ವಿಮೋಚನಕಾಂಡ 10:8 - ಪರಿಶುದ್ದ ಬೈಬಲ್8 ಆದ್ದರಿಂದ ಫರೋಹನು ಮೋಶೆ ಆರೋನರನ್ನು ತನ್ನ ಬಳಿಗೆ ಕರೆಯಿಸಿ, “ಹೋಗಿ ನಿಮ್ಮ ದೇವರಾದ ಯೆಹೋವನನ್ನು ಆರಾಧಿಸಿರಿ. ಆದರೆ ಹೋಗುವವರು ಯಾರೆಂಬುದನ್ನು ನನಗೆ ತಿಳಿಸಿ” ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅದನ್ನು ಕೇಳಿ ಫರೋಹನು, ಮೋಶೆ ಮತ್ತು ಆರೋನರನ್ನು ತಿರುಗಿ ಕರೆಯಿಸಿ ಅವರಿಗೆ, “ನೀವು ಹೋಗಿ ನಿಮ್ಮ ದೇವರಾದ ಯೆಹೋವನನ್ನು ಆರಾಧಿಸಬಹುದು. ಆದರೆ ಯಾರಾರು ಹೋಗಬೇಕನ್ನುತ್ತೀರಿ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಇದನ್ನು ಕೇಳಿದ ಫರೋಹನು ಮೋಶೆ ಮತ್ತು ಆರೋನರನ್ನು ಪುನಃ ಕರೆಸಿ, “ನೀವು ಹೋಗಿ ನಿಮ್ಮ ದೇವರಾದ ಸರ್ವೇಶ್ವರನನ್ನು ಆರಾಧಿಸಬಹುದು. ಆದರೆ ಯಾರ್ಯಾರು ಹೋಗಬೇಕೆನ್ನುತ್ತೀರಿ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅದನ್ನು ಕೇಳಿ ಫರೋಹನು ಮೋಶೆ ಆರೋನರನ್ನು ತಿರಿಗಿ ಕರಿಸಿ ಅವರಿಗೆ - ನೀವು ಹೋಗಿ ನಿಮ್ಮ ದೇವರಾದ ಯೆಹೋವನನ್ನು ಆರಾಧಿಸಿ ಬರಬಹುದು; ಆದರೆ ಯಾರಾರು ಹೋಗಬೇಕನ್ನುತ್ತೀರಿ ಎಂದು ಕೇಳಲಾಗಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆದುದರಿಂದ ಫರೋಹನು ಮೋಶೆ ಮತ್ತು ಆರೋನರನ್ನು ಪುನಃ ಕರೆಯಿಸಿ ಅವರಿಗೆ, “ನೀವು ಹೋಗಿ ನಿಮ್ಮ ದೇವರಾದ ಯೆಹೋವ ದೇವರಿಗೆ ಆರಾಧನೆ ಮಾಡಿರಿ, ಆದರೆ ಹೋಗುವವರು ಯಾರ‍್ಯಾರು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿ |