ವಿಮೋಚನಕಾಂಡ 12:11 - ಪರಿಶುದ್ದ ಬೈಬಲ್11 “ನೀವು ಭೋಜನ ಮಾಡುವಾಗ ಪ್ರಯಾಣ ಮಾಡುತ್ತಿರುವಂತೆ ಬಟ್ಟೆ ಧರಿಸಿಕೊಂಡಿರಬೇಕು; ಕೆರಗಳನ್ನು ಹಾಕಿಕೊಂಡು ನಿಮ್ಮ ಊರುಗೋಲನ್ನು ಕೈಯಲ್ಲಿ ಹಿಡಿದಿರಬೇಕು. ನೀವು ಅವಸವಸರವಾಗಿ ತಿನ್ನಬೇಕು. ಯಾಕೆಂದರೆ ಇದು ಯೆಹೋವನ ಪಸ್ಕಹಬ್ಬ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆ ಭೋಜನವನ್ನು ಮಾಡಬೇಕಾದ ಕ್ರಮ ಹೇಗೆಂದರೆ: ನೀವು ನಡುವನ್ನು ಕಟ್ಟಿಕೊಂಡು, ಕೆರವನ್ನು ಮೆಟ್ಟಿಕೊಂಡು, ಕೋಲುಹಿಡಿದು, ತ್ವರೆಯಾಗಿ ಮಾಡಬೇಕು. ಇದು ಯೆಹೋವನಿಗೆ ಆಚರಿಸತಕ್ಕ ಪಸ್ಕಹಬ್ಬವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆ ಭೋಜನವನ್ನು ಮಾಡಬೇಕಾದ ಕ್ರಮ ಇದು: ನೀವು ನಡುಕಟ್ಟಿಕೊಂಡು, ಕೆರಮೆಟ್ಟಿಕೊಂಡು ಊರುಗೋಲನ್ನು ಹಿಡಿದುಕೊಂಡು ಬೇಗ ಬೇಗನೆ ಊಟಮಾಡಬೇಕು. ಏಕೆಂದರೆ ಅದು ಸರ್ವೇಶ್ವರ ಸ್ವಾಮಿಗೆ ಆಚರಿಸತಕ್ಕ ಪಾಸ್ಕಹಬ್ಬ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆ ಭೋಜನವನ್ನು ಮಾಡಬೇಕಾದ ಕ್ರಮ ಹೇಗಂದರೆ - ನೀವು ನಡುವನ್ನು ಕಟ್ಟಿ ಕೆರವನ್ನು ಮೆಟ್ಟಿಕೊಂಡು ಕೋಲು ಹಿಡಿದು ತ್ವರೆಯಾಗಿ ಮಾಡಬೇಕು. ಇದು ಯೆಹೋವನಿಗೆ ಆಚರಿಸತಕ್ಕ ಪಸ್ಕಹಬ್ಬವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನೀವು ಅದನ್ನು ತಿನ್ನತಕ್ಕ ರೀತಿ ಇದೇ: ನೀವು ನಿಮ್ಮ ನಡುಕಟ್ಟಿಕೊಂಡು, ಕೆರಮೆಟ್ಟಿಕೊಂಡು ಊರುಗೋಲನ್ನು ಹಿಡಿದುಕೊಂಡು ತ್ವರೆಯಾಗಿ ಅದನ್ನು ತಿನ್ನಬೇಕು, ಅದು ಯೆಹೋವ ದೇವರ ಪಸ್ಕವಾಗಿದೆ. ಅಧ್ಯಾಯವನ್ನು ನೋಡಿ |