ವಿಮೋಚನಕಾಂಡ 12:19 - ಪರಿಶುದ್ದ ಬೈಬಲ್19 ಏಳು ದಿನಗಳವರೆಗೆ ನಿಮ್ಮ ಮನೆಗಳಲ್ಲಿ ಯಾವ ಹುಳಿಯೂ ಇರಬಾರದು. ಯಾವ ಇಸ್ರೇಲಿಯಾದರೂ ಯಾವ ವಿದೇಶಿಯನಾದರೂ ಈ ಹಬ್ಬದಲ್ಲಿ ಹುಳಿಯನ್ನು ತಿಂದರೆ, ಅವನನ್ನು ಇಸ್ರೇಲರ ಸಮುದಾಯದಿಂದ ಬಹಿಷ್ಕರಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆ ಏಳು ದಿನಗಳವರೆಗೆ ನಿಮ್ಮ ಮನೆಗಳಲ್ಲಿ ಹುಳಿಹಿಟ್ಟು ಇರಬಾರದು. ಹುಳಿ ಬೆರಸಿದ್ದನ್ನು ಯಾರು ತಿನ್ನುವರೋ ಅವನು ಪರದೇಶದವನಾಗಲಿ, ಸ್ವದೇಶದವನಾಗಲಿ ಇಸ್ರಾಯೇಲ ಸಮೂಹದೊಳಗಿಂದ ತೆಗೆದುಹಾಕಲ್ಪಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಏಳು ದಿನ ನಿಮ್ಮ ಮನೆಗಳಲ್ಲಿ ಹುಳಿಹಿಟ್ಟೇ ಇರಕೂಡದು. ಹುಳಿ ಬೆರಸಿದ್ದನ್ನು ತಿನ್ನುವವನು ಪರದೇಶದವನಾಗಿರಲಿ, ಸ್ವದೇಶದವನಾಗಿರಲಿ ಇಸ್ರಯೇಲ್ ಜನರಿಂದ ಬಹಿಷ್ಕೃತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆ ಏಳು ದಿನಗಳೂ ನಿಮ್ಮ ಮನೆಗಳಲ್ಲಿ ಹುಳಿಯಿಟ್ಟೇ ಇರಕೂಡದು. ಹುಳಿ ಬೆರಸಿದ್ದನ್ನು ತಿನ್ನುವವನು ಪರದೇಶದವನಾಗಲಿ ಸ್ವದೇಶದವನಾಗಲಿ ಇಸ್ರಾಯೇಲ್ ಜನರೊಳಗಿಂದ ತೆಗೆದುಹಾಕಲ್ಪಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಏಳು ದಿನಗಳವರೆಗೆ ಹುಳಿ ಹಿಟ್ಟು ನಿಮ್ಮ ಮನೆಗಳಲ್ಲಿ ಸಿಕ್ಕಬಾರದು, ಏಕೆಂದರೆ ಹುಳಿ ಬೆರೆಸಿದ್ದನ್ನು ಯಾರು ತಿನ್ನುವರೋ ಅವರು ಪರದೇಶದವರಾಗಲಿ, ಸ್ವದೇಶದವರಾಗಲಿ ಅವರನ್ನು ಇಸ್ರಾಯೇಲ್ ಸಭೆಯೊಳಗಿಂದ ಬಹಿಷ್ಕರಿಸಬೇಕು. ಅಧ್ಯಾಯವನ್ನು ನೋಡಿ |
ಯಜ್ಞ ಪಶುವಿನೊಂದಿಗೆ ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿನ ತಿನ್ನಬೇಕು. ಈ ಸಮಯದಲ್ಲಿ ಹುಳಿ ಬೆರೆಸಿದ ರೊಟ್ಟಿಯನ್ನು ತಿನ್ನಲೇಬಾರದು. ಹುಳಿಯಿಲ್ಲದ ರೊಟ್ಟಿಗೆ ‘ಸಂಕಟದ ರೊಟ್ಟಿ’ ಎಂದು ಕರೆಯಬೇಕು. ಯಾಕೆಂದರೆ ನೀವು ಈಜಿಪ್ಟಿನಲ್ಲಿ ದಾಸತ್ವದಲ್ಲಿದ್ದಾಗ ಅನುಭವಿಸಿದ್ದ ಸಂಕಟವನ್ನು ಅದು ನೆನಪಿಗೆ ತರುತ್ತದೆ. ನೀವು ಅಲ್ಲಿಂದ ತುಂಬಾ ಅವಸರವಾಗಿ ಹೊರಬಂದಿರಿ! ಇದನ್ನು ನಿಮ್ಮ ಜೀವಮಾನ ಪರ್ಯಂತ ಜ್ಞಾಪಿಸಿಕೊಳ್ಳಬೇಕು.
ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಹಬ್ಬ ಅವುಗಳಲ್ಲಿ ಒಂದಾಗಿದೆ. ನಾನು ನಿಮಗೆ ಆಜ್ಞಾಪಿಸಿದಂತೆ ಈ ಜಾತ್ರೆಯಲ್ಲಿ ಏಳು ದಿನ ಹುಳಿಯಿಲ್ಲದ ರೊಟ್ಟಿಯನ್ನು ನೀವು ತಿನ್ನಬೇಕು. ಈ ಹಬ್ಬವು ಏಳು ದಿನಗಳವರೆಗೆ ನಡೆಯುವುದು. ನೀವು ಇದನ್ನು ಅಬೀಬ್ ತಿಂಗಳಲ್ಲಿ ಮಾಡಬೇಕು. ಯಾಕೆಂದರೆ ಈ ತಿಂಗಳಲ್ಲಿಯೇ ನೀವು ಈಜಿಪ್ಟಿನಿಂದ ಹೊರಗೆ ಬಂದಿರಿ! ಈ ಹಬ್ಬದಲ್ಲಿ ಪ್ರತಿಯೊಬ್ಬನೂ ನನಗೆ ಕಾಣಿಕೆಯನ್ನು ಅರ್ಪಿಸಬೇಕು.