ವಿಮೋಚನಕಾಂಡ 12:16 - ಪರಿಶುದ್ದ ಬೈಬಲ್16 ಈ ಹಬ್ಬದ ಪ್ರಥಮ ಮತ್ತು ಕೊನೆಯ ದಿನಗಳಲ್ಲಿ ಪವಿತ್ರ ಸಭೆಯಾಗಿ ಕೂಡಿಬರಬೇಕು. ಈ ಹಬ್ಬದ ದಿನಗಳಲ್ಲಿ ನೀವು ಯಾವ ಕೆಲಸವನ್ನೂ ಮಾಡಬಾರದು. ಆದರೆ ನಿಮ್ಮ ಭೋಜನಕ್ಕಾಗಿ ಆಹಾರ ಸಿದ್ಧಪಡಿಸಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಮೊದಲನೆಯ ದಿನದಲ್ಲಿ ಪರಿಶುದ್ಧ ದೇವಾರಾಧನೆಗಾಗಿ ಸಭೆ ಸೇರಬೇಕು. ಏಳನೆಯ ದಿನದಲ್ಲಿಯೂ ದೇವಾರಾಧನೆಗಾಗಿ ಸಭೆ ಸೇರಬೇಕು. ಈ ಎರಡು ದಿನಗಳಲ್ಲಿ ಯಾವ ಕೆಲಸವನ್ನು ಮಾಡಕೂಡದು. ಊಟಕ್ಕೆ ಬೇಕಾದದ್ದನ್ನು ಮಾತ್ರ ಮಾಡಬಹುದೇ ಹೊರತು ಬೇರೆ ಯಾವ ಕೆಲಸವನ್ನು ಮಾಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಮೊದಲನೆಯ ದಿನದಲ್ಲೇ ದೇವಾರಾಧನೆಗಾಗಿ ಸಭೆ ಸೇರಬೇಕು. ಏಳನೆಯ ದಿನದಲ್ಲೂ ದೇವಾರಾಧನೆಗಾಗಿ ಸಭೆಸೇರಬೇಕು. ಈ ಎರಡೂ ದಿವಸಗಳಲ್ಲಿ ಯಾವ ಕೆಲಸವನ್ನೂ ಮಾಡಕೂಡದು. ಊಟಕ್ಕೆ ಬೇಕಾದುದನ್ನು ಮಾತ್ರ ಮಾಡಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಮೊದಲನೆಯ ದಿವಸದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು; ಏಳನೆಯ ದಿನದಲ್ಲಿಯೂ ದೇವಾರಾಧನೆಗಾಗಿ ಸಭೆಕೂಡಬೇಕು. ಈ ಎರಡು ದಿವಸಗಳಲ್ಲಿ ಯಾವ ಕೆಲಸವನ್ನೂ ಮಾಡಕೂಡದು. ಊಟಕ್ಕೆ ಬೇಕಾದದ್ದನ್ನು ಮಾಡಬಹುದೇ ಹೊರತು ಬೇರೆ ಯಾವ ಕೆಲಸವನ್ನೂ ಮಾಡಕೂಡದು. ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಆಚರಣೆಯನ್ನು ನೀವು ಕೈಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಇದಲ್ಲದೆ ಮೊದಲನೆಯ ದಿನದಲ್ಲಿ ಪರಿಶುದ್ಧ ದೇವಾರಾಧನೆಗಾಗಿ ಸಭೆ ಸೇರಬೇಕು, ಏಳನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆ ಸೇರಬೇಕು. ಊಟಕ್ಕೆ ಬೇಕಾದದ್ದನ್ನು ಮಾಡುವುದನ್ನು ಬಿಟ್ಟು, ಆ ದಿನಗಳಲ್ಲಿ ಯಾವ ತರವಾದ ಕೆಲಸವನ್ನೂ ಮಾಡಬಾರದು. ಅಧ್ಯಾಯವನ್ನು ನೋಡಿ |