Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:20 - ಪರಿಶುದ್ದ ಬೈಬಲ್‌

20 ಈ ಹಬ್ಬದಲ್ಲಿ ನೀವು ಹುಳಿಯನ್ನು ತಿನ್ನಬಾರದು. ನೀವು ಎಲ್ಲೇ ವಾಸವಾಗಿದ್ದರೂ ಹುಳಿಯಿಲ್ಲದ ರೊಟ್ಟಿಯನ್ನೇ ತಿನ್ನಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನೀವು ನಿಮ್ಮ ಮನೆಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕೇ ಹೊರತು, ಹುಳಿಕಲಸಿದ ಯಾವುದನ್ನೂ ತಿನ್ನಕೂಡದು’” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನೀವು ನಿಮ್ಮ ಎಲ್ಲಾ ಮನೆಗಳಲ್ಲಿ ಹುಳಿರಹಿತ ರೊಟ್ಟಿಗಳನ್ನು ತಿನ್ನಬೇಕೇ ಹೊರತು ಹುಳಿಸಹಿತವಾದ ಯಾವುದನ್ನೂ ತಿನ್ನಕೂಡದು,” ಎಂದು ವಿಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನೀವು ನಿಮ್ಮ ಎಲ್ಲಾ ಮನೆಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕೇ ಹೊರತು ಹುಳಿಗೂಡಿದ ಯಾವದನ್ನೂ ತಿನ್ನಕೂಡದು ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಹುಳಿ ಕಲಸಿದ್ದು ಯಾವುದೇ ಆಗಿರಲಿ ನೀವು ತಿನ್ನಬಾರದು. ನಿಮ್ಮ ಎಲ್ಲಾ ನಿವಾಸಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:20
4 ತಿಳಿವುಗಳ ಹೋಲಿಕೆ  

ಬಳಿಕ ಯೇಸು ಜನರಿಗೆ ಇನ್ನೊಂದು ಸಾಮ್ಯವನ್ನು ಹೇಳಿದನು: “ಪರಲೋಕರಾಜ್ಯವು ಒಬ್ಬ ಸ್ತ್ರೀ ರೊಟ್ಟಿ ಮಾಡುವುದಕ್ಕೆ ಒಂದು ದೊಡ್ಡ ಬೋಗುಣಿಯ ಹಿಟ್ಟಿಗೆ ಬೆರೆಸಿದ ಹುಳಿಗೆ ಹೋಲಿಕೆಯಾಗಿದೆ. ಆ ಹುಳಿಯು ನಾದಿದ ಹಿಟ್ಟನ್ನೆಲ್ಲಾ ಉಬ್ಬಿಸಿತು.”


ಏಳು ದಿನಗಳವರೆಗೆ ನಿಮ್ಮ ಮನೆಗಳಲ್ಲಿ ಯಾವ ಹುಳಿಯೂ ಇರಬಾರದು. ಯಾವ ಇಸ್ರೇಲಿಯಾದರೂ ಯಾವ ವಿದೇಶಿಯನಾದರೂ ಈ ಹಬ್ಬದಲ್ಲಿ ಹುಳಿಯನ್ನು ತಿಂದರೆ, ಅವನನ್ನು ಇಸ್ರೇಲರ ಸಮುದಾಯದಿಂದ ಬಹಿಷ್ಕರಿಸಬೇಕು.


ಆದ್ದರಿಂದ ಮೋಶೆಯು ಹಿರಿಯರ ಸಭೆ ಸೇರಿಸಿ, “ನಿಮ್ಮ ಕುಟುಂಬಗಳಿಗೆ ಬೇಕಾದ ಪಶುಗಳನ್ನು ತೆಗೆದುಕೊಂಡು ಪಸ್ಕಕ್ಕಾಗಿ ಅವುಗಳನ್ನು ಕೊಯ್ಯಿರಿ.


“ನೀವು ಯಜ್ಞಮಾಡುವಾಗ ಆ ಯಜ್ಞಪಶುವಿನ ರಕ್ತದೊಡನೆ ಹುಳಿಹಿಟ್ಟನ್ನು ಸಮರ್ಪಿಸಬಾರದು; “ಪಸ್ಕ ಭೋಜನದ ಮಾಂಸದಲ್ಲಿ ಏನನ್ನೂ ಮರುದಿನದ ಮುಂಜಾನೆಯವರೆಗೆ ಉಳಿಸಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು