ವಿಮೋಚನಕಾಂಡ 12:17 - ಪರಿಶುದ್ದ ಬೈಬಲ್17 ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಲೇಬೇಕು. ಯಾಕೆಂದರೆ ಆ ದಿನದಲ್ಲಿಯೇ ನಾನು ನಿಮ್ಮ ಎಲ್ಲಾ ಜನರ ಗುಂಪುಗಳನ್ನು ಈಜಿಪ್ಟಿನಿಂದ ಬಿಡಿಸಿ ಕರೆದುಕೊಂಡು ಹೋದೆನು. ಆದ್ದರಿಂದ ನಿಮ್ಮ ಸಂತತಿಯವರೆಲ್ಲರೂ ಆ ದಿನವನ್ನು ಜ್ಞಾಪಕಮಾಡಿಕೊಳ್ಳಬೇಕು. ಇದು ಶಾಶ್ವತವಾದ ಕಟ್ಟಳೆಯಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಬೇಕು. ಏಕೆಂದರೆ ಈ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದ್ದರಿಂದ ನೀವೂ, ನಿಮ್ಮ ಸಂತತಿಯವರೂ ಈ ದಿನವನ್ನು ಆಚರಣೆಗೆ ತರಬೇಕು. ಇದು ಶಾಶ್ವತವಾದ ನಿಯಮವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಹುಳಿರಹಿತ ರೊಟ್ಟಿಯನ್ನು ತಿನ್ನುವ ಹಬ್ಬವನ್ನು ನೀವು ಆಚರಿಸಬೇಕು. ಏಕೆಂದರೆ ಆ ದಿನದಲ್ಲೇ ನಾನು ನಿಮ್ಮ ಪಾಳೆಯದವರನ್ನು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದದ್ದು . ನೀವೂ ನಿಮ್ಮ ಸಂತತಿಯವರೂ ಆ ದಿನವನ್ನು ಆಚರಣೆಗೆ ತರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಈ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದ್ದರಿಂದ ನೀವೂ ನಿಮ್ಮ ಸಂತತಿಯವರೂ ಈ ದಿನವನ್ನು ಆಚರಣೆಗೆ ತರಬೇಕು; ಇದು ಶಾಶ್ವತವಾದ ನಿಯಮ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಬೇಕು. ಏಕೆಂದರೆ ಆ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿದ್ದೇನೆ. ಆದಕಾರಣ ನಿಮ್ಮ ಸಂತತಿಗಳಲ್ಲಿ ಅದನ್ನು ಶಾಶ್ವತ ನಿಯಮವೆಂದು ಎಂದೆಂದಿಗೂ ಆಚರಿಸಬೇಕು. ಅಧ್ಯಾಯವನ್ನು ನೋಡಿ |
ಯಜ್ಞ ಪಶುವಿನೊಂದಿಗೆ ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿನ ತಿನ್ನಬೇಕು. ಈ ಸಮಯದಲ್ಲಿ ಹುಳಿ ಬೆರೆಸಿದ ರೊಟ್ಟಿಯನ್ನು ತಿನ್ನಲೇಬಾರದು. ಹುಳಿಯಿಲ್ಲದ ರೊಟ್ಟಿಗೆ ‘ಸಂಕಟದ ರೊಟ್ಟಿ’ ಎಂದು ಕರೆಯಬೇಕು. ಯಾಕೆಂದರೆ ನೀವು ಈಜಿಪ್ಟಿನಲ್ಲಿ ದಾಸತ್ವದಲ್ಲಿದ್ದಾಗ ಅನುಭವಿಸಿದ್ದ ಸಂಕಟವನ್ನು ಅದು ನೆನಪಿಗೆ ತರುತ್ತದೆ. ನೀವು ಅಲ್ಲಿಂದ ತುಂಬಾ ಅವಸರವಾಗಿ ಹೊರಬಂದಿರಿ! ಇದನ್ನು ನಿಮ್ಮ ಜೀವಮಾನ ಪರ್ಯಂತ ಜ್ಞಾಪಿಸಿಕೊಳ್ಳಬೇಕು.