ವಿಮೋಚನಕಾಂಡ 10:7 - ಪರಿಶುದ್ದ ಬೈಬಲ್7 ಅಧಿಕಾರಿಗಳು ಫರೋಹನಿಗೆ, “ಈ ಜನರಿಂದ ಇನ್ನೆಷ್ಟು ಕಾಲ ನಾವು ಬಳಲಬೇಕು? ಇವರು ಹೋಗಿ ತಮ್ಮ ದೇವರಾದ ಯೆಹೋವನನ್ನು ಆರಾಧಿಸಲಿ. ಈಜಿಪ್ಟ್ ನಾಶವಾಗುತ್ತಿದೆ ಎಂಬುದು ನಿನಗಿನ್ನೂ ಮನವರಿಕೆಯಾಗಿಲ್ಲವೇ?” ಅಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆಗ ಫರೋಹನ ಪರಿವಾರದವರು ಅವನಿಗೆ, “ಈ ಮನುಷ್ಯನು ಇನ್ನು ಎಷ್ಟು ದಿನ ನಮಗೆ ಉರುಲಾಗಿರಬೇಕು. ಆ ಜನರು ಹೋಗಿ ತಮ್ಮ ದೇವರಾದ ಯೆಹೋವನನ್ನು ಆರಾಧಿಸುವುದಕ್ಕೆ ಅಪ್ಪಣೆಕೊಡು. ಐಗುಪ್ತ ದೇಶವು ಹಾಳಾಯಿತೆಂದು ಇನ್ನು ನಿನ್ನ ಮನಸ್ಸಿಗೆ ಬರಲಿಲ್ಲವೋ?” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆಗ ಪರಿವಾರದವರು ಫರೋಹನಿಗೆ, “ಈ ಮನುಷ್ಯ ಇನ್ನೆಷ್ಟುಕಾಲ ನಮಗೆ ಉರುಳಾಗಿರುವನೋ! ಆ ಜನರು ಹೋಗಿ ತಮ್ಮ ದೇವರಾದ ಸರ್ವೇಶ್ವರನನ್ನು ಆರಾಧಿಸಲು ಅಪ್ಪಣೆಕೊಟ್ಟುಬಿಡಿ. ಈಜಿಪ್ಟ್ ದೇಶವೇ ಹಾಳಾಗುತ್ತಿದೆಯೆಂದು ತಮ್ಮ ಮನಸ್ಸಿಗೆ ತೋಚಿರಬೇಕಲ್ಲವೆ?” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆಗ ಫರೋಹನ ಪರಿವಾರದವರು ಅವನಿಗೆ - ಈ ಮನುಷ್ಯನು ಇನ್ನು ಎಷ್ಟು ದಿವಸ ನಮಗೆ ಉರುಲಾಗಿರಬೇಕು? ಆ ಜನರು ಹೋಗಿ ತಮ್ಮ ದೇವರಾದ ಯೆಹೋವನನ್ನು ಆರಾಧಿಸುವದಕ್ಕೆ ಅಪ್ಪಣೆಕೊಡು. ಐಗುಪ್ತದೇಶವು ಹಾಳಾಯಿತೆಂದು ಇನ್ನೂ ನಿನ್ನ ಮನಸ್ಸಿಗೆ ಬರಲಿಲ್ಲವೋ ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಫರೋಹನ ಅಧಿಕಾರಿಗಳು ಅವನಿಗೆ, “ಇವನು ಎಷ್ಟು ಕಾಲ ನಮಗೆ ಉರುಲಾಗಿರಬೇಕು. ಆ ಜನರು ತಮ್ಮ ದೇವರಾದ ಯೆಹೋವ ದೇವರಿಗೆ ಆರಾಧನೆ ಮಾಡುವಂತೆ ಅವರನ್ನು ಕಳುಹಿಸಿಬಿಡು. ಈಜಿಪ್ಟ್ ನಾಶವಾಯಿತೆಂದು ನಿನಗೆ ಇನ್ನೂ ತಿಳಿಯಲಿಲ್ಲವೋ?” ಎಂದರು. ಅಧ್ಯಾಯವನ್ನು ನೋಡಿ |
ನಿಮ್ಮ ದೇವರಾದ ಯೆಹೋವನು ಶತ್ರುಗಳನ್ನು ಸೋಲಿಸಲು ನಿಮಗೆ ಸಹಾಯ ಮಾಡುವುದಿಲ್ಲ, ಅವರು ನಿಮಗೆ ಉರುಲಿನಂತಾಗುತ್ತಾರೆ. ಹೊಗೆ ಮತ್ತು ಧೂಳು ನಿಮ್ಮ ಕಣ್ಣಿಗೆ ನೋವನ್ನುಂಟು ಮಾಡುವಂತೆ ಅವರು ನಿಮಗೆ ನೋವನ್ನುಂಟು ಮಾಡುತ್ತಾರೆ; ಈ ಒಳ್ಳೆಯ ದೇಶದಿಂದ ನಿಮ್ಮನ್ನು ಬಲಾತ್ಕಾರದಿಂದ ಹೊರಗಟ್ಟಲಾಗುವುದು. ನಿಮ್ಮ ದೇವರಾದ ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟಿದ್ದಾನೆ. ಆದರೆ ಯೆಹೋವನ ಆಜ್ಞೆಯನ್ನು ಪಾಲಿಸದಿದ್ದಲ್ಲಿ ನೀವು ಇದನ್ನು ಕಳೆದುಕೊಳ್ಳಬೇಕಾಗುತ್ತದೆ.