Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 10:23 - ಪರಿಶುದ್ದ ಬೈಬಲ್‌

23 ಈ ಮೂರು ದಿನಗಳಲ್ಲಿ ಯಾರೂ ಒಬ್ಬರನ್ನೊಬ್ಬರು ನೋಡಲಾಗಲಿಲ್ಲ. ಯಾವ ಸ್ಥಳಕ್ಕೂ ಹೋಗಲಿಲ್ಲ. ಆದರೆ ಇಸ್ರೇಲರು ವಾಸಿಸುತ್ತಿದ್ದ ಸ್ಥಳಗಳಲ್ಲಿ ಬೆಳಕಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಮೂರು ದಿನಗಳವರೆಗೆ ಅವರು ಒಬ್ಬರನ್ನೊಬ್ಬರು ನೋಡಲಿಲ್ಲ. ಯಾರೂ ತಮ್ಮ ಸ್ಥಳದಿಂದ ಏಳಲೂ ಇಲ್ಲ. ಆದರೆ ಇಸ್ರಾಯೇಲರು ವಾಸವಾಗಿದ್ದ ಸ್ಥಳಗಳಲ್ಲಿ ಬೆಳಕು ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆ ಮೂರು ದಿವಸ ಒಬ್ಬರನ್ನೊಬ್ಬರು ನೋಡಲಾಗಲಿಲ್ಲ; ತಾವಿದ್ದ ಸ್ಥಳದಿಂದ ಏಳಲಿಲ್ಲ. ಆದರೆ ಇಸ್ರಯೇಲರೆಲ್ಲರು ವಾಸವಾಗಿದ್ದ ಸ್ಥಳಗಳಲ್ಲಿ ಬೆಳಕಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಮೂರು ದಿವಸವೂ ಒಬ್ಬರಿಗೊಬ್ಬರು ಕಾಣಿಸಲಿಲ್ಲ; ಯಾವನೂ ತಾನಿರುವ ಸ್ಥಳದಿಂದ ಏಳಲಿಲ್ಲ. ಆದರೆ ಇಸ್ರಾಯೇಲ್ಯರು ವಾಸವಾಗಿದ್ದ ಸ್ಥಳಗಳಲ್ಲಿ ಬೆಳಕೇ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಮೂರು ದಿನಗಳವರೆಗೆ ಅವರು ಒಬ್ಬರನ್ನೊಬ್ಬರು ನೋಡಲಾಗಲಿಲ್ಲ. ಯಾರೂ ತಮ್ಮ ಸ್ಥಳವನ್ನು ಬಿಟ್ಟು ಏಳಲಿಲ್ಲ. ಆದರೆ ಇಸ್ರಾಯೇಲರಿಗೆಲ್ಲಾ ಅವರು ವಾಸಿಸುವ ಸ್ಥಳದಲ್ಲಿ ಅವರಿಗೆ ಬೆಳಕಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 10:23
15 ತಿಳಿವುಗಳ ಹೋಲಿಕೆ  

ಆದರೆ ನಾನು ಈಜಿಪ್ಟಿನವರೊಡನೆ ವರ್ತಿಸುವಂತೆ ಇಸ್ರೇಲರೊಡನೆ ವರ್ತಿಸುವುದಿಲ್ಲ. ನನ್ನ ಜನರು ವಾಸಿಸುವ ಗೋಷೆನ್ ಪ್ರದೇಶದಲ್ಲಿ ಯಾವ ಹುಳವೂ ಇರುವುದಿಲ್ಲ. ನಾನೇ ಭೂಲೋಕವನ್ನು ಆಳುವ ಯೆಹೋವನೆಂದು ಆಗ ನೀನು ತಿಳಿದುಕೊಳ್ಳುವೆ.


ನೀವಾದರೋ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನರೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ. ದೇವರು ತಾನು ಮಾಡಿದ ಅತ್ಯಾಶ್ಚರ್ಯ ಸಂಗತಿಗಳನ್ನು ತಿಳಿಸಲು ನಿಮ್ಮನ್ನು ಅಂಧಕಾರದಿಂದ (ಪಾಪಗಳಿಂದ) ತನ್ನ ಅದ್ಭುತವಾದ ಬೆಳಕಿಗೆ ಕರೆತಂದನು.


ಅವರು ಹಿಂದೆಂದೂ ತಿಳಿಯದ ರೀತಿಯಲ್ಲಿ ನಾನು ಕುರುಡರನ್ನು ನಡೆಸುವೆನು. ಕುರುಡರು ಹೋಗಿರದ ಸ್ಥಳಕ್ಕೆ ನಾನು ಅವರನ್ನು ನಡಿಸುವೆನು. ನಾನು ಅವರಿಗಾಗಿ ಕತ್ತಲೆಯನ್ನು ಬೆಳಕಾಗಿ ಮಾರ್ಪಡಿಸುವೆನು. ನಾನು ಕೊರಕಲು ನೆಲವನ್ನು ಸಮತಟ್ಟಾಗಿ ಮಾಡುವೆನು. ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು. ನನ್ನ ಜನರನ್ನು ನಾನು ಎಂದಿಗೂ ತೊರೆಯುವದಿಲ್ಲ.


ಆದರೆ ಇಸ್ರೇಲರ ಪಶುಗಳಿಗೂ ಈಜಿಪ್ಟಿನವರ ಪಶುಗಳಿಗೂ ವ್ಯತ್ಯಾಸ ಮಾಡುವೆನು. ಇಸ್ರೇಲರ ಯಾವ ಪಶುವೂ ಸಾಯುವುದಿಲ್ಲ.


ದೇವರು ನಮ್ಮನ್ನು ಅಂಧಕಾರದ ಶಕ್ತಿಯಿಂದ ಬಿಡುಗಡೆ ಮಾಡಿದ್ದಾನೆ. ಆತನು ನಮ್ಮನ್ನು ತನ್ನ ಪ್ರಿಯ ಮಗನ (ಯೇಸುವಿನ) ರಾಜ್ಯದೊಳಗೆ ಸೇರಿಸಿದ್ದಾನೆ.


ನೀವು ನನ್ನ ಬಳಿಗೆ ಹಿಂತಿರುಗಿ ಬರುವಿರಿ. ಆಗ ನೀವು ಒಳ್ಳೆಯವರಿಗೂ ಕೆಟ್ಟವರಿಗೂ ಇರುವ ವ್ಯತ್ಯಾಸವನ್ನು ತಿಳಿದುಕೊಳ್ಳುವಿರಿ. ಆಗ ನೀವು ದೇವರನ್ನು ಹಿಂಬಾಲಿಸುವವರಿಗೂ ಹಿಂಬಾಲಿಸದೆ ಇರುವವರಿಗೂ ಇರುವ ವ್ಯತ್ಯಾಸವನ್ನು ನೋಡುವಿರಿ.


ಆಗ ನಿಮ್ಮ ಜನರು ಯೆಹೋವನಾದ ನನ್ನ ಸಹಾಯ ಕೋರಿದರು. ನಾನು ಈಜಿಪ್ಟಿನ ಜನರಿಗೂ ಅವರಿಗೂ ಮಧ್ಯದಲ್ಲಿ ಕತ್ತಲೆಯಾಗುವಂತೆ ಮಾಡಿದೆ; ಸಮುದ್ರವು ಅವರನ್ನು ಮುಚ್ಚಿಬಿಡುವಂತೆ ಮಾಡಿದೆ. ಈಜಿಪ್ಟಿನ ಸೈನ್ಯಕ್ಕೆ ನಾನು ಮಾಡಿದ್ದನ್ನು ನೀವೇ ನೋಡಿದ್ದೀರಿ. “‘ತರುವಾಯ ಬಹಳ ಕಾಲದವರೆಗೆ ನೀವು ಅರಣ್ಯದಲ್ಲಿ ಪ್ರವಾಸ ಮಾಡಿಕೊಂಡಿದ್ದಿರಿ.


ಹೀಗೆ ಮೋಡವು ಈಜಿಪ್ಟಿನವರಿಗೂ ಇಸ್ರೇಲರಿಗೂ ನಡುವೆ ನಿಂತಿತು. ಅಲ್ಲಿ ಇಸ್ರೇಲರಿಗೆ ಬೆಳಕಿತ್ತು. ಆದರೆ ಈಜಿಪ್ಟಿನವರಿಗೆ ಕತ್ತಲಿತ್ತು. ಆದ್ದರಿಂದ ಈಜಿಪ್ಟಿನವರು ಆ ರಾತ್ರಿ ಇಸ್ರೇಲರ ಸಮೀಪಕ್ಕೆ ಬರಲಿಲ್ಲ.


ಇಸ್ರೇಲರು ವಾಸವಾಗಿದ್ದ ಗೋಷೆನ್ ಪ್ರದೇಶದಲ್ಲಿ ಮಾತ್ರ ಆಲಿಕಲ್ಲಿನ ಮಳೆಯಾಗಲಿಲ್ಲ.


“ನಾನು ಮಳೆಯನ್ನು ನಿಲ್ಲಿಸಿದೆನು. ಸುಗ್ಗಿಗೆ ಮೂರು ತಿಂಗಳು ಇರುವಾಗಲೇ ಮಳೆಗರೆಯುವುದನ್ನು ನಿಲ್ಲಿಸಿದೆನು. ಆದ್ದರಿಂದ ಪೈರು ಬೆಳೆಯಲಿಲ್ಲ. ಆಮೇಲೆ ನಾನು ಒಂದು ಪಟ್ಟಣದ ಮೇಲೆ ಮಳೆ ಬೀಳುವಂತೆ ಮಾಡಿದೆನು. ಬೇರೆ ಪಟ್ಟಣಗಳ ಮೇಲೆ ಬೀಳದಂತೆ ಮಾಡಿದೆನು. ದೇಶದ ಒಂದು ಭಾಗದಲ್ಲಿ ಮಳೆ ಸುರಿಯಿತು. ಇನ್ನೊಂದು ಭಾಗವು ಒಣಗಿ ಬೆಂಗಾಡಾಗಿತ್ತು.


ಯೆಹೋವನು ನೈಲ್ ನದಿಯ ನೀರನ್ನು ರಕ್ತವನ್ನಾಗಿ ಮಾರ್ಪಡಿಸಿದ ಬಳಿಕ ಏಳು ದಿನಗಳು ಕಳೆದವು.


ಮಾಂತ್ರಿಕರು ತಮ್ಮ ಮಂತ್ರವಿದ್ಯೆಯಿಂದ ಅದೇರೀತಿ ಮಾಡಲು ಪ್ರಯತ್ನಿಸಿದರೂ ಧೂಳಿನಿಂದ ಹೇನುಗಳನ್ನು ಮಾಡಲು ಅವರಿಗೆ ಸಾಧ್ಯವಾಗಲಿಲ್ಲ. ಹೇನುಗಳು ಪ್ರಾಣಿಗಳ ಮೇಲೂ ಜನರ ಮೇಲೂ ಉಳಿದುಕೊಂಡವು.


ಆದ್ದರಿಂದ ಮಾಂತ್ರಿಕರು ಫರೋಹನಿಗೆ, “ಇದು ದೇವರ ಕಾರ್ಯವೇ” ಎಂದು ಹೇಳಿದರು. ಆದರೆ ಫರೋಹನು ಅವರ ಮಾತಿಗೆ ಕಿವಿಗೊಡಲಿಲ್ಲ. ಯೆಹೋವನು ಹೇಳಿದಂತೆಯೇ ಇದಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು