Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 10:21 - ಪರಿಶುದ್ದ ಬೈಬಲ್‌

21 ಬಳಿಕ ಯೆಹೋವನು ಮೋಶೆಗೆ, “ನಿನ್ನ ಕೈಯನ್ನು ಆಕಾಶದ ಕಡೆಗೆ ಚಾಚು. ಆಗ ಕಾರ್ಗತ್ತಲೆಯು ಈಜಿಪ್ಟನ್ನು ಆವರಿಸುವುದು. ಆ ಕಾರ್ಗತ್ತಲೆಯಿಂದ ಜನರು ತಡವರಿಸುತ್ತಾ ನಡೆಯುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ತರುವಾಯ ಯೆಹೋವನು ಮೋಶೆಗೆ, “ಆಕಾಶಕ್ಕೆ ನಿನ್ನ ಕೈಯನ್ನು ಚಾಚು. ಆಗ ಐಗುಪ್ತ ದೇಶದಲ್ಲೆಲ್ಲಾ ಕತ್ತಲು ಉಂಟಾಗುವುದು. ಆ ಕತ್ತಲೆಯಿಂದಾಗಿ ಜನರು ತಡವರಿಸುತ್ತಾ ನಡೆಯುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆ ಬಳಿಕ ಸರ್ವೇಶ್ವರ ಮೋಶೆಗೆ, “ಆಕಾಶದತ್ತ ನಿನ್ನ ಕೈಚಾಚು. ಆಗ ಈಜಿಪ್ಟ್ ದೇಶದಲ್ಲೆಲ್ಲಾ ಕತ್ತಲೆಯುಂಟಾಗುವುದು. ಜನರು ತಡವರಿಸಿ ನಡೆಯಬೇಕಾಗುವಷ್ಟು ಕತ್ತಲೆ ಉಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ತರುವಾಯ ಯೆಹೋವನು ಮೋಶೆಗೆ - ಆಕಾಶಕ್ಕೆ ನಿನ್ನ ಕೈ ಚಾಚು; ಆಗ ಐಗುಪ್ತದೇಶದಲ್ಲೆಲ್ಲಾ ಕತ್ತಲುಂಟಾಗುವದು; ಆ ಕತ್ತಲಿನಿಂದ ಜನರು ತಡವರಿಸುತ್ತಾ ನಡೆಯುವರೆಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗ ಯೆಹೋವ ದೇವರು ಮೋಶೆಗೆ, “ಈಜಿಪ್ಟ್ ದೇಶದಲ್ಲಿ ಕತ್ತಲೆ ಕವಿದು ಗಾಡಾಂಧಕಾರವಾಗುವಂತೆ ನಿನ್ನ ಕೈಯನ್ನು ಆಕಾಶದ ಕಡೆಗೆ ಚಾಚು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 10:21
23 ತಿಳಿವುಗಳ ಹೋಲಿಕೆ  

ದೇವದೂತರು ಅಧಿಕಾರವನ್ನು ಹೊಂದಿದ್ದರೂ ಅದನ್ನು ಉಳಿಸಿಕೊಳ್ಳಲಾರದೆ ಸ್ವಂತ ವಾಸಸ್ಥಾನವನ್ನು ಬಿಟ್ಟುಹೋದದ್ದನ್ನು ನೆನಸಿಕೊಳ್ಳಿರಿ. ಆದ್ದರಿಂದ ಪ್ರಭುವು ಈ ದೇವದೂತರನ್ನು ಅಂಧಕಾರದಲ್ಲಿಟ್ಟನು. ಅವರನ್ನು ಶಾಶ್ವತವಾದ ಬೇಡಿಗಳಿಂದ ಬಂಧಿಸಲಾಯಿತು. ಮಹಾದಿನದಂದು ಅವರಿಗೆ ತೀರ್ಪು ನೀಡುವುದಕ್ಕಾಗಿ ಆತನು ಅವರನ್ನು ಅಲ್ಲಿಟ್ಟಿದ್ದಾನೆ.


ಈ ಸುಳ್ಳುಬೋಧಕರು ನೀರಿಲ್ಲದ ಒರತೆಗಳಂತಿದ್ದಾರೆ. ಅವರು ಬಿರುಗಾಳಿಯಿಂದ ಬಡಿದುಕೊಂಡು ಹೋಗುವ ಮೋಡಗಳಂತಿದ್ದಾರೆ. ಅವರಿಗಾಗಿ ಒಂದು ಕಗ್ಗತ್ತಲಾದ ಸ್ಥಳವನ್ನು ಕಾದಿರಿಸಲಾಗಿದೆ.


ದೇವದೂತರು ಪಾಪಗಳನ್ನು ಮಾಡಿದಾಗ, ದೇವರು ಅವರನ್ನು ದಂಡಿಸದೆ ಬಿಡಲಿಲ್ಲ. ಆತನು ಅವರನ್ನು ನರಕಕ್ಕೆ ದಬ್ಬಿದನು. ಕತ್ತಲೆಯ ಗುಂಡಿಗಳಿಗೆ ಹಾಕಿದನು. ಅವರಿಗೆ ನ್ಯಾಯತೀರ್ಪಾಗುವವರೆಗೂ ಅವರು ಅಲ್ಲಿಯೇ ಇರುವರು.


ಇಷ್ಟರಲ್ಲಿ ಹೆಚ್ಚುಕಡಿಮೆ ಮಧ್ಯಾಹ್ನವಾಗಿತ್ತು. ಆದರೆ ಇಡೀ ಪ್ರದೇಶವು ಮಧ್ಯಾಹ್ನ ಮೂರು ಗಂಟೆಯ ತನಕ ಕತ್ತಲಾಯಿತು.


ಮಧ್ಯಾಹ್ನವಾದಾಗ, ಇಡೀ ದೇಶವೇ ಕತ್ತಲಾಯಿತು. ಈ ಕತ್ತಲೆಯು ಸಾಯಂಕಾಲ ಮೂರು ಗಂಟೆಯವರೆಗೆ ಇತ್ತು.


ಅಂದು ಮಧ್ಯಾಹ್ನ ಹನ್ನೆರಡು ಗಂಟೆಯಿಂದ ಮೂರು ಗಂಟೆಯವರೆಗೆ ದೇಶದಲ್ಲೆಲ್ಲಾ ಕತ್ತಲೆ ಕವಿಯಿತು.


ಆದರೆ ದುಷ್ಟರ ಜೀವಿತವು ರಾತ್ರಿಯ ಕತ್ತಲೆಯಂತಿದೆ. ಅವರು ಕತ್ತಲೆಯಲ್ಲಿ ತಪ್ಪಿಸಿಕೊಂಡಿದ್ದು ತಮಗೆ ಕಾಣದ ವಸ್ತುಗಳ ಮೇಲೆ ಎಡವಿ ಬೀಳುತ್ತಾರೆ.


ದೇವರು ಕಾರ್ಗತ್ತಲೆಯನ್ನು ಕಳುಹಿಸಿದನು; ಆದರೂ ಈಜಿಪ್ಟಿನವರು ಆತನಿಗೆ ಕಿವಿಗೊಡಲಿಲ್ಲ.


ಹಗಲಿನಲ್ಲೂ ಕುರುಡರಂತೆ ನೀವು ತಡವರಿಸುವಿರಿ. ನೀವು ಮಾಡುವ ಕಾರ್ಯವೆಲ್ಲವೂ ನಿಷ್ಫಲವಾಗುವವು. ಜನರು ನಿಮ್ಮನ್ನು ಬಾಧಿಸಿ ನಿಮ್ಮಲ್ಲಿರುವದನ್ನೆಲ್ಲಾ ದೋಚಿಕೊಂಡು ಹೋಗುವರು. ನಿಮ್ಮನ್ನು ರಕ್ಷಿಸಲು ಯಾರೂ ಬರುವುದಿಲ್ಲ.


ಯೆಹೋವನು ಮೋಶೆಗೆ, “ನಿನ್ನ ಕೈಯನ್ನು ಆಕಾಶದ ಕಡೆಗೆ ಚಾಚು; ಆಗ ಈಜಿಪ್ಟಿನಲ್ಲೆಲ್ಲಾ ಆಲಿಕಲ್ಲಿನ ಮಳೆ ಬೀಳತೊಡಗುವುದು. ಆಲಿಕಲ್ಲಿನ ಮಳೆಯು ಜನರ, ಪ್ರಾಣಿಗಳ ಮತ್ತು ಈಜಿಪ್ಟಿನ ಹೊಲಗಳಲ್ಲಿರುವ ಎಲ್ಲಾ ಸಸ್ಯಗಳ ಮೇಲೆ ಬೀಳುವುದು” ಎಂದು ಹೇಳಿದನು.


ಇವರು ಸಮುದ್ರದಲ್ಲಿನ ಭೀಕರವಾದ ಅಲೆಗಳಂತಿದ್ದಾರೆ. ಈ ಅಲೆಗಳು ನೊರೆಯನ್ನು ಕಾರುವಂತೆ ಇವರು ನಾಚಿಕೆಯಿಲ್ಲದ ಕೆಲಸಗಳನ್ನು ಮಾಡುತ್ತಾರೆ. ಈ ಜನರು ಆಕಾಶದಲ್ಲಿ ಅಲೆಯುವ ನಕ್ಷತ್ರಗಳಂತಿದ್ದಾರೆ. ಇವರಿಗಾಗಿ ಶಾಶ್ವತವಾದ ಕಾರ್ಗತ್ತಲಿನ ಸ್ಥಳವನ್ನು ಕಾದಿರಿಸಲಾಗಿದೆ.


ಮಗುವು ಹುಟ್ಟುವಾಗಲೇ ಸತ್ತುಹೋದರೆ ಅದಕ್ಕೆ ನಿಜವಾಗಿಯೂ ಅರ್ಥವಿಲ್ಲ. ಅದು ಹೆಸರನ್ನೂ ಹೊಂದಿಲ್ಲದೆ ಕತ್ತಲೆಯ ಗುಂಡಿಯಲ್ಲಿ ಹೂಳಲ್ಪಡುವುದು.


ಅದು ಈ ರೀತಿಯಿದೆ: ಜ್ಞಾನಿಯು ತನ್ನ ಮಾರ್ಗವನ್ನು ತಿಳಿದುಕೊಳ್ಳಲು ತನ್ನ ಮನಸ್ಸನ್ನು ಕಣ್ಣುಗಳಂತೆ ಉಪಯೋಗಿಸುವನು. ಮೂಢನಾದರೋ ಕತ್ತಲೆಯಲ್ಲಿ ನಡೆದುಹೋಗುವನು. ಆದರೆ ಜ್ಞಾನಿಗೂ ಮೂಢನಿಗೂ ಒಂದೇ ಗತಿಯೆಂದು ಕಂಡುಕೊಂಡೆನು; ಅವರಿಬ್ಬರೂ ಸಾಯುವರು.


ಆತನು ಈಜಿಪ್ಟ್ ಜನರಿಗೆ ತನ್ನ ಭಯಂಕರವಾದ ಕೋಪವನ್ನು ತೋರಿದನು. ಆತನು ತನ್ನ ಸಂಹಾರ ದೂತರನ್ನು ಅವರಿಗೆ ವಿರೋಧವಾಗಿ ಕಳುಹಿಸಿದನು.


ಯೆಹೋವನೇ, ಅವರ ರಸ್ತೆಯು ಕತ್ತಲಾಗಿರಲಿ; ಜಾರುತ್ತಿರಲಿ. ಯೆಹೋವನ ದೂತನು ಅವರನ್ನು ಹಿಂದಟ್ಟಲಿ.


ನಾಲ್ಕನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಸೂರ್ಯನಲ್ಲಿ ಮೂರನೆಯ ಒಂದು ಭಾಗ, ಚಂದ್ರನಲ್ಲಿ ಮೂರನೆಯ ಒಂದು ಭಾಗ ಮತ್ತು ನಕ್ಷತ್ರಗಳಲ್ಲಿ ಮೂರನೆಯ ಒಂದು ಭಾಗ ಬಡಿಯಲ್ಪಟ್ಟು ಅವುಗಳಲ್ಲಿ ಮೂರನೆಯ ಒಂದು ಭಾಗ ಕತ್ತಲಾಯಿತು. ಹಗಲಿನಲ್ಲಿಯೂ ರಾತ್ರಿಯಲ್ಲಿಯೂ ಮೂರನೆಯ ಒಂದು ಭಾಗಕ್ಕೆ ಬೆಳಕಿಲ್ಲದಂತಾಯಿತು.


ಯೆಹೋವನು ಮೋಶೆಗೆ, “ನೀನು ಆರೋನನಿಗೆ, ‘ನಿನ್ನ ಕೈಯಲ್ಲಿರುವ ಊರುಗೋಲನ್ನು ನದಿಗಳ, ಕಾಲುವೆಗಳ, ಕೆರೆಗಳ ಮತ್ತು ನೀರಿರುವ ಪ್ರತಿಯೊಂದು ಸ್ಥಳದ ಮೇಲೆ ಚಾಚು’ ಎಂದು ಹೇಳು. ಅವನು ಚಾಚಿದಾಗ ನೀರೆಲ್ಲಾ ರಕ್ತವಾಗುವುದು. ಮರದ ಮತ್ತು ಕಲ್ಲಿನ ಪಾತ್ರೆಗಳಲ್ಲಿರುವ ನೀರು ಸಹ ರಕ್ತವಾಗುವುದು” ಎಂದು ಹೇಳಿದನು.


ನೀನು ಕಾಣೆಯಾಗುವಂತೆ ನಾನು ಮಾಡುವೆನು. ಆಕಾಶವನ್ನು ಮುಚ್ಚಿ ನಕ್ಷತ್ರಗಳನ್ನು ಹೊಳೆಯದಂತೆ ಮಾಡುವೆನು. ಸೂರ್ಯನನ್ನು ಮೋಡವು ಮುಚ್ಚುವಂತೆ ಮಾಡುವೆನು. ಚಂದ್ರನು ಪ್ರಕಾಶಿಸದಂತೆ ಮಾಡುವೆನು.


ನಿಮ್ಮ ದೇವರಾದ ಯೆಹೋವನು ನಿಮ್ಮ ಮುಂದೆ ಹೋಗಿ ಅವರೊಂದಿಗೆ ಯುದ್ಧಮಾಡುವನು. ಈಜಿಪ್ಟ್‌ನಲ್ಲಿ ಆತನು ಮಾಡಿದಂತೆಯೇ ಇಲ್ಲಿಯೂ ಮಾಡುವನು.


ಬೇರೊಂದು ಜನಾಂಗದೊಳಗಿಂದ ಜನರನ್ನು ತನಗೋಸ್ಕರ ತೆಗೆದುಕೊಳ್ಳಲು ಬೇರೆ ಯಾವ ದೇವರಾದರೂ ಎಂದಾದರೂ ಪ್ರಯತ್ನಿಸಿದ್ದುಂಟೇ? ಇಲ್ಲ! ಆದರೆ ದೇವರಾದ ಯೆಹೋವನು ಇಂಥ ಮಹಾಕಾರ್ಯಗಳನ್ನು ಮಾಡುವುದನ್ನು ನೀವು ನೋಡಿದ್ದೀರಿ! ಆತನು ನಿಮಗೆ ತನ್ನ ಶಕ್ತಿಯನ್ನು, ಬಲವನ್ನು, ಅದ್ಭುತಕಾರ್ಯಗಳನ್ನು ಮತ್ತು ಆಶ್ಚರ್ಯಕರವಾದ ಕಾರ್ಯಗಳನ್ನು ತೋರಿಸಿದ್ದಾನೆ. ಆತನು ಈಜಿಪ್ಟಿನ ಮೇಲೆ ಬರಮಾಡಿದ ವಿಪತ್ತುಗಳನ್ನು ಮತ್ತು ಭಯಂಕರವಾದ ಘಟನೆಗಳನ್ನು ನೀವು ನೋಡಿದ್ದೀರಿ!


ಯುಕ್ತಿವಂತರು ಹಗಲಿನಲ್ಲೂ ಕತ್ತಲೆಗೆ ಓಡಿಹೋಗುವರು; ನಡುಮಧ್ಯಾಹ್ನದಲ್ಲಿ ಕತ್ತಲೆಯಲ್ಲೋ ಎಂಬಂತೆ ಮುಗ್ಗರಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು