ವಿಮೋಚನಕಾಂಡ 10:26 - ಪರಿಶುದ್ದ ಬೈಬಲ್26 ನಮ್ಮ ಪ್ರಾಣಿಗಳನ್ನೆಲ್ಲಾ ತೆಗೆದುಕೊಂಡು ಹೋಗುವೆವು. ಒಂದನ್ನಾದರೂ ಬಿಟ್ಟುಹೋಗುವುದಿಲ್ಲ; ಯಾವ ಪಶುಗಳನ್ನು ಅರ್ಪಿಸಬೇಕೆಂಬುದು ಅಲ್ಲಿಗೆ ಹೋದಾಗಲೇ ನಮಗೆ ತಿಳಿಯುವುದು. ಆದ್ದರಿಂದ, ನಾವು ಇವುಗಳನ್ನೆಲ್ಲಾ ನಮ್ಮ ಜೊತೆಯಲ್ಲಿ ತೆಗೆದುಕೊಂಡು ಹೋಗಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ನಮ್ಮ ಎಲ್ಲಾ ಪಶುಗಳನ್ನೂ ಸಹ ನಮ್ಮ ಸಂಗಡ ತೆಗೆದುಕೊಂಡು ಹೋಗುವೆವು. ಒಂದು ಗೊರಸನ್ನಾದರೂ ನಾವು ಬಿಟ್ಟು ಹೋಗುವುದಿಲ್ಲ. ಆ ಪಶುಗಳಿಂದಲೇ ನಮ್ಮ ದೇವರಾದ ಯೆಹೋವನಿಗೆ ಆರಾಧನೆಯನ್ನು ಸಲ್ಲಿಸಬೇಕು. ಯಾವ ಪಶುಗಳನ್ನು ಅರ್ಪಿಸಬೇಕೆಂಬುದು ನಾವು ಅಲ್ಲಿಗೆ ಸೇರುವುದಕ್ಕೆ ಮೊದಲು ನಮಗೆ ತಿಳಿಯದು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅದು ಮಾತ್ರವಲ್ಲ, ನಮ್ಮ ಎಲ್ಲ ಪಶುಪ್ರಾಣಿಗಳನ್ನೂತೆಗೆದುಕೊಂಡು ಹೋಗಲು ಅಪ್ಪಣೆ ಕೊಡಿ. ಒಂದು ಗೊರಸನ್ನೂ ನಾವು ಬಿಟ್ಟುಹೋಗಲು ಆಗದು. ಈ ಪಶುಪ್ರಾಣಿಗಳಿಂದಲೇ ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಗೆ ಬಲಿಯೊಪ್ಪಿಸಬೇಕಾಗಿದೆ ಅಲ್ಲವೆ? ಯಾವ ಯಾವ ಪ್ರಾಣಿಗಳನ್ನು ಅರ್ಪಿಸಬೇಕೋ ಅದು ನಾವು ಅಲ್ಲಿಗೆ ಸೇರುವುದಕ್ಕೆ ಮುಂಚೆ ನಮಗೆ ತಿಳಿಯದು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಒಂದು ಗೊರಸೆಯನ್ನಾದರೂ ನಾವು ಬಿಟ್ಟು ಹೋಗುವದಕ್ಕಾಗದು; ಆ ಪಶುಗಳಿಂದಲೇ ನಮ್ಮ ದೇವರಾದ ಯೆಹೋವನಿಗೆ ಯಜ್ಞ ಮಾಡಬೇಕಲ್ಲವೇ; ಯಾವ ಪಶುಗಳನ್ನು ಅರ್ಪಿಸಬೇಕೋ ಅದು ನಾವು ಅಲ್ಲಿಗೆ ಸೇರುವದಕ್ಕೆ ಮುಂಚೆ ನಮಗೆ ತಿಳಿಯದು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ನಮ್ಮ ಪಶುಪ್ರಾಣಿಗಳನ್ನೂ ನಾವು ನಮ್ಮ ಸಂಗಡ ತೆಗೆದುಕೊಂಡು ಹೋಗುವೆವು. ಒಂದು ಗೊರಸನ್ನೂ ಬಿಡಲಾರೆವು. ಏಕೆಂದರೆ ನಮ್ಮ ದೇವರಾದ ಯೆಹೋವ ದೇವರಿಗೆ ಆರಾಧನೆ ಮಾಡುವುದಕ್ಕೆ ಅವುಗಳಿಂದಲೇ ಬಲಿ ಅರ್ಪಿಸಬೇಕು. ಯೆಹೋವ ದೇವರಿಗೆ ಯಾವ ಅರ್ಪಣೆ ಮಾಡಬೇಕೆಂಬುದು ಅಲ್ಲಿಗೆ ಹೋಗುವವರೆಗೂ ನಮಗೆ ತಿಳಿಯದು,” ಎಂದನು. ಅಧ್ಯಾಯವನ್ನು ನೋಡಿ |