Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 10:2 - ಪರಿಶುದ್ದ ಬೈಬಲ್‌

2 ನಾನು ಈಜಿಪ್ಟಿನಲ್ಲಿ ಮಾಡಿದ ಸೂಚಕಕಾರ್ಯಗಳನ್ನೂ ಇತರ ಅದ್ಭುತಕಾರ್ಯಗಳನ್ನೂ ನೀವು ನಿಮ್ಮ ಮಕ್ಕಳಿಗೆ ಮತ್ತು ಮೊಮ್ಮಕ್ಕಳಿಗೆ ವಿವರಿಸಿ, ‘ಯೆಹೋವನು ಈಜಿಪ್ಟಿನವರನ್ನು ತನಗೆ ಇಷ್ಟ ಬಂದಂತೆ ಶಿಕ್ಷಿಸಿದನು’ ಎಂಬುದಾಗಿ ತಿಳಿಸಬೇಕೆಂದು ನಾನು ಫರೋಹನ ಮತ್ತು ಅವನ ಅಧಿಕಾರಿಗಳ ಹೃದಯಗಳನ್ನು ಕಠಿಣಪಡಿಸಿದ್ದೇನೆ. ಇದಲ್ಲದೆ ಈ ಮಹತ್ಕಾರ್ಯಗಳ ಮೂಲಕ ನಾನೇ ಯೆಹೋವನೆಂದು ತಿಳಿದುಕೊಳ್ಳುವಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇಸ್ರಾಯೇಲರು ತಮ್ಮ ಮಕ್ಕಳಿಗೂ, ಮೊಮ್ಮಕ್ಕಳಿಗೂ ನಾನು ಐಗುಪ್ತ್ಯರ ನಡುವೆ ನಡೆಸಿರುವ ಈ ಮಹತ್ಕಾರ್ಯಗಳನ್ನು ವಿವರಿಸಿ ಯೆಹೋವನು ಐಗುಪ್ತ್ಯರನ್ನು ತನಗೆ ಇಷ್ಟಬಂದ ಹಾಗೆ ಶಿಕ್ಷಿಸಿದನು ಎಂಬುದಾಗಿ ತಿಳಿಸಬೇಕು. ಹೀಗೆ ನಾನು ಫರೋಹನ ಹೃದಯವನ್ನು, ಅವನ ಪರಿವಾರದವರ ಹೃದಯಗಳನ್ನೂ ಕಠಿಣಮಾಡಿದ್ದೇನೆ. ಇದಲ್ಲದೆ ಈ ಮಹತ್ಕಾರ್ಯಗಳಿಂದ ನೀವು ನನ್ನನ್ನೇ ಯೆಹೋವನೆಂದು ತಿಳಿದುಕೊಳ್ಳುವಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಇಸ್ರಯೇಲರು ತಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ಈ ಸೂಚಕಕಾರ್ಯಗಳನ್ನು ತಿಳಿಸಬೇಕು; ಅಲ್ಲದೆ ಸರ್ವೇಶ್ವರ ಆದ ನಾನು ಈಜಿಪ್ಟಿನವರನ್ನು ಇಷ್ಟಬಂದ ಹಾಗೆ ಆಡಿಸಿ ದಂಡಿಸಿದೆನೆಂದು ತಿಳಿಸಬೇಕು. ಹೀಗೆ ನಾನೇ ಸರ್ವೇಶ್ವರನೆಂದು ಈ ಸೂಚಕಕಾರ್ಯಗಳಿಂದ ನೀವು ತಿಳಿದುಕೊಳ್ಳುವಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇಸ್ರಾಯೇಲ್ಯರು ತಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ನಾನು ಐಗುಪ್ತ್ಯರ ನಡುವೆ ನಡಿಸಿರುವ ಮಹತ್ಕಾರ್ಯಗಳನ್ನು ವಿವರಿಸಿ - ಯೆಹೋವನು ಐಗುಪ್ತ್ಯರನ್ನು ತನಗೆ ಇಷ್ಟಬಂದಂತೆ ಆಡಿಸಿ ಶಿಕ್ಷಿಸಿದನು ಎಂಬದಾಗಿ ತಿಳಿಸುವದಕ್ಕೂ ನಾನು ಫರೋಹನ ಹೃದಯವನ್ನೂ ಅವನ ಪರಿವಾರದವರ ಹೃದಯಗಳನ್ನೂ ಮೊಂಡುಮಾಡಿದ್ದೇನೆ. ಇದಲ್ಲದೆ ಈ ಮಹತ್ಕಾರ್ಯಗಳಿಂದ ನೀವು ನನ್ನನ್ನೇ ಯೆಹೋವನೆಂದು ತಿಳುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇದಲ್ಲದೆ ನೀನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ನಾನು ಈಜಿಪ್ಟಿನಲ್ಲಿ ಏನು ಮಾಡಿದೆನೆಂದೂ, ನಾನೇ ಯೆಹೋವ ದೇವರೆಂದೂ ನೀವು ತಿಳಿದುಕೊಳ್ಳುವಂತೆ ನಾನು ಅವರ ಮಧ್ಯದಲ್ಲಿ ಮಾಡಿದ ಅದ್ಭುತ ಸೂಚಕಕಾರ್ಯಗಳನ್ನು ತಿಳಿಸಬೇಕು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 10:2
22 ತಿಳಿವುಗಳ ಹೋಲಿಕೆ  

ಇವುಗಳನ್ನು ನೀವು ನಿಮ್ಮ ಮಕ್ಕಳಿಗೆ ತಿಳಿಸುವಿರಿ. ಮತ್ತು ನಿಮ್ಮ ಮಕ್ಕಳು ಅವರ ಮಕ್ಕಳಿಗೆ ತಿಳಿಸುವರು. ಮತ್ತು ನಿಮ್ಮ ಮೊಮ್ಮಕ್ಕಳು ಅವರ ನಂತರದ ಪೀಳಿಗೆಗೆ ತಿಳಿಸುವರು.


ಆದರೆ ನೀವು ನೋಡಿದ್ದನ್ನು ನಿಮ್ಮ ಜೀವಮಾನವೆಲ್ಲಾ ಜಾಗ್ರತೆಯುಳ್ಳವರಾಗಿದ್ದು ಮರೆಯದೆ ಅದನ್ನು ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸಬೇಕು.


“ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು, ‘ನೀವು ಹೀಗೇಕೆ ಮಾಡುತ್ತೀರಿ?’ ಎಂದು ಕೇಳುವಾಗ ನೀವು, ‘ಯೆಹೋವನು ನಮ್ಮನ್ನು ಈಜಿಪ್ಟಿನಿಂದ ತನ್ನ ಮಹಾಶಕ್ತಿಯಿಂದ ರಕ್ಷಿಸಿದನು. ನಾವು ಅಲ್ಲಿ ಗುಲಾಮರಾಗಿದ್ದೆವು, ಆದರೆ ಯೆಹೋವನು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದನು.


ದೇವರೇ, ಪೂರ್ವಕಾಲದಲ್ಲಿ ನೀನು ಮಾಡಿದ ಮಹತ್ಕಾರ್ಯಗಳ ಕುರಿತು ಕೇಳಿದ್ದೇವೆ. ಅವುಗಳ ಕುರಿತು ನಮ್ಮ ಪೂರ್ವಿಕರೇ ನಮಗೆ ತಿಳಿಸಿದರು.


ಆದ್ದರಿಂದ ಆತನೇ ಯೆಹೋವನೆಂದು ನಿನಗೆ ತಿಳಿಯಲೆಂದು ನನ್ನ ಕೈಯಲ್ಲಿರುವ ಕೋಲಿನಿಂದ ನೈಲ್ ನದಿಯ ನೀರನ್ನು ಹೊಡೆಯುವೆನು; ಆ ನದಿಯ ನೀರು ರಕ್ತವಾಗುವುದು.


ತಂದೆಗಳೇ, ನಿಮ್ಮ ಮಕ್ಕಳನ್ನು ಸಿಟ್ಟಿಗೆಬ್ಬಿಸದೆ ಪ್ರಭುವಿನ ಉಪದೇಶದಿಂದಲೂ ಬಾಲಶಿಕ್ಷೆಯಿಂದಲೂ ಬೆಳೆಸಿರಿ.


ನಾನು ಅವರಿಗೆ ಕೊಡುವುದಾಗಿ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಕರೆದುಕೊಂಡು ಬಂದೆನು. ಆದರೆ ಎತ್ತರವಾದ ಬೆಟ್ಟವನ್ನಾಗಲಿ ಎಲೆಗಳುಳ್ಳ ಮರವನ್ನಾಗಲಿ ಅವರು ಕಂಡಾಗಲೆಲ್ಲಾ ಅವರು ಅಲ್ಲಿಗೆ ಹೋದರು ಮತ್ತು ವಿಗ್ರಹಗಳನ್ನು ಪೂಜಿಸಿದರು. ಅಲ್ಲಿ ಅವರು ಯಜ್ಞಗಳನ್ನೂ ನನ್ನನ್ನು ಕೋಪಗೊಳಿಸುವ ಕಾಣಿಕೆಗಳನ್ನೂ ಧೂಪವನ್ನೂ ಮತ್ತು ಪಾನದ್ರವ್ಯಾರ್ಪಣೆಗಳನ್ನೂ ಅರ್ಪಿಸಿದರು.


ಅವರು ತಮ್ಮ ಕಾಣಿಕೆಗಳಿಂದ ತಮ್ಮನ್ನೆ ಹೊಲಸು ಮಾಡಿಕೊಳ್ಳಲು ಅವರನ್ನು ಬಿಟ್ಟುಕೊಟ್ಟೆನು. ಅವರು ತಮ್ಮ ವಿಗ್ರಹಗಳಿಗೆ ತಮ್ಮ ಸ್ವಂತ ಚೊಚ್ಚಲು ಗಂಡುಮಕ್ಕಳನ್ನು ಆಹುತಿಕೊಡಲು ಪ್ರಾರಂಭಿಸಿದರು. ಈ ರೀತಿಯಾಗಿ ನಾನು ಆ ಜನರನ್ನು ನಾಶಮಾಡುವೆನು. ಆಗ ಅವರು ನಾನು ಒಡೆಯನಾದ ಯೆಹೋವನೆಂದು ತಿಳಿದುಕೊಳ್ಳುವರು.’


ನಾನು ವೃದ್ಧನಾಗಿರುವೆ; ನನ್ನ ಕೂದಲೂ ನರೆತುಹೋಗಿದೆ. ನನ್ನ ದೇವರೇ, ನನ್ನನ್ನು ಕೈಬಿಡಬೇಡ. ನಿನ್ನ ಬಲವನ್ನೂ ಪ್ರತಾಪವನ್ನೂ ಮುಂದಿನ ತಲೆಮಾರುಗಳವರಿಗೆಲ್ಲಾ ಪ್ರಕಟಿಸುವೆನು.


ಆಗ ಜನರೆಲ್ಲರು, “ನೀತಿವಂತರಿಗೆ ಪ್ರತಿಫಲ ಸಿಕ್ಕೇಸಿಕ್ಕುವುದು; ಲೋಕಕ್ಕೆ ತೀರ್ಪು ನೀಡುವ ದೇವರಿರುವುದು ಸತ್ಯವೇ ಸರಿ” ಎಂದು ಹೇಳುವರು.


ನಾನು ಈಜಿಪ್ಟಿನ ವಿರುದ್ಧವಾಗಿ ನನ್ನ ಕೈಯನ್ನು ಚಾಚಿ ನನ್ನ ಜನರನ್ನು ಅವರ ದೇಶದಿಂದ ಬಿಡುಗಡೆ ಮಾಡಿದಾಗ, ನಾನೇ ಯೆಹೋವನೆಂದು ಅವರು ತಿಳಿದುಕೊಳ್ಳುವರು.”


ದೇವರಾದ ಯೆಹೋವನೇ, ನಾನು ಕೇಳಿದ ಪ್ರಕಾರ ನೀನೇ ದೊಡ್ಡವನು; ನಿನ್ನ ಸಮಾನರು ಬೇರೆ ಯಾರೂ ಇಲ್ಲ; ನಿನ್ನ ಹೊರತು ಬೇರೆ ದೇವರಿಲ್ಲ.


ಅಂತೆಯೇ ಆರೋನನು ಈಜಿಪ್ಟಿನ ನೀರುಗಳ ಮೇಲೆ ತನ್ನ ಕೈಯನ್ನು ಚಾಚಿದಾಗ ಕಪ್ಪೆಗಳು ನೀರುಗಳಿಂದ ಹೊರಬಂದು ಈಜಿಪ್ಟ್ ದೇಶವನ್ನು ಆವರಿಸಿಕೊಳ್ಳತೊಡಗಿದವು.


ನಾನು ಫರೋಹನ ಹೃದಯವನ್ನು ಕಠಿಣಪಡಿಸುವುದರಿಂದ ಅವನು ನಿಮ್ಮನ್ನು ಬೆನ್ನಟ್ಟುವನು. ಆದರೆ ನಾನು ಫರೋಹನನ್ನು ಮತ್ತು ಅವನ ಸೈನ್ಯವನ್ನು ಸೋಲಿಸುವೆನು. ಇದು ನನಗೆ ಗೌರವವನ್ನು ತರುವುದು. ಆಗ ನಾನೇ ಯೆಹೋವನೆಂದು ಈಜಿಪ್ಟಿನ ಜನರು ತಿಳಿದುಕೊಳ್ಳುವರು” ಎಂದು ಹೇಳಿದನು. ಇಸ್ರೇಲರು ದೇವರಿಗೆ ವಿಧೇಯರಾಗಿ ಆತನು ಹೇಳಿದ್ದನ್ನು ಮಾಡಿದರು.


ಆಗ ನಾನೇ ಯೆಹೋವನೆಂದು ಈಜಿಪ್ಟಿಗೆ ತಿಳಿಯುವುದು. ನಾನು ಫರೋಹನನ್ನೂ ಅವನ ರಾಹುತರನ್ನೂ ರಥಗಳನ್ನೂ ಸೋಲಿಸಿದಾಗ ಅವರು ನನ್ನನ್ನು ಸನ್ಮಾನಿಸುವರು” ಎಂದು ಹೇಳಿದನು.


ದೇವರೇ, ನಿನ್ನ ಮಹಾಶಕ್ತಿಯಿಂದ ನೀನು ಈ ದೇಶವನ್ನು ಅನ್ಯಜನಾಂಗಗಳಿಂದ ನಮಗೆ ಕೊಟ್ಟಿರುವೆ. ಆ ವಿದೇಶಿಯರನ್ನು ನೀನು ಜಜ್ಜಿಹಾಕಿದೆ. ಈ ದೇಶದಿಂದ ನೀನು ಅವರನ್ನು ಹೊರಡಿಸಿಬಿಟ್ಟೆ.


ನಾವು ಅವುಗಳನ್ನು ಕಿವಿಯಾರೆ ಕೇಳಿದ್ದೇವೆ. ನಮ್ಮ ಪೂರ್ವಿಕರೇ ಅವುಗಳನ್ನು ನಮಗೆ ಹೇಳಿದರು.


ನನ್ನ ಹಾಗೆ ಈ ದಿನ ಜೀವಿಸುವವರೆಲ್ಲಾ ನಿನ್ನನ್ನು ಕೊಂಡಾಡುವರು. ತಂದೆಯು ತನ್ನ ಮಕ್ಕಳಿಗೆ ನಿನ್ನ ಮೇಲೆ ಭರವಸವಿಡಲು ಕಲಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು