ವಿಮೋಚನಕಾಂಡ 10:27 - ಪರಿಶುದ್ದ ಬೈಬಲ್27 ಯೆಹೋವನು ಫರೋಹನ ಹೃದಯವನ್ನು ಮತ್ತೆ ಕಠಿಣಗೊಳಿಸಿದನು. ಆದ್ದರಿಂದ ಫರೋಹನು ಅವರನ್ನು ಕಳುಹಿಸಿಕೊಡಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆದರೆ ಯೆಹೋವನು ಫರೋಹನ ಹೃದಯವನ್ನು ಕಠಿಣ ಮಾಡಿದ್ದರಿಂದ ಅವನು ಅವರನ್ನು ಕಳುಹಿಸಲಾರದೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಸರ್ವೇಶ್ವರ ಫರೋಹನ ಹೃದಯವನ್ನು ಕಠಿಣಪಡಿಸಿದ್ದರಿಂದ ಅವನು ಅವರಿಗೆ ಅಪ್ಪಣೆಕೊಡಲು ಒಪ್ಪಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಆದರೂ ಯೆಹೋವನು ಫರೋಹನ ಹೃದಯವನ್ನು ಕಠಿಣಪಡಿಸಿದದರಿಂದ ಅವರಿಗೆ ಅಪ್ಪಣೆ ಕೊಡುವದಕ್ಕೆ ಫರೋಹನು ಒಪ್ಪಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆದರೆ ಯೆಹೋವ ದೇವರು ಫರೋಹನ ಹೃದಯವನ್ನು ಕಠಿಣ ಮಾಡಿದ್ದರಿಂದ, ಅವನು ಅವರನ್ನು ಕಳುಹಿಸಲಾರದೆ ಹೋದನು. ಅಧ್ಯಾಯವನ್ನು ನೋಡಿ |
ಈ ಉಪದ್ರವಗಳಿಂದ ಸಾಯದೆ ಉಳಿದ ಜನರು ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಲಿಲ್ಲ. ತಮ್ಮ ಸ್ವಂತ ಕೈಗಳಿಂದ ನಿರ್ಮಿಸಿದ ವಿಗ್ರಹಗಳನ್ನು ತೊರೆದುಬಿಡಲಿಲ್ಲ. ಅವರು ದೆವ್ವಗಳ ಆರಾಧನೆಯನ್ನು ನಿಲ್ಲಿಸಲಿಲ್ಲ. ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳಿಂದ ಮಾಡಲ್ಪಟ್ಟು, ನಡೆಯಲಾರದ, ನೋಡಲಾರದ ಮತ್ತು ಕೇಳಲಾರದ ವಿಗ್ರಹಗಳನ್ನು ಪೂಜಿಸುವುದನ್ನು ಅವರು ನಿಲ್ಲಿಸಲಿಲ್ಲ.