Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 10:25 - ಪರಿಶುದ್ದ ಬೈಬಲ್‌

25 ಮೋಶೆಯು, “ನಾವು ನಮ್ಮ ಕುರಿಗಳನ್ನೂ ದನಕರುಗಳನ್ನೂ ಕಾಣಿಕೆಗಳಿಗಾಗಿ ಮತ್ತು ಯಜ್ಞಗಳಿಗಾಗಿ ತೆಗೆದುಕೊಂಡು ಹೋಗಬೇಕು; ಮಾತ್ರವಲ್ಲದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅದಕ್ಕೆ ಮೋಶೆಯು, “ನಮ್ಮ ದೇವರಾದ ಯೆಹೋವನಿಗೆ ನಾವು ಯಜ್ಞಹೋಮಗಳನ್ನು ಮಾಡುವಂತೆ ಬೇಕಾದ ಪಶುಗಳನ್ನು ತೆಗೆದುಕೊಂಡು ಹೋಗಲು ಅಪ್ಪಣೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅದಕ್ಕೆ ಮೋಶೆ, “ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಗೆ ನಾವು ಸಮರ್ಪಿಸಬೇಕಾದ ಬಲಿಗಳಿಗೂ ದಹನಬಲಿಗಳಿಗೂ ಬೇಕಾದ ಪ್ರಾಣಿಗಳನ್ನು ತೆಗೆದುಕೊಂಡು ಹೋಗುವುದನ್ನು ನಮಗೆ ಬಿಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅದಕ್ಕೆ ಮೋಶೆ - ನಮ್ಮ ದೇವರಾದ ಯೆಹೋವನಿಗೆ ನಾವು ಯಜ್ಞಹೋಮಗಳನ್ನು ಮಾಡುವಂತೆ ಬೇಕಾದ ಪಶುಗಳನ್ನು ಮಾತ್ರವಲ್ಲದೆ ನಮ್ಮ ಎಲ್ಲಾ ಪಶುಗಳನ್ನೂ ಸಹ ತೆಗೆದುಕೊಂಡು ಹೋಗುವ ಹಾಗೆ ನಮಗೆ ಅಪ್ಪಣೆ ಕೊಡಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅದಕ್ಕೆ ಮೋಶೆಯು ಅವನಿಗೆ, “ನಮ್ಮ ದೇವರಾದ ಯೆಹೋವ ದೇವರಿಗೆ ಅರ್ಪಿಸುವುದಕ್ಕಾಗಿ ಯಜ್ಞಗಳನ್ನೂ ದಹನಬಲಿಗಳನ್ನೂ ತೆಗೆದುಕೊಂಡು ಹೋಗಲು ಅಪ್ಪಣೆಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 10:25
8 ತಿಳಿವುಗಳ ಹೋಲಿಕೆ  

“ಬಳಿಕ ಆರೋನನು ಚೀಟು ಹಾಕುವುದರ ಮೂಲಕ ಯೆಹೋವನಿಗೋಸ್ಕರ ಆರಿಸಲ್ಪಟ್ಟ ಹೋತವನ್ನು ಅರ್ಪಿಸುವನು. ಆರೋನನು ಈ ಹೋತವನ್ನು ಪಾಪಪರಿಹಾರಕ ಯಜ್ಞವಾಗಿ ಅರ್ಪಿಸಬೇಕು.


ತರುವಾಯ ಆರೋನನು ತನ್ನ ಕೈಗಳನ್ನು ಜನರ ಕಡೆಗೆ ಎತ್ತಿ ಅವರನ್ನು ಆಶೀರ್ವದಿಸಿದನು. ಆರೋನನು ಪಾಪಪರಿಹಾರಕ ಯಜ್ಞವನ್ನೂ ಸರ್ವಾಂಗಹೋಮವನ್ನೂ ಸಮಾಧಾನಯಜ್ಞವನ್ನೂ ಅರ್ಪಿಸಿ ಮುಗಿಸಿದ ನಂತರ ಯಜ್ಞವೇದಿಕೆಯಿಂದ ಕೆಳಗಿಳಿದು ಬಂದನು.


ಆಮೇಲೆ ನೋಹನು ಯೆಹೋವನಿಗಾಗಿ ಒಂದು ಯಜ್ಞವೇದಿಕೆಯನ್ನು ಕಟ್ಟಿ ಶುದ್ಧವಾದ ಕೆಲವು ಪಶುಪಕ್ಷಿಗಳನ್ನು ತೆಗೆದುಕೊಂಡು ಅವುಗಳನ್ನು ದೇವರಿಗೆ ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮ ಮಾಡಿದನು.


ಫರೋಹನು ಮತ್ತೆ ಮೋಶೆಯನ್ನು ಕರೆಸಿ, “ಹೋಗಿ, ಯೆಹೋವನನ್ನು ಆರಾಧಿಸಿರಿ! ನೀವು ನಿಮ್ಮ ಮಕ್ಕಳನ್ನು ಕರೆದುಕೊಂಡು ಹೋಗಬಹುದು. ಆದರೆ ನೀವು ನಿಮ್ಮ ಕುರಿಗಳನ್ನು ದನಕರುಗಳನ್ನು ಇಲ್ಲಿಯೇ ಬಿಟ್ಟುಹೋಗಬೇಕು” ಎಂದು ಹೇಳಿದನು.


ನಮ್ಮ ಪ್ರಾಣಿಗಳನ್ನೆಲ್ಲಾ ತೆಗೆದುಕೊಂಡು ಹೋಗುವೆವು. ಒಂದನ್ನಾದರೂ ಬಿಟ್ಟುಹೋಗುವುದಿಲ್ಲ; ಯಾವ ಪಶುಗಳನ್ನು ಅರ್ಪಿಸಬೇಕೆಂಬುದು ಅಲ್ಲಿಗೆ ಹೋದಾಗಲೇ ನಮಗೆ ತಿಳಿಯುವುದು. ಆದ್ದರಿಂದ, ನಾವು ಇವುಗಳನ್ನೆಲ್ಲಾ ನಮ್ಮ ಜೊತೆಯಲ್ಲಿ ತೆಗೆದುಕೊಂಡು ಹೋಗಬೇಕು” ಎಂದು ಹೇಳಿದನು.


“ಒಂದು ವಿಶೇಷ ಯಜ್ಞವೇದಿಕೆಯನ್ನು ನನಗೋಸ್ಕರ ಮಣ್ಣಿನಿಂದ ಕಟ್ಟಿರಿ. ಈ ಯಜ್ಞವೇದಿಕೆಯ ಮೇಲೆ ಕುರಿದನಗಳನ್ನು ನನಗೆ ಸರ್ವಾಂಗಹೋಮಗಳನ್ನಾಗಿಯೂ ಸಮಾಧಾನಯಜ್ಞಗಳನ್ನಾಗಿಯೂ ಸಮರ್ಪಿಸಿರಿ. ನಾನು ನಿಮಗೆ ಹೇಳುವ ಪ್ರತಿಯೊಂದು ಸ್ಥಳದಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಳ್ಳಲು ಹೀಗೆಯೇ ಮಾಡಿರಿ. ಆಗ ನಾನು ಬಂದು ನಿಮ್ಮನ್ನು ಆಶೀರ್ವದಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು