ವಿಮೋಚನಕಾಂಡ 10:28 - ಪರಿಶುದ್ದ ಬೈಬಲ್28 ಫರೋಹನು ಮೋಶೆಗೆ, “ಇಲ್ಲಿಂದ ತೊಲಗಿ ಹೋಗು! ನೀನು ನನ್ನ ಸನ್ನಿಧಿಗೆ ಇನ್ನು ಮೇಲೆ ಬರಕೂಡದು. ನೀನು ಮತ್ತೆ ಬಂದರೆ ನಿನಗೆ ಮರಣದಂಡನೆ ವಿಧಿಸುವೆನು” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಆಗ ಫರೋಹನು ಮೋಶೆಗೆ, “ನನ್ನನ್ನು ಬಿಟ್ಟುಹೋಗು. ಇನ್ನು ಮುಂದೆ ನನ್ನ ಮುಖವನ್ನು ನೋಡದಂತೆ ಎಚ್ಚರಿಕೆಯಾಗಿರು. ಏಕೆಂದರೆ ನೀನು ನನ್ನ ಮುಖವನ್ನು ನೋಡಿದ ದಿನದಲ್ಲಿ ನೀನು ಸಾಯುವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಅವನು ಮೋಶೆಗೆ, “ಇಲ್ಲಿಂದ ಹೊರಡು; ಇನ್ನು ಮುಂದೆ ನನ್ನ ಸಮ್ಮುಖಕ್ಕೆ ಬರಲೇ ಬೇಡ, ಎಚ್ಚರಿಕೆ! ತಿರುಗಿ ಬಂದೆಯಾದರೆ ಮರಣದಂಡನೆ ಆಗುವುದು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಅವನು ಮೋಶೆಗೆ - ನನ್ನ ಬಳಿಯಿಂದ ಹೋಗು; ಇನ್ನು ಮುಂದೆ ನನ್ನ ಮುಖದೆದುರಿಗೆ ಬರಲೇ ಕೂಡದು; ಎಚ್ಚರ; ತಿರಿಗಿ ಸನ್ನಿಧಿಗೆ ಬಂದರೆ ಮರಣದಂಡನೆ ಆಗುವದು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಆಗ ಫರೋಹನು ಮೋಶೆಗೆ, “ನನ್ನನ್ನು ಬಿಟ್ಟು ಹೋಗು. ಇನ್ನು ನನ್ನ ಮುಖವನ್ನು ನೋಡದಂತೆ ಎಚ್ಚರ. ಏಕೆಂದರೆ ನೀನು ನನ್ನ ಮುಖವನ್ನು ನೋಡಿದ ದಿನದಲ್ಲಿ ಸಾಯುವೆ,” ಎಂದನು. ಅಧ್ಯಾಯವನ್ನು ನೋಡಿ |