Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:12 - ಪರಿಶುದ್ದ ಬೈಬಲ್‌

12 “ಆ ರಾತ್ರಿ ನಾನು ಈಜಿಪ್ಟಿನ ಮೂಲಕ ಹಾದುಹೋಗಿ ಈಜಿಪ್ಟಿನ ಚೊಚ್ಚಲು ಪಶುಗಳನ್ನೂ ಚೊಚ್ಚಲು ಗಂಡುಮಕ್ಕಳನ್ನೂ ಕೊಲ್ಲುವೆನು; ಈಜಿಪ್ಟಿನ ಎಲ್ಲಾ ದೇವರುಗಳಿಗೆ ತೀರ್ಪು ಮಾಡುವೆನು. ನಾನೇ ಯೆಹೋವನೆಂದು ತೋರಿಸಿಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆ ರಾತ್ರಿ ನಾನು ಐಗುಪ್ತದೇಶದ ಮೇಲೆ ಹಾದುಹೋಗಿ ಮನುಷ್ಯರಲ್ಲಾಗಲಿ, ಪಶುಗಳಲ್ಲಾಗಲಿ, ಚೊಚ್ಚಲಾಗಿರುವುದನ್ನೆಲ್ಲಾ ಸಂಹರಿಸುವೆನು. ಐಗುಪ್ತ ದೇಶದ ಸಮಸ್ತ ದೇವತೆಗಳಿಗೂ ನ್ಯಾಯತೀರಿಸುವೆನು. ನಾನೇ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆ ರಾತ್ರಿ ನಾನು ಈಜಿಪ್ಟ್ ದೇಶದ ನಡುವೆ ಹಾದುಹೋಗುವೆನು; ಮನುಷ್ಯರಾಗಲಿ, ಪ್ರಾಣಿಗಳಾಗಲಿ ಚೊಚ್ಚಲಾದುದೆಲ್ಲವನ್ನು ಸಂಹರಿಸುವೆನು. ಈಜಿಪ್ಟ್ ದೇಶದ ಸಮಸ್ತ ದೇವತೆಗಳನ್ನೂ ದಂಡಿಸುವೆನು. ನಾನೇ ಸರ್ವೇಶ್ವರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆ ರಾತ್ರಿ ನಾನು ಐಗುಪ್ತ ದೇಶದ ನಡುವೆ ಹಾದುಹೋಗಿ ಮನುಷ್ಯರಲ್ಲಾಗಲಿ ಪಶುಗಳಲ್ಲಾಗಲಿ ಚೊಚ್ಚಲಾಗಿರುವದನ್ನೆಲ್ಲಾ ಸಂಹರಿಸುವೆನು; ಐಗುಪ್ತ ದೇಶದ ಸಮಸ್ತ ದೇವತೆಗಳಿಗೂ ಶಿಕ್ಷೆಮಾಡುವೆನು; ನಾನು ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಏಕೆಂದರೆ ನಾನು ಈ ರಾತ್ರಿ ಈಜಿಪ್ಟ್ ದೇಶದಲ್ಲಿರುವ ಎಲ್ಲಾ ಮನುಷ್ಯರಲ್ಲಿಯೂ, ಪಶುಗಳಲ್ಲಿಯೂ ಇರುವ ಚೊಚ್ಚಲಾದವುಗಳನ್ನು ಸಂಹರಿಸುವೆನು. ಈಜಿಪ್ಟಿನ ದೇವರುಗಳಿಗೆಲ್ಲಾ ನಾನು ನ್ಯಾಯತೀರಿಸುವೆನು. ನಾನೇ ಯೆಹೋವ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:12
26 ತಿಳಿವುಗಳ ಹೋಲಿಕೆ  

ಈಜಿಪ್ಟಿನವರು ಯೆಹೋವನು ಕೊಂದುಹಾಕಿದ ತಮ್ಮ ಚೊಚ್ಚಲು ಮಕ್ಕಳನ್ನು ಹೂಳಿಡುತ್ತಿದ್ದರು. ಯೆಹೋವನು ಈಜಿಪ್ಟಿನ ದೇವರುಗಳನ್ನು ಶಿಕ್ಷಿಸಿದನು.


ಆ ಸಮಯದಲ್ಲಿ ಚೊಚ್ಚಲಾದವುಗಳನ್ನು ಸಂಹರಿಸಲು ಯೆಹೋವನು ಈಜಿಪ್ಟಿನ ಮೂಲಕ ಹಾದುಹೋಗುವನು. ಬಾಗಿಲಿನ ನಿಲುವು ಕಂಬಗಳಿಗೆ ಮತ್ತು ಮೇಲಿನ ಪಟ್ಟಿಗಳಿಗೆ ಹಚ್ಚಿದ ರಕ್ತವನ್ನು ಯೆಹೋವನು ನೋಡಿ ಆ ಮನೆಯನ್ನು ಸಂರಕ್ಷಿಸುವನು. ಸಂಹಾರಕನು ನಿಮ್ಮ ಮನೆಯೊಳಗೆ ಬಂದು ಸಂಹರಿಸಲು ಯೆಹೋವನು ಬಿಡುವುದಿಲ್ಲ.


ಅವರು ಯೆಹೋವನಿಗೆ ಭಯಪಡುವರು. ಯಾಕೆಂದರೆ ಆತನು ಅವರ ದೇವರುಗಳನ್ನು ನಾಶಮಾಡಿದ್ದಾನೆ. ಆಗ ದೂರದಲ್ಲಿರುವ ಜನರೆಲ್ಲರೂ ಆತನನ್ನು ಆರಾಧಿಸುವರು.


“ಆದರೆ ನಾನು ಅವರಲ್ಲಿ ಕೆಲವರನ್ನು ಯುದ್ಧಗಳಿಂದ, ಬರಗಾಲಗಳಿಂದ ಮತ್ತು ರೋಗಗಳಿಂದ ಉಳಿಸುವೆನು. ಅವರು ತಾವು ಹೋಗುವ ದೇಶಗಳಲ್ಲಿನ ಜನರಿಗೆ ತಮ್ಮ ಅಸಹ್ಯವಾದ ಆಚರಣೆಗಳ ಕುರಿತು ಹೇಳಲಾಗುವಂತೆ ನಾನು ಇದನ್ನು ಮಾಡುತ್ತೇನೆ. ನಾನೇ ಯೆಹೋವನೆಂದು ಆಗ ಅವರು ತಿಳಿದುಕೊಳ್ಳುವರು.”


ನೆಬೂಕದ್ನೆಚ್ಚರನು ಈಜಿಪ್ಟಿನ ಸೂರ್ಯ ದೇವಾಲಯದಲ್ಲಿದ್ದ ಸ್ಮಾರಕಸ್ತಂಭಗಳನ್ನು ನಾಶಪಡಿಸುವನು. ಅವನು ಈಜಿಪ್ಟಿನ ಸುಳ್ಳುದೇವರುಗಳ ಆಲಯಗಳನ್ನು ಸುಟ್ಟುಹಾಕುವನು.’”


ಈಜಿಪ್ಟಿನ ವಿಷಯವಾಗಿ ದುಃಖಕರವಾದ ಸಂದೇಶ: ಯೆಹೋವನು ವೇಗವಾಗಿ ಬರುವ ಮೋಡದೊಂದಿಗೆ ಬರುತ್ತಿದ್ದಾನೆ. ಆತನು ಈಜಿಪ್ಟನ್ನು ಪ್ರವೇಶಿಸುವಾಗ ಈಜಿಪ್ಟಿನ ಸುಳ್ಳುದೇವರುಗಳೆಲ್ಲಾ ಹೆದರಿ ನಡುಗುವವು. ಈಜಿಪ್ಟು ಧೈರ್ಯಶಾಲಿ ದೇಶವಾಗಿದ್ದರೂ, ಅದರ ಧೈರ್ಯ ಮೇಣದಂತೆ ಕರಗಿಹೋಗುವದು.


ನಾಯಕರಾದ ನಿಮಗೆ ನಾನು ಹೇಳುವುದೇನೆಂದರೆ: “ನೀವು ದೇವರುಗಳು. ನೀವು ಮಹೋನ್ನತನಾದ ದೇವರ ಪುತ್ರರು.


ದೇವಾದಿದೇವನು ತನ್ನ ಸಭೆಯಲ್ಲಿ ನಿಂತುಕೊಂಡು ದೇವರುಗಳಿಗೆ ನ್ಯಾಯತೀರ್ಪು ನೀಡುವನು.


ದ್ರಾಕ್ಷಿತೋಟಗಳಲ್ಲಿ ಜನರು ಯಾಕೆ ಅಳುವರು? ಯಾಕೆಂದರೆ ನಾನು ಹಾದುಹೋಗುತ್ತಾ ನಿಮ್ಮನ್ನು ಶಿಕ್ಷಿಸುವೆನು.” ಇದು ಯೆಹೋವನ ನುಡಿ.


ಫಿಲಿಷ್ಟಿಯರು ತಮ್ಮ ವಿಗ್ರಹಗಳನ್ನು ಅಲ್ಲಿಯೇ ಬಿಟ್ಟು ಓಡಿಹೋಗಿದ್ದರು. ದಾವೀದನು ಅವುಗಳನ್ನೆಲ್ಲಾ ಒಟ್ಟುಸೇರಿಸಿ ಸುಡಿಸಿಬಿಟ್ಟನು.


ಅಷ್ಡೋದಿನ ಜನರು ಮಾರನೆಯ ದಿನ ಬೆಳಿಗ್ಗೆ ಎದ್ದಾಗ, ದಾಗೋನನ ವಿಗ್ರಹವು ಯೆಹೋವನ ಪೆಟ್ಟಿಗೆಯ ಮುಂದೆ ಬೋರಲಾಗಿ ಬಿದ್ದಿತ್ತು. ಅಷ್ಡೋದಿನ ಜನರು ದಾಗೋನ್ ವಿಗ್ರಹವನ್ನು ಅದರ ಸ್ಥಳದಲ್ಲಿ ಮತ್ತೆ ನಿಲ್ಲಿಸಿದರು.


“ನೀವು ದೇವರನ್ನಾಗಲಿ ಅಥವಾ ನಿಮ್ಮ ನಾಯಕರುಗಳನ್ನಾಗಲಿ ಶಪಿಸಬಾರದು.


ಹೀಗೆ ನಿಮ್ಮ ದೇಶವನ್ನು ನಾಶಗೊಳಿಸುತ್ತಿರುವ ಗಡ್ಡೆಗಳ, ಇಲಿಗಳ ಮಾದರಿಗಳನ್ನು ಮಾಡಿಸಿರಿ. ಇಸ್ರೇಲರ ದೇವರಿಗೆ ಚಿನ್ನದ ಆ ಮಾದರಿಗಳನ್ನು ಕಾಣಿಕೆಯಾಗಿ ಸಲ್ಲಿಸಿರಿ. ಆಗ ಇಸ್ರೇಲರ ದೇವರು ನಿಮ್ಮನ್ನೂ ನಿಮ್ಮ ದೇವರುಗಳನ್ನೂ ನಿಮ್ಮ ದೇಶವನ್ನೂ ಶಿಕ್ಷಿಸುವುದನ್ನು ನಿಲ್ಲಿಸಬಹುದು.


ಹೀಗಾದರೆ ಯಜಮಾನನು ಆ ಗುಲಾಮನನ್ನು ದೇವರ ಸನ್ನಿಧಿಗೆ ಕರೆದುಕೊಂಡು ಬರುವನು. ಯಜಮಾನನು ಗುಲಾಮನನ್ನು ಬಾಗಿಲ ಬಳಿಗೆ ಅಥವಾ ಬಾಗಿಲಿನ ಮರದ ನಿಲುವುಪಟ್ಟಿಗಳ ಬಳಿಗೆ ಕರೆದುಕೊಂಡು ಬರುವನು. ಯಜಮಾನನು ಗುಲಾಮನ ಕಿವಿಗೆ ಚೂಪಾದ ಸಲಾಕೆಯಿಂದ ರಂಧ್ರ ಮಾಡುವನು. ಆಗ ಗುಲಾಮನು ತನ್ನ ಜೀವಮಾನಪರ್ಯಂತ ಆ ಯಜಮಾನನಿಗೆ ಸೇವೆ ಮಾಡುವನು.


ಈಜಿಪ್ಟಿನವರು ತಾವು ಇಸ್ರೇಲರಿಗಿಂತಲೂ ಉತ್ತಮರೆಂದು ಭಾವಿಸಿಕೊಂಡಿದ್ದರು. ಆದರೆ ಯೆಹೋವನು ಅವರನ್ನು ತಗ್ಗಿಸಿದ್ದರಿಂದ ಎಲ್ಲಾ ದೇವರುಗಳಲ್ಲಿ ಆತನೇ ದೊಡ್ಡವನೆಂದು ಈಗ ನಾನು ತಿಳಿದುಕೊಂಡೆನು” ಎಂದು ಹೇಳಿದನು.


ಆತನು ಈಜಿಪ್ಟಿನಲ್ಲಿ ಚೊಚ್ಚಲು ಪುರುಷರನ್ನೂ ಪ್ರಾಣಿಗಳನ್ನೂ ನಾಶಮಾಡಿದನು.


ಈಜಿಪ್ಟಿನ ಸುಳ್ಳುದೇವರುಗಳ ಆಲಯದಲ್ಲಿ ನೆಬೂಕದ್ನೆಚ್ಚರನು ಬೆಂಕಿಯನ್ನು ಹೊತ್ತಿಸುವನು, ಅವನು ಆಲಯಗಳನ್ನು ಸುಟ್ಟು ಆ ವಿಗ್ರಹಗಳನ್ನು ತೆಗೆದುಕೊಂಡು ಹೋಗುವನು. ಕುರುಬನು ತನ್ನ ಬಟ್ಟೆಗಳಿಂದ ತಿಗಣೆ ಮತ್ತು ಹೇನುಗಳನ್ನು ತೆಗೆದುಹಾಕಿ ಸ್ವಚ್ಛಗೊಳಿಸುವಂತೆ ನೆಬೂಕದ್ನೆಚ್ಚರನು ಈಜಿಪ್ಟನ್ನು ಬಿಟ್ಟು ಹೋಗುವನು.


ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆನ್ನುತ್ತಾನೆ: “ಬಹುಬೇಗನೆ ನಾನು ಥೀಬಸ್ಸಿನ ಆಮೋನ್ ದೇವತೆಯನ್ನು ದಂಡಿಸುವೆನು. ನಾನು ಫರೋಹನನ್ನು, ಈಜಿಪ್ಟನ್ನು ಮತ್ತು ಅವಳ ದೇವರುಗಳನ್ನು ದಂಡಿಸುವೆನು. ನಾನು ಈಜಿಪ್ಟಿನ ರಾಜರನ್ನು ದಂಡಿಸುವೆನು. ಫರೋಹನನ್ನು ನಂಬಿದವರನ್ನು ದಂಡಿಸುವೆನು.


ಮರುದಿನ ಯೆಹೋವನು ಈ ಕಾರ್ಯವನ್ನು ಮಾಡಿದನು. ಈಜಿಪ್ಟಿನ ಹೊಲಗಳಲ್ಲಿದ್ದ ಪಶುಗಳೆಲ್ಲಾ ಸತ್ತುಹೋದವು; ಆದರೆ ಇಸ್ರೇಲರಿಗೆ ಸೇರಿದ ಯಾವ ಪಶುವೂ ಸಾಯಲಿಲ್ಲ.


ನೀನು ಸಾವಿರ ವೈರಿಗಳನ್ನು ಸೋಲಿಸುವೆ. ನಿನ್ನ ಬಲಗೈ ಹತ್ತುಸಾವಿರ ಶತ್ರು ಸೈನಿಕರನ್ನು ಸೋಲಿಸುವುದು. ನಿನ್ನ ಶತ್ರುಗಳಿಗೆ ನಿನ್ನನ್ನು ಮುಟ್ಟಲೂ ಸಾಧ್ಯವಾಗದು.


ಯಾಕೆಂದರೆ ಯೆಹೋವನು ಮಹಾದೇವರಾಗಿದ್ದಾನೆ! ಆತನು ದೇವರುಗಳಿಗೆಲ್ಲಾ ಮಹಾರಾಜನಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು