಸಿಬಿಟ್ಟನು.


ಆದ್ದರಿಂದ ಯೆಹೋವನು ಅವರನ್ನು ಕೆಂಪು ಸಮುದ್ರದ ಅರಣ್ಯದ ಮೂಲಕ ನಡೆಸಿದನು. ಇಸ್ರೇಲರು ಈಜಿಪ್ಟನ್ನು ಬಿಟ್ಟಾಗ ಯುದ್ಧವಸ್ತ್ರಗಳನ್ನು ಧರಿಸಿಕೊಂಡಿದ್ದರು.


ಮೋಶೆಯು ಫರೋಹನ ಬಳಿಯಿಂದ ಹೋಗಿ ಯೆಹೋವನಿಗೆ ಪ್ರಾರ್ಥಿಸಿದನು.


ಆದರೆ ಫರೋಹನು ಮತ್ತೆ ಹೃದಯವನ್ನು ಕಠಿಣಪಡಿಸಿಕೊಂಡು ಇಸ್ರೇಲರನ್ನು ಕಳುಹಿಸಿಕೊಡಲಿಲ್ಲ.


ಸಂಜೆಯ ನೆರಳಿನಂತೆ ನನ್ನ ಜೀವಮಾನವು ಕೊನೆಗೊಳ್ಳುತ್ತಿದೆ; ಗಾಳಿಯು ಬಡಿದುಕೊಂಡು ಹೋಗುವ ಮಿಡತೆಯಂತಾಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು