Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:14 - ಪರಿಶುದ್ದ ಬೈಬಲ್‌

14 “ಆದ್ದರಿಂದ ನೀವು ಆ ರಾತ್ರಿಯನ್ನು ಯಾವಾಗಲೂ ಜ್ಞಾಪಿಸಿಕೊಳ್ಳುವಿರಿ. ಅದು ನಿಮಗೆ ವಿಶೇಷವಾದ ಹಬ್ಬವಾಗಿರುವುದು. ನಿಮ್ಮ ಸಂತತಿಯವರು ಈ ಹಬ್ಬದಿಂದ ಯೆಹೋವನನ್ನು ಎಂದೆಂದಿಗೂ ಸನ್ಮಾನಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವುದು. ಯೆಹೋವನ ಘನಕ್ಕಾಗಿ ಆ ಹಬ್ಬವನ್ನು ತಲತಲಾಂತರಕ್ಕೂ ಆಚರಿಸಬೇಕು. ಅದನ್ನು ಶಾಶ್ವತನಿಯಮವೆಂದು ಎಂದೆಂದಿಗೂ ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆ ದಿನವು ನಿಮಗೆ ಸ್ಮರಣೀಯ ದಿನವಾಗಿರುವುದು. ಅಂದು ನೀವು ಸರ್ವೇಶ್ವರನ ಗೌರವಾರ್ಥ ಹಬ್ಬವನ್ನು ಕೊಂಡಾಡಬೇಕು. ಅದನ್ನು ಶಾಶ್ವತ ನಿಯಮವೆಂದು ತಲತಲಾಂತರಕ್ಕೂ ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆ ದಿನವು ನಿಮಗೆ ಜ್ಞಾಪಕಾರ್ಥವಾಗಿರುವದು. ಅದರಲ್ಲಿ ಯೆಹೋವನ ಘನಕ್ಕಾಗಿ ಹಬ್ಬವನ್ನು ಮಾಡಬೇಕು. ಅದನ್ನು ಶಾಶ್ವತನಿಯಮವೆಂದು ತಲತಲಾಂತರಕ್ಕೂ ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವುದು. ನೀವು ಅದನ್ನು ಯೆಹೋವ ದೇವರಿಗೆ ಹಬ್ಬವಾಗಿ ತಲತಲಾಂತರಗಳಲ್ಲಿ ಆಚರಿಸಬೇಕು. ಅದನ್ನು ಶಾಶ್ವತ ನಿಯಮವೆಂದು ಎಂದೆಂದಿಗೂ ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:14
29 ತಿಳಿವುಗಳ ಹೋಲಿಕೆ  

ರಾಜನಾದ ಯೋಷೀಯನು ಜನರಿಗೆಲ್ಲ, “ನಿಮ್ಮ ದೇವರಾದ ಯೆಹೋವನಿಗಾಗಿ ಪಸ್ಕಹಬ್ಬವನ್ನು ಆಚರಿಸಿರಿ. ಈ ನಿಬಂಧನ ಗ್ರಂಥದಲ್ಲಿ ಬರೆದಿರುವಂತೆಯೇ ಅದನ್ನು ಮಾಡಿ” ಎಂದು ಆಜ್ಞಾಪಿಸಿದನು.


ನೀವು ಈ ಆಜ್ಞೆಯನ್ನು ಜ್ಞಾಪಕದಲ್ಲಿಡಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತವಾದ ನಿಯಮವಾಗಿದೆ.


ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಲೇಬೇಕು. ಯಾಕೆಂದರೆ ಆ ದಿನದಲ್ಲಿಯೇ ನಾನು ನಿಮ್ಮ ಎಲ್ಲಾ ಜನರ ಗುಂಪುಗಳನ್ನು ಈಜಿಪ್ಟಿನಿಂದ ಬಿಡಿಸಿ ಕರೆದುಕೊಂಡು ಹೋದೆನು. ಆದ್ದರಿಂದ ನಿಮ್ಮ ಸಂತತಿಯವರೆಲ್ಲರೂ ಆ ದಿನವನ್ನು ಜ್ಞಾಪಕಮಾಡಿಕೊಳ್ಳಬೇಕು. ಇದು ಶಾಶ್ವತವಾದ ಕಟ್ಟಳೆಯಾಗಿದೆ.


ಯೆಹೋವನು ಮೋಶೆ ಆರೋನರಿಗೆ, “ಪಸ್ಕಹಬ್ಬದ ನಿಯಮಗಳು ಇಂತಿವೆ: ಯಾವ ಪರದೇಶಿಯೂ ಪಸ್ಕಹಬ್ಬದ ಊಟವನ್ನು ಮಾಡಬಾರದು.


ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಪ್ರಪಂಚದಾದ್ಯಂತ ಎಲ್ಲೆಲ್ಲಿ ಸುವಾರ್ತೆಯನ್ನು ತಿಳಿಸಲಾಗುವುದೋ ಅಲ್ಲೆಲ್ಲಾ ಈ ಕಾರ್ಯವನ್ನು ಈಕೆಯ ನೆನಪಿಗಾಗಿ ತಿಳಿಸಲಾಗುವುದು” ಎಂದು ಹೇಳಿದನು.


ಯೆಹೋವನೇ, ನೀನು ಸದಾಕಾಲ ಪ್ರಸಿದ್ಧನಾಗಿರುವೆ! ಯೆಹೋವನೇ, ಜನರು ನಿನ್ನನ್ನು ಸದಾಕಾಲ ನೆನಸಿಕೊಳ್ಳುವರು.


ದೇವರು ಅಮೋಘವಾದ ಕಾರ್ಯಗಳನ್ನು ಮಾಡುವುದರಿಂದ ಆತನ ದಯೆಯನ್ನೂ ಕೃಪೆಯನ್ನೂ ಜ್ಞಾಪಿಸಿಕೊಳ್ಳುತ್ತೇವೆ.


ಯೆಹೋವನು ತನ್ನ ವಾಸಸ್ಥಾನಕ್ಕಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಜನರೂ ಒಟ್ಟಾಗಿ ಸೇರಿ ದೇವರ ಸನ್ನಿಧಾನದಲ್ಲಿ ಸಂತೋಷಪಡಿರಿ. ನಿಮ್ಮ ಹೆಂಡತಿಮಕ್ಕಳನ್ನು ಅಲ್ಲದೆ ನಿಮ್ಮ ಸೇವಕಸೇವಕಿಯರನ್ನು ನಿಮ್ಮ ಪಟ್ಟಣದಲ್ಲಿರುವ ಲೇವಿಯರನ್ನು ಮತ್ತು ವಿಧವೆಯರನ್ನು, ಅನಾಥರನ್ನು, ಪರದೇಶಿಗಳನ್ನು ಕರೆದುಕೊಂಡು ಸಂತೋಷಪಡಿರಿ.


“ಅಬೀಬ್ ತಿಂಗಳನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಆ ತಿಂಗಳಲ್ಲಿ ನಿಮ್ಮ ದೇವರಾದ ಯೆಹೋವನನ್ನು ಗೌರವಿಸುವುದಕ್ಕಾಗಿ ಪಸ್ಕಹಬ್ಬವನ್ನು ಆಚರಿಸಬೇಕು. ಯಾಕೆಂದರೆ ಆ ತಿಂಗಳಲ್ಲೇ ನಿಮ್ಮ ದೇವರಾದ ಯೆಹೋವನು ರಾತ್ರಿಯಲ್ಲಿ ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು.


ಮೋಶೆ ಆರೋನರು ಜನರೊಡನೆ ಮಾತಾಡಿದ ನಂತರ ಫರೋಹನ ಬಳಿಗೆ ಹೋಗಿ, “ಇಸ್ರೇಲರ ದೇವರಾದ ಯೆಹೋವನು ನಿನಗೆ, ‘ನನ್ನ ಜನರು ಅರಣ್ಯದೊಳಗೆ ಹೋಗಿ ಜಾತ್ರೆ ನಡೆಸಲು ಅಪ್ಪಣೆಕೊಡಬೇಕು’ ಎನ್ನುತ್ತಾನೆ” ಎಂದು ಹೇಳಿದರು.


ಆಮೇಲೆ ಯೇಸು ಸ್ವಲ್ಪ ರೊಟ್ಟಿಯನ್ನು ತೆಗೆದುಕೊಂಡನು. ಆತನು ರೊಟ್ಟಿಗಾಗಿ ದೇವರಿಗೆ ಸ್ತೋತ್ರಮಾಡಿ ಅದನ್ನು ಮುರಿದು ಅಪೊಸ್ತಲರಿಗೆ ಕೊಟ್ಟನು. ಬಳಿಕ ಯೇಸು, “ನಾನು ನಿಮಗೋಸ್ಕರ ಕೊಡುತ್ತಿರುವ ನನ್ನ ದೇಹವಿದು. ನನ್ನನ್ನು ನೆನಸಿಕೊಳ್ಳುವುದಕ್ಕಾಗಿ ಹೀಗೆ ಮಾಡಿರಿ” ಅಂದನು.


ಜನರು ಸ್ಮರಿಸಿಕೊಳ್ಳುವಂತೆ ಅವರು ಆ ಕಿರೀಟವನ್ನು ಆಲಯದೊಳಗೆ ಇಡುವರು. ಅದು ಹೆಲ್ದಾಯ, ತೋಬೀಯ, ಯೆದಾಯ ಮತ್ತು ಚೆಫನ್ಯನ ಮಗನಾದ ಹೇನ್‌ನಿಗೆ ಘನತೆಯನ್ನು ತರುವುದು.”


ಪ್ರತಿ ಮುಂಜಾನೆ ನೀನು ಐದು ಸೇರು ಗೋಧಿಹಿಟ್ಟನ್ನೂ ಎರಡು ಸೇರು ಎಣ್ಣೆಯನ್ನೂ ಒಟ್ಟಾಗಿ ಬೆರೆಸಿ ಪ್ರತಿದಿನ ಯೆಹೋವನಿಗೆ ಧಾನ್ಯ ನೈವೇದ್ಯವಾಗಿ ಸಮರ್ಪಿಸಬೇಕು.


ಇಸ್ರೇಲಿಗೆ ದಾವೀದನು ಇದನ್ನು ಆಜ್ಞೆಯನ್ನಾಗಿ ಮತ್ತು ನಿಯಮವನ್ನಾಗಿ ಮಾಡಿದನು. ಈ ನಿಯಮವು ಇವತ್ತಿಗೂ ಮುಂದುವರಿಯುತ್ತಿದೆ.


ಅದಕ್ಕೆ ನೀವು, ‘ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯು ಜೋರ್ಡನ್ ನದಿಯನ್ನು ದಾಟುತ್ತಿರುವಾಗ ಹರಿಯುವ ನೀರು ನಿಂತುಹೋಯಿತು’ ಎಂದು ಹೇಳಿರಿ. ಆ ಕಲ್ಲುಗಳು ಇಸ್ರೇಲರಿಗೆ ಸದಾಕಾಲ ಸಾಕ್ಷಿಗಳಾಗಿರುತ್ತವೆ” ಎಂದು ಹೇಳಿದನು.


ಆಗ ಯೆಹೋವನು ಆರೋನನಿಗೆ ಹೀಗೆ ಹೇಳಿದನು: “ನನಗೆ ಬರಬೇಕಾಗಿರುವ ಕೊಡುಗೆಗಳನ್ನು ಮತ್ತು ಇಸ್ರೇಲರ ಪವಿತ್ರವಾದ ಎಲ್ಲಾ ಕಾಣಿಕೆಗಳನ್ನು ಕಾಯುವ ಜವಾಬ್ದಾರಿಕೆಯನ್ನು ನಾನೇ ನಿನಗೆ ವಹಿಸಿದ್ದೇನೆ. ಅವುಗಳನ್ನು ನಿನಗೂ ನಿನ್ನ ಸಂತತಿಯವರಿಗೂ ಪಾಲಾಗಿ ಕೊಟ್ಟಿದ್ದೇನೆ. ಅವು ಯಾವಾಗಲೂ ನಿಮ್ಮವೇ.


ಆರೋನನ ಕುಟುಂಬದವನು ಮಾತ್ರ ಯೆಹೋವನ ಎದುರಿನಲ್ಲಿ ಧೂಪವನ್ನು ಹಾಕತಕ್ಕದ್ದು ಮತ್ತು ಬೇರೆ ಯಾರಾದರೂ ಹಾಕಿದರೆ ಅವರು ಕೋರಹ ಮತ್ತು ಅವನ ಹಿಂಬಾಲಕರಂತೆ ಸಾಯುವರು ಎಂಬುದನ್ನು ಇಸ್ರೇಲರಿಗೆ ಆ ಮುಚ್ಚಳವು ನೆನಪು ಮಾಡುವ ಗುರುತಾಯಿತು.


ಯಾಜಕರಾದ ಆರೋನನ ಪುತ್ರರು ಮಾತ್ರವೇ ಆ ತುತ್ತೂರಿಗಳನ್ನು ಊದಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮ.


ಈ ತಿಂಗಳ ಹದಿನಾಲ್ಕನೆಯ ದಿನದವರೆಗೆ ನೀವು ಆ ಪಶುವನ್ನು ಸಾಕಬೇಕು. ಅಂದು ಸಂಜೆ ಇಸ್ರೇಲರೆಲ್ಲರೂ ಆ ಪಶುಗಳನ್ನು ಕೊಯ್ಯಬೇಕು.


ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಹಬ್ಬ ಅವುಗಳಲ್ಲಿ ಒಂದಾಗಿದೆ. ನಾನು ನಿಮಗೆ ಆಜ್ಞಾಪಿಸಿದಂತೆ ಈ ಜಾತ್ರೆಯಲ್ಲಿ ಏಳು ದಿನ ಹುಳಿಯಿಲ್ಲದ ರೊಟ್ಟಿಯನ್ನು ನೀವು ತಿನ್ನಬೇಕು. ಈ ಹಬ್ಬವು ಏಳು ದಿನಗಳವರೆಗೆ ನಡೆಯುವುದು. ನೀವು ಇದನ್ನು ಅಬೀಬ್ ತಿಂಗಳಲ್ಲಿ ಮಾಡಬೇಕು. ಯಾಕೆಂದರೆ ಈ ತಿಂಗಳಲ್ಲಿಯೇ ನೀವು ಈಜಿಪ್ಟಿನಿಂದ ಹೊರಗೆ ಬಂದಿರಿ! ಈ ಹಬ್ಬದಲ್ಲಿ ಪ್ರತಿಯೊಬ್ಬನೂ ನನಗೆ ಕಾಣಿಕೆಯನ್ನು ಅರ್ಪಿಸಬೇಕು.


“ಅದೇ ತಿಂಗಳ ಹದಿನೈದನೆಯ ದಿನದಲ್ಲಿ ಯೆಹೋವನ ಹುಳಿಯಿಲ್ಲದ ರೊಟ್ಟಿಯ ಹಬ್ಬವಿರುತ್ತದೆ. ನೀವು ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿನಗಳವರೆಗೆ ತಿನ್ನುವಿರಿ.


ಈ ಆಜ್ಞೆಗಳನ್ನು ಬರೆದು ನಿಮ್ಮ ಕೈಗಳಿಗೆ ಕಟ್ಟಿರಿ, ನಿಮ್ಮ ಹಣೆಗಳ ಮೇಲೆ ಕಟ್ಟಿರಿ. ಇವು ನನ್ನ ಬೋಧನೆಯ ವಿಚಾರವಾಗಿ ನಿಮಗೆ ಜ್ಞಾಪಕ ಹುಟ್ಟಿಸಲು ಸಹಾಯವಾಗುವುದು.


ಆರೋನ ಮತ್ತು ಅವನ ಗಂಡುಮಕ್ಕಳಿಗೆ ದೀಪವನ್ನು ನೋಡಿಕೊಳ್ಳುವ ಕೆಲಸವಿರುವುದು. ಅವರು ದೇವದರ್ಶನಗುಡಾರದ ಮೊದಲಿನ ಕೋಣೆಯೊಳಗೆ ಹೋಗುವರು. ಇದು ಎರಡು ಕೋಣೆಗಳನ್ನು ಪ್ರತ್ಯೇಕಿಸುವ ಪರದೆಯ ಹಿಂದೆ ಒಪ್ಪಂದವಿರುವ ಕೋಣೆಯ ಹೊರಗೆ ಇರುತ್ತದೆ. ಈ ಸ್ಥಳದಲ್ಲಿ ದೀಪವು ಯೆಹೋವನ ಮುಂದೆ ಸಾಯಂಕಾಲದಿಂದ ಮುಂಜಾನೆಯವರೆಗೆ ಯಾವಾಗಲೂ ಉರಿಯುತ್ತಿರುವಂತೆ ಅವರು ನೋಡಿಕೊಳ್ಳುವರು. ಇಸ್ರೇಲರು ಮತ್ತು ಅವರ ಸಂತತಿಯವರು ಈ ನಿಯಮಕ್ಕೆ ಶಾಶ್ವತವಾಗಿ ವಿಧೇಯರಾಗಬೇಕು” ಎಂದು ಹೇಳಿದನು.


ನಿಮಗೂ ನಿಮ್ಮಲ್ಲಿರುವ ಪರದೇಶದವರಿಗೂ ಒಂದೇ ವಿಧಿಯಿರಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮ. ಯೆಹೋವನ ಸನ್ನಿಧಿಯಲ್ಲಿ ನೀವೂ ಪರದೇಶಿಯರೂ ಒಂದೇ ಆಗಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು