ವಿಮೋಚನಕಾಂಡ 10:3 - ಪರಿಶುದ್ದ ಬೈಬಲ್3 ಆದ್ದರಿಂದ ಮೋಶೆ ಆರೋನರು ಫರೋಹನ ಬಳಿಗೆ ಹೋಗಿ, “ಇಬ್ರಿಯರ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ನೀನು ಎಲ್ಲಿಯವರೆಗೆ ನನಗೆ ವಿಧೇಯನಾಗುವುದಿಲ್ಲ? ನನ್ನನ್ನು ಆರಾಧಿಸಲು ನನ್ನ ಜನರನ್ನು ಕಳುಹಿಸಿಕೊಡು! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ, “ಇಬ್ರಿಯರ ದೇವರಾಗಿರುವ ಯೆಹೋವನು ಆಜ್ಞಾಪಿಸುವುದೇನೆಂದರೆ, ‘ನೀನು ನನ್ನ ಮುಂದೆ ತಗ್ಗಿಸಿಕೊಳ್ಳದೆ ಇರುವುದು ಇನ್ನು ಎಲ್ಲಿಯವರೆಗೆ? ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ, "ಹಿಬ್ರಿಯರ ದೇವರಾಗಿರುವ ಸರ್ವೇಶ್ವರನ ಮಾತುಗಳಿವು: ‘ಎಲ್ಲಿಯವರೆಗೆ ನೀನು ನನಗೆ ತಲೆ ತಗ್ಗಿಸದಿರುವೆ? ನನ್ನನ್ನು ಆರಾಧಿಸ ಹೋಗಲು ನನ್ನ ಜನರಿಗೆ ಅಪ್ಪಣೆ ಕೊಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಮೋಶೆ ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ - ಇಬ್ರಿಯರ ದೇವರಾಗಿರುವ ಯೆಹೋವನು ಆಜ್ಞಾಪಿಸುವದೇನಂದರೆ - ನೀನು ನನ್ನ ಮುಂದೆ ತಗ್ಗಿಸಿಕೊಳ್ಳದೆ ಇರುವದು ಇನ್ನು ಎಲ್ಲಿಯವರೆಗೋ? ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಮೋಶೆ ಆರೋನರು ಫರೋಹನ ಬಳಿಗೆ ಬಂದು ಅವನಿಗೆ, “ಹಿಬ್ರಿಯರ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನನ್ನ ಸನ್ನಿಧಿಯಲ್ಲಿ ನೀನು ಎಷ್ಟು ಕಾಲ ತಲೆ ತಗ್ಗಿಸದಿರುವೆ? ನನ್ನನ್ನು ಆರಾಧಿಸುವಂತೆ ನನ್ನ ಜನರನ್ನು ಹೋಗಗೊಡಿಸು. ಅಧ್ಯಾಯವನ್ನು ನೋಡಿ |
ಮನಸ್ಸೆಯ ಪ್ರಾರ್ಥನೆಯ ವಿಷಯವಾಗಿಯೂ ದೇವರ ಪ್ರತಿಕ್ರಿಯೆಯ ವಿಷಯವಾಗಿಯೂ ದೇವದರ್ಶಿಗಳ ಚರಿತ್ರೆಯಲ್ಲಿ ಬರೆಯಲ್ಪಟ್ಟಿದೆ. ಮಾತ್ರವಲ್ಲದೆ ಮನಸ್ಸೆಯು ದೇವರಿಗೆ ವಿರುದ್ಧವಾಗಿ ಮಾಡಿದ ಘೋರಕೃತ್ಯಗಳೂ ಪಶ್ಚಾತ್ತಾಪಪಡುವ ಮೊದಲು ಎಲ್ಲೆಲ್ಲಿ ಅನ್ಯದೇವತೆಗಳಿಗೆ ಪೂಜಾಸ್ಥಳಗಳನ್ನು ಮಾಡಿದ್ದನೆಂದೂ ಎಲ್ಲೆಲ್ಲಿ ಅಶೇರಸ್ತಂಭಗಳನ್ನು ನೆಡಿಸಿದ್ದನೆಂದೂ ದೇವದರ್ಶಿಗಳ ಚರಿತ್ರೆಯಲ್ಲಿ ಬರೆಯಲಾಗಿದೆ.
“ಬಾಬಿಲೋನಿನ ಮೇಲೆ ಬಾಣ ಪ್ರಯೋಗ ಮಾಡಲು ಬಿಲ್ಲುಗಾರರಿಗೆ ಹೇಳಿರಿ. ಆ ಜನರಿಗೆ ನಗರವನ್ನು ಮುತ್ತಲು ಹೇಳಿರಿ. ಯಾರೂ ತಪ್ಪಿಸಿಕೊಂಡು ಹೋಗದಂತೆ ನೋಡಿಕೊಳ್ಳಿ. ಅದು ಮಾಡಿದ ದುಷ್ಕೃತ್ಯಗಳಿಗಾಗಿ ಮುಯ್ಯಿತೀರಿಸಿರಿ. ಬೇರೆ ಜನಾಂಗಗಳಿಗೆ ಅದು ಮಾಡಿದಂತೆ ಅದಕ್ಕೆ ಮಾಡಿರಿ. ಬಾಬಿಲೋನ್ ಯೆಹೋವನನ್ನು ಗೌರವಿಸಲಿಲ್ಲ. ಪರಿಶುದ್ಧನಿಗೆ ಅವಮಾನ ಮಾಡಿದೆ. ಆದ್ದರಿಂದ ಬಾಬಿಲೋನನ್ನು ಶಿಕ್ಷಿಸಬೇಕು.