Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:1 - ಪರಿಶುದ್ದ ಬೈಬಲ್‌

1 ಮೋಶೆ ಆರೋನರು ಇನ್ನೂ ಈಜಿಪ್ಟಿನಲ್ಲಿದ್ದಾಗ ಯೆಹೋವನು ಅವರೊಡನೆ ಮಾತಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಐಗುಪ್ತ ದೇಶದಲ್ಲಿ ಯೆಹೋವನು ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಈಜಿಪ್ಟ್ ದೇಶದಲ್ಲಿ ಸರ್ವೇಶ್ವರ ಸ್ವಾಮಿ ಮೋಶೆ ಮತ್ತು ಆರೋನನ ಸಂಗಡ ಮಾತನಾಡಿ ಹೀಗೆಂದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಐಗುಪ್ತದೇಶದಲ್ಲಿ ಯೆಹೋವನು ಮೋಶೆ ಆರೋನರ ಸಂಗಡ ಮಾತಾಡಿ ಇಂತೆಂದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಈಜಿಪ್ಟಿನಲ್ಲಿ ಮೋಶೆ ಆರೋನರ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:1
17 ತಿಳಿವುಗಳ ಹೋಲಿಕೆ  

ಪಸ್ಕ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬಕ್ಕೆ ಕೇವಲ ಎರಡು ದಿನಗಳಿದ್ದವು. ಮಹಾಯಾಜಕರು ಹಾಗೂ ಧರ್ಮೋಪದೇಶಕರು ಯಾವುದಾದರೊಂದು ಸುಳ್ಳು ಅಪವಾದವನ್ನು ಕಂಡುಹಿಡಿದು ಯೇಸುವನ್ನು ಬಂಧಿಸಿ ಆತನನ್ನು ಕೊಲ್ಲಬೇಕೆಂದಿದ್ದರು.


ಯೆಹೂದ್ಯರ ಹುಳಿಯಿಲ್ಲದ ರೊಟ್ಟಿಯ ಹಬ್ಬ ಅಂದರೆ ಪಸ್ಕಹಬ್ಬವು ಹತ್ತಿರವಾಗಿತ್ತು.


ಹದಿನಾರು ಮಂದಿ ಸಿಪಾಯಿಗಳು ಪೇತ್ರನನ್ನು ಕಾಯುತ್ತಿದ್ದರು. ಪಸ್ಕಹಬ್ಬದ ಕಾಲ ಮುಗಿದೊಡನೆ ಪೇತ್ರನನ್ನು ಜನರ ಮುಂದೆ ನಿಲ್ಲಿಸಬೇಕೆಂದಿದ್ದನು.


ಯೆಹೋವನು ಫರೋಹನ ಹೃದಯವನ್ನು ಕಠಿಣಗೊಳಿಸಿದ್ದರಿಂದ ಫರೋಹನು ಇಸ್ರೇಲರನ್ನು ಕಳುಹಿಸಿಕೊಡಲಿಲ್ಲ; ಆದ್ದರಿಂದ ಮೋಶೆ ಆರೋನರು ಈ ಅದ್ಭುತಕಾರ್ಯಗಳನ್ನೆಲ್ಲಾ ಮಾಡಿದರು.


“ಈ ತಿಂಗಳು ನಿಮಗೆ ವರ್ಷದ ಮೊದಲನೆ ತಿಂಗಳಾಗಿರುವುದು.


ಜನರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ನಸುಸಂಜೆಯ ವೇಳೆಯಲ್ಲಿ ಸೀನಾಯಿ ಮರುಭೂಮಿಯಲ್ಲಿ ಇದನ್ನು ಆಚರಿಸಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಪ್ರತಿಯೊಂದನ್ನೂ ಮಾಡಿದರು.


“ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಯೆಹೋವನಿಗೆ ಪಸ್ಕಹಬ್ಬದ ಯಜ್ಞವನ್ನು ಅರ್ಪಿಸಬೇಕು.


ದೇವಮನುಷ್ಯನೊಬ್ಬನು ಏಲಿಯ ಬಳಿಗೆ ಬಂದು, “ಯೆಹೋವನು ಈ ಸಂಗತಿಗಳನ್ನು ತಿಳಿಸಿದನು: ‘ನಿನ್ನ ಪೂರ್ವಿಕರು ಈಜಿಪ್ಟಿನಲ್ಲಿ ಫರೋಹನ ಗುಲಾಮರಾಗಿದ್ದರು. ಆಗ ನಾನು ನಿನ್ನ ಪೂರ್ವಿಕರಿಗೆ ದರ್ಶನ ನೀಡಿದೆ.


ಇಸ್ರೇಲಿನ ಜನರೂ ಅಲ್ಲಿ ಸೇರಿಬಂದವರೂ ಪಸ್ಕಹಬ್ಬವನ್ನು ಮತ್ತು ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಏಳು ದಿನಗಳವರೆಗೆ ಆಚರಿಸಿದರು.


“ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸದಲ್ಲಿ ನೀವು ಪಸ್ಕಹಬ್ಬ ಆಚರಿಸಬೇಕು. ಹುಳಿ ಇಲ್ಲದ ರೊಟ್ಟಿಯ ಹಬ್ಬವು ಈ ಸಮಯದಲ್ಲಿ ಪ್ರಾರಂಭವಾಗುವದು. ಆ ಹಬ್ಬವು ಏಳು ದಿವಸಗಳ ತನಕ ನಡೆಯುವದು.


ಆದ್ದರಿಂದ ಅಬ್ರಹಾಮನಿಗೆ ಅವನ ಹೆಂಡತಿಯನ್ನು ಒಪ್ಪಿಸಿಬಿಡು. ಅಬ್ರಹಾಮನು ಪ್ರವಾದಿಯಾಗಿರುವುದರಿಂದ ನಿನಗೋಸ್ಕರ ಪ್ರಾರ್ಥಿಸುವನು, ಆಗ ನೀನು ಬದುಕಿಕೊಳ್ಳುವೆ. ನೀನು ಸಾರಳನ್ನು ಅಬ್ರಹಾಮನಿಗೆ ಹಿಂತಿರುಗಿಸದಿದ್ದರೆ, ನೀನೂ ನಿನ್ನ ಇಡೀ ಕುಟುಂಬದವರೂ ಸಾಯುವಿರೆಂದು ನಾನು ಪ್ರಮಾಣ ಮಾಡುತ್ತೇನೆ” ಎಂದು ಹೇಳಿದನು.


ನೀನು ಇಸ್ರೇಲರಿಗೆ ಈ ಸಂದೇಶವನ್ನು ತಿಳಿಸು: ‘ಸ್ತ್ರೀಯರೂ ಪುರುಷರೂ ತಮ್ಮ ನೆರೆಯವರಿಂದ ಬೆಳ್ಳಿಬಂಗಾರಗಳ ವಸ್ತುಗಳನ್ನು ಕೇಳಿಕೊಳ್ಳಬೇಕು.’


ಆದ್ದರಿಂದ ಪ್ರಥಮ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲ ನೀವು ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಲು ಆರಂಭಿಸಿ ಅದೇ ತಿಂಗಳ ಇಪ್ಪತ್ತೊಂದನೇ ದಿನದ ಸಾಯಂಕಾಲದವರೆಗೂ ತಿನ್ನುವಿರಿ.


“ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ದೇವದರ್ಶನಗುಡಾರವಾದ ಪವಿತ್ರಗುಡಾರವನ್ನು ಎತ್ತಿನಿಲ್ಲಿಸು.


“ಇಸ್ರೇಲರು ನೇಮಕವಾದ ಕಾಲದಲ್ಲಿ ಪಸ್ಕಹಬ್ಬವನ್ನು ಆಚರಿಸಬೇಕು.


ಅವರು ಈ ತಿಂಗಳ ಹದಿನಾಲ್ಕನೆಯ ದಿನದ ನಸುಸಂಜೆಯ ವೇಳೆ ಪಸ್ಕದ ಊಟವನ್ನು ಮಾಡಬೇಕು. ಅವರು ಇದನ್ನು ಪಸ್ಕಹಬ್ಬದ ಎಲ್ಲಾ ನಿಯಮಗಳ ಪ್ರಕಾರ ನೇಮಕವಾದ ಕಾಲದಲ್ಲಿ ಮಾಡಬೇಕು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು