Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 10:6 - ಪರಿಶುದ್ದ ಬೈಬಲ್‌

6 ಅವು ನಿನ್ನ ಮನೆಗಳಲ್ಲಿಯೂ ನಿನ್ನ ಅಧಿಕಾರಿಗಳ ಮನೆಗಳಲ್ಲಿಯೂ ಈಜಿಪ್ಟಿನ ಎಲ್ಲಾ ಮನೆಗಳಲ್ಲಿಯೂ ತುಂಬಿರುತ್ತವೆ. ನಿನ್ನ ತಂದೆತಾತಂದಿರೂ ನೋಡಿಲ್ಲದಷ್ಟು ಮಿಡತೆಗಳಿರುತ್ತವೆ’” ಎಂದು ಹೇಳಿದರು. ಬಳಿಕ ಅವರು ಫರೋಹನ ಬಳಿಯಿಂದ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವು ನಿನ್ನ ಮನೆಗಳಲ್ಲಿಯೂ, ನಿನ್ನ ಪರಿವಾರದವರ ಮನೆಗಳಲ್ಲಿಯೂ, ಐಗುಪ್ತ್ಯರೆಲ್ಲರ ಮನೆಗಳಲ್ಲಿಯೂ ತುಂಬಿಕೊಂಡಿರುವವು. ನಿಮ್ಮ ಪೂರ್ವಿಕರ ಕಾಲದಿಂದ ಇಂದಿನವರೆಗೂ ಅಂಥ ಮಿಡತೆಯ ದಂಡನ್ನು ಎಂದೂ ಅವರು ನೋಡಿರುವುದಿಲ್ಲ’” ಎಂದು ಹೇಳಿದರು. ಇದನ್ನು ಹೇಳಿ ಮೋಶೆ ತಿರುಗಿಕೊಂಡು ಫರೋಹನ ಬಳಿಯಿಂದ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಿನ್ನ ಮನೆಗಳಲ್ಲೂ ನಿನ್ನ ಪರಿವಾರದವರ ಮನೆಗಳಲ್ಲೂ ಈಜಿಪ್ಟಿನವರ ಮನೆಗಳಲ್ಲೂ ಅವು ತುಂಬಿಕೊಳ್ಳುವುವು. ನಿಮ್ಮ ತಂದೆ ತಾತಂದಿರ ಕಾಲದಿಂದ ಇಂದಿನವರೆಗೂ ಅಂಥ ಮಿಡಿತೆದಂಡನ್ನು ಯಾರೂ ನೋಡಿಲ್ಲ.” ಹೀಗೆಂದು ಹೇಳಿ ಮೋಶೆ ಫರೋಹನ ಬಳಿಯಿಂದ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವು ನಿನ್ನ ಮನೆಗಳಲ್ಲಿಯೂ ನಿನ್ನ ಪರಿವಾರದವರ ಮನೆಗಳಲ್ಲಿಯೂ ಐಗುಪ್ತ್ಯರೆಲ್ಲರ ಮನೆಗಳಲ್ಲಿಯೂ ತುಂಬಿಕೊಂಡಿರುವವು. ನಿಮ್ಮ ತಂದೆತಾತಂದಿರು ಹುಟ್ಟಿದಂದಿನಿಂದ ಇಂದಿನವರೆಗೂ ಅಂಥ ವಿುಡಿತೇ ದಂಡನ್ನು ಎಂದೂ ನೋಡಿಲ್ಲ ಎಂದು ಹೇಳಿದರು. ಇದನ್ನು ಹೇಳಿ ಮೋಶೆ ತಿರುಗಿಕೊಂಡು ಫರೋಹನ ಬಳಿಯಿಂದ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವು ನಿನ್ನ ಮನೆಗಳಲ್ಲಿಯೂ ನಿನ್ನ ಅಧಿಕಾರಿಗಳ ಮನೆಗಳಲ್ಲಿಯೂ ಈಜಿಪ್ಟಿನ ಎಲ್ಲಾ ಮನೆಗಳಲ್ಲಿಯೂ ತುಂಬಿಕೊಳ್ಳುವುವು. ನಿನ್ನ ತಂದೆ ಅಲ್ಲದೆ ನಿನ್ನ ತಂದೆಯ ತಂದೆಗಳಾಗಲಿ, ಭೂಮಿಯ ಮೇಲೆ ಇದ್ದಂದಿನಿಂದ ಇಂದಿನವರೆಗೂ ಅಂಥ ಮಿಡತೆಯ ದಂಡನ್ನು ಯಾರೂ ನೋಡಿಲ್ಲ,’ ” ಎಂದು ಮೋಶೆ ಹೇಳಿ ಫರೋಹನ ಬಳಿಯಿಂದ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 10:6
11 ತಿಳಿವುಗಳ ಹೋಲಿಕೆ  

ನೀನು ನನ್ನ ಜನರನ್ನು ಹೋಗಗೊಡಿಸದಿದ್ದರೆ, ಹುಳಗಳು ನಿನ್ನ ಮೇಲೆಯೂ ನಿನ್ನ ಅಧಿಕಾರಿಗಳ ಮೇಲೆಯೂ ನಿನ್ನ ಜನರ ಮೇಲೆಯೂ ನಿಮ್ಮ ಮನೆಗಳಲ್ಲಿಯೂ ತುಂಬಿಕೊಳ್ಳುವವು; ನೆಲದ ಮೇಲೆಲ್ಲಾ ಇರುವವು.


ನೈಲ್ ನದಿಯು ಕಪ್ಪೆಗಳಿಂದ ತುಂಬಿ ಹೋಗುವುದು. ಕಪ್ಪೆಗಳು ನದಿಯಿಂದ ಬಂದು ನಿಮ್ಮ ಮನೆಗಳನ್ನು ಪ್ರವೇಶಿಸುವವು; ನಿಮ್ಮ ಮಲಗುವ ಕೋಣೆಯಲ್ಲಿಯೂ ನಿಮ್ಮ ಹಾಸಿಗೆಗಳಲ್ಲಿಯೂ ನಿಮ್ಮ ಅಧಿಕಾರಿಗಳ ಮನೆಗಳಲ್ಲಿಯೂ ನಿಮ್ಮ ಒಲೆಗಳಲ್ಲಿಯೂ ನೀರಿನ ಜಾಡಿಗಳಲ್ಲಿಯೂ ಹಿಟ್ಟುನಾದುವ ತಟ್ಟೆಗಳಲ್ಲಿಯೂ ಇರುವವು;


ಅವನು ಈಜಿಪ್ಟನ್ನು ಬಿಟ್ಟುಹೋದದ್ದು ನಂಬಿಕೆಯಿಂದಲೇ. ಫರೋಹನ ಸಿಟ್ಟಿಗೆ ಅವನು ಭಯಪಡಲಿಲ್ಲ. ಯಾರಿಗೂ ಕಾಣದ ದೇವರು ತನಗೆ ಕಾಣುತ್ತಿರುವನೋ ಎಂಬಂತೆ ಅವನು ದೃಢಚಿತ್ತನಾಗಿದ್ದನು;


ಆ ದಿನವು ಕರಾಳ ದಿನ. ಮೋಡದಿಂದ ತುಂಬಿದ ದಿನವಾಗಿದೆ. ಅಂದು ಸೂರ್ಯೋದಯದ ಸಮಯದಲ್ಲಿ ಪರ್ವತದಲ್ಲಿ ಹರಡಿದ ಸೈನ್ಯವನ್ನು ನೀವು ನೋಡುವಿರಿ. ಅದು ಬಲಿಷ್ಠವಾದ ಮಹಾಸೈನ್ಯ. ಅಂಥ ಸೈನ್ಯವು ಹಿಂದೆಂದೂ ಇರಲಿಲ್ಲ. ಇನ್ನು ಮುಂದೆಯೂ ಇರುವುದಿಲ್ಲ.


ಆಗ ನಿಮ್ಮ ಈ ಗುಲಾಮರೆಲ್ಲರೂ (ಈಜಿಪ್ಟಿನ ಅಧಿಕಾರಿಗಳು) ನನ್ನ ಬಳಿಗೆ ಬಂದು ನನಗೆ ಅಡ್ಡಬಿದ್ದು ನನ್ನನ್ನು ಆರಾಧಿಸುವರು.’ ಅವರು, ‘ಹೊರಟುಹೋಗಿ, ನಿಮ್ಮ ಜನರೆಲ್ಲರನ್ನು ನಿಮ್ಮೊಂದಿಗೆ ಕರೆದುಕೊಂಡು ಹೋಗಿರಿ’ ಎಂದು ಹೇಳುವರು. ಆಗ ನಾನು ಫರೋಹನ ಬಳಿಯಿಂದ ಬಿಟ್ಟುಹೋಗುವೆನು” ಅಂದನು.


ಈಜಿಪ್ಟಿನಲ್ಲೆಲ್ಲಾ ದೊಡ್ಡ ಗೋಳಾಟ ಉಂಟಾಗುವುದು, ಅಂಥ ಗೋಳಾಟ ಈವರೆಗೂ ಆಗಿಲ್ಲ; ಮುಂದೆಯೂ ಆಗುವುದಿಲ್ಲ.


ನೀವು ನನಗೆ ವಿರೋಧವಾಗಿ ಸಂಚುಮಾಡುತ್ತಿರುವುದು ಈಗ ಸ್ಪಷ್ಟವಾಯಿತು” ಎಂದು ಹೇಳಿದನು. ಬಳಿಕ ಫರೋಹನು ಮೋಶೆ ಆರೋನರನ್ನು ಕಳುಹಿಸಿಬಿಟ್ಟನು.


ಆಲಿಕಲ್ಲಿನ ಮಳೆಯು ಭೀಕರವಾಗಿತ್ತು, ಝಗಝಗಿಸುವ ಮಿಂಚೂ ಅದರೊಂದಿಗಿತ್ತು. ಈಜಿಪ್ಟ್ ಒಂದು ರಾಷ್ಟ್ರವಾದಂದಿನಿಂದ ಇಂಥ ಭೀಕರವಾದ ಆಲಿಕಲ್ಲಿನ ಮಳೆ ಎಂದೂ ಆಗಿರಲಿಲ್ಲ.


ಅವರು ಪಟ್ಟಣದ ಕಡೆಗೆ ಓಡಿ ತ್ವರೆಯಾಗಿ ಗೋಡೆ ಹತ್ತುವರು. ಮನೆಯೊಳಗೆ ನುಗ್ಗುವರು; ಕಳ್ಳರಂತೆ ಕಿಟಕಿಯಿಂದ ನುಸುಳುವರು.


ಆದ್ದರಿಂದ ನಾಳೆ ಇದೇ ಸಮಯಕ್ಕೆ ಸರಿಯಾಗಿ ಭೀಕರವಾದ ಆಲಿಕಲ್ಲಿನ ಮಳೆಯನ್ನು ಸುರಿಸುವೆನು. ಈಜಿಪ್ಟ್ ರಾಜ್ಯವು ಸ್ಥಾಪನೆಯಾದಂದಿನಿಂದ ಇಂಥ ಆಲಿಕಲ್ಲಿನ ಮಳೆ ಬಿದ್ದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು