Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:29 - ಪರಿಶುದ್ದ ಬೈಬಲ್‌

29 ಮಧ್ಯರಾತ್ರಿಯಲ್ಲಿ ಯೆಹೋವನು ಈಜಿಪ್ಟಿನಲ್ಲಿದ್ದ ಚೊಚ್ಚಲು ಗಂಡುಮಕ್ಕಳನ್ನೆಲ್ಲಾ ಸಂಹರಿಸಿದನು. ಫರೋಹನ ಚೊಚ್ಚಲು ಮಗನಿಂದಿಡಿದು ಸೆರೆಮನೆಯಲ್ಲಿದ್ದ ಕೈದಿಯ ಚೊಚ್ಚಲು ಮಗನವರೆಗೆ ಇರುವ ಎಲ್ಲಾ ಚೊಚ್ಚಲು ಮಕ್ಕಳನ್ನು ಆತನು ಸಂಹರಿಸಿದನು. ಚೊಚ್ಚಲು ಪಶುಗಳೂ ಸಂಹರಿಸಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಮಧ್ಯರಾತ್ರಿಯಲ್ಲಿ ಯೆಹೋವನು ಸಿಂಹಾಸನದಲ್ಲಿರುವ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನವರೆಗೂ, ಐಗುಪ್ತ ದೇಶದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಸಂಹಾರ ಮಾಡಿದನು. ಪಶುಗಳ ಚೊಚ್ಚಲು ಮರಿಗಳನ್ನೂ ಸಂಹಾರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಅರ್ಧರಾತ್ರಿಯಲ್ಲಿ ಸರ್ವೇಶ್ವರ ಸ್ವಾಮಿ ಸಿಂಹಾಸನಾರೂಢನಾಗಬೇಕಾಗಿದ್ದ ಫರೋಹನ ಚೊಚ್ಚಲು ಮಗನು ಮೊದಲ್ಗೊಂಡು ಸೆರೆಯಲ್ಲಿದ್ದ ಖೈದಿಯ ಚೊಚ್ಚಲ ಮಗನವರೆಗೂ ಈಜಿಪ್ಟ್ ದೇಶದಲ್ಲಿದ್ದ ಎಲ್ಲ ಚೊಚ್ಚಲು ಮಕ್ಕಳನ್ನೂ ಪ್ರಾಣಿಗಳ ಚೊಚ್ಚಲ ಮರಿಗಳನ್ನೂ ಸಂಹಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅರ್ಧರಾತ್ರಿಯಲ್ಲಿ ಯೆಹೋವನು ಸಿಂಹಾಸನದಲ್ಲಿರುವ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಬಂದಿವಾನನ ಚೊಚ್ಚಲು ಮಗನವರೆಗೂ ಐಗುಪ್ತದೇಶದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಪಶುಗಳ ಚೊಚ್ಚಲು ಮರಿಗಳನ್ನೂ ಸಂಹಾರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಮಧ್ಯರಾತ್ರಿಯಲ್ಲಿ ಸಿಂಹಾಸನದ ಮೇಲೆ ಕೂತುಕೊಂಡ ಫರೋಹನ ಚೊಚ್ಚಲು ಮಗನು ಮೊದಲುಗೊಂಡು, ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನವರೆಗೂ, ಎಂದರೆ ಈಜಿಪ್ಟ್ ದೇಶದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ, ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವನ್ನೂ ಯೆಹೋವ ದೇವರು ಸಂಹರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:29
27 ತಿಳಿವುಗಳ ಹೋಲಿಕೆ  

ಈಜಿಪ್ಟಿನವರ ಎಲ್ಲಾ ಚೊಚ್ಚಲು ಗಂಡುಮಕ್ಕಳನ್ನು ಆತನು ಕೊಂದುಹಾಕಿದನು. ಹಾಮನ ಕುಲಕ್ಕೆ ಸೇರಿದ ಪ್ರತಿಯೊಬ್ಬ ಚೊಚ್ಚಲ ಮಗನನ್ನು ಆತನು ಕೊಂದುಹಾಕಿದನು.


ನನ್ನ ಮಗನು ನಿನ್ನ ದೇಶದಿಂದ ಹೋಗಿ ನನ್ನನ್ನು ಆರಾಧಿಸಲು ನೀನು ಅಪ್ಪಣೆಕೊಡಬೇಕು. ಇಲ್ಲವಾದರೆ ನಾನು ನಿನ್ನ ಚೊಚ್ಚಲಮಗನನ್ನು ಕೊಲ್ಲುವೆನು’ ಎಂದು ಯೆಹೋವನು ಹೇಳುತ್ತಾನೆ” ಎಂಬುದಾಗಿ ತಿಳಿಸಬೇಕು.


ಆತನು ಈಜಿಪ್ಟಿನಲ್ಲಿ ಚೊಚ್ಚಲು ಪುರುಷರನ್ನೂ ಪ್ರಾಣಿಗಳನ್ನೂ ನಾಶಮಾಡಿದನು.


ಬಳಿಕ ದೇವರು ಈಜಿಪ್ಟ್ ದೇಶದ ಎಲ್ಲಾ ಚೊಚ್ಚಲು ಗಂಡುಮಕ್ಕಳನ್ನು ಕೊಂದುಹಾಕಿದನು.


ಆತನು ಈಜಿಪ್ಟಿನಲ್ಲಿ ಚೊಚ್ಚಲು ಪುರುಷರನ್ನೂ ಪ್ರಾಣಿಗಳನ್ನೂ ಸಂಹರಿಸಿದನು. ಆತನ ಪ್ರೀತಿ ಶಾಶ್ವತವಾದದ್ದು.


ಇಸ್ರೇಲರಲ್ಲಿ ಚೊಚ್ಚಲಾದ ಮನುಷ್ಯರೂ ಪಶುಗಳೂ ನನ್ನ ಸ್ವತ್ತಾಗಿರುವರು. ಈಜಿಪ್ಟ್ ದೇಶದಲ್ಲಿದ್ದ ಚೊಚ್ಚಲಾದದ್ದನ್ನೆಲ್ಲ ನಾನು ಸಂಹರಿಸಿದಾಗ ಇಸ್ರೇಲರ ಚೊಚ್ಚಲಾದದ್ದನ್ನು ನನ್ನ ಸ್ವಂತಕ್ಕಾಗಿ ಪ್ರತಿಷ್ಠಿಸಿಕೊಂಡೆನಲ್ಲಾ.


“ಆ ರಾತ್ರಿ ನಾನು ಈಜಿಪ್ಟಿನ ಮೂಲಕ ಹಾದುಹೋಗಿ ಈಜಿಪ್ಟಿನ ಚೊಚ್ಚಲು ಪಶುಗಳನ್ನೂ ಚೊಚ್ಚಲು ಗಂಡುಮಕ್ಕಳನ್ನೂ ಕೊಲ್ಲುವೆನು; ಈಜಿಪ್ಟಿನ ಎಲ್ಲಾ ದೇವರುಗಳಿಗೆ ತೀರ್ಪು ಮಾಡುವೆನು. ನಾನೇ ಯೆಹೋವನೆಂದು ತೋರಿಸಿಕೊಡುವೆನು.


ಪಸ್ಕಹಬ್ಬವನ್ನು ಆಚರಿಸಿ, ಬಾಗಿಲುಗಳ ಮೇಲೆ ರಕ್ತವನ್ನು ಹಚ್ಚಿದನು. ಯೆಹೂದ್ಯ ಜನರ ಚೊಚ್ಚಲು ಮಕ್ಕಳನ್ನು ಮರಣದೂತನು ಸಂಹರಿಸಿದಂತೆ ರಕ್ತವನ್ನು ಬಾಗಿಲುಗಳ ಮೇಲೆ ಹಚ್ಚಲಾಯಿತು. ಅವನು ತನ್ನಲ್ಲಿದ್ದ ನಂಬಿಕೆಯಿಂದಲೇ ಹೀಗೆ ಮಾಡಿದನು.


ಈಜಿಪ್ಟಿನವರು ಯೆಹೋವನು ಕೊಂದುಹಾಕಿದ ತಮ್ಮ ಚೊಚ್ಚಲು ಮಕ್ಕಳನ್ನು ಹೂಳಿಡುತ್ತಿದ್ದರು. ಯೆಹೋವನು ಈಜಿಪ್ಟಿನ ದೇವರುಗಳನ್ನು ಶಿಕ್ಷಿಸಿದನು.


ಈಜಿಪ್ಟಿನಲ್ಲಿ ಫರೋಹನು ತನ್ನ ಹೃದಯವನ್ನು ಕಠಿಣಪಡಿಸಿಕೊಂಡು ನಮ್ಮನ್ನು ಕಳುಹಿಸಿಕೊಡಲಿಲ್ಲ. ಆಗ ಯೆಹೋವನು ಆ ದೇಶದ ಚೊಚ್ಚಲು ಗಂಡುಮಕ್ಕಳನ್ನೆಲ್ಲಾ ಸಂಹರಿಸಿದನು. (ಯೆಹೋವನು ಚೊಚ್ಚಲು ಪಶುಗಳನ್ನು ಮತ್ತು ಚೊಚ್ಚಲು ಗಂಡುಮಕ್ಕಳನ್ನು ಕೊಂದನು.) ಆದ್ದರಿಂದ ನಾವು ಚೊಚ್ಚಲಾದ ಪ್ರತಿಯೊಂದು ಗಂಡುಪಶುವನ್ನು ಯೆಹೋವನಿಗೆ ಯಜ್ಞವಾಗಿ ಅರ್ಪಿಸುತ್ತೇವೆ. ಈ ಕಾರಣದಿಂದಲೇ, ನಮ್ಮ ಪ್ರತಿಯೊಂದು ಗಂಡುಮಗುವನ್ನು ಯೆಹೋವನಿಂದ ಮತ್ತೆ ಖರೀದಿ ಮಾಡುತ್ತೇವೆ’ ಎಂದು ಹೇಳುವಿರಿ.


ದೇವರ ಚೊಚ್ಚಲು ಮಕ್ಕಳ ಸಭೆಗೆ ನೀವು ಬಂದಿರುವಿರಿ. ಅವರ ಹೆಸರುಗಳನ್ನು ಪರಲೋಕದಲ್ಲಿ ಬರೆಯಲಾಗಿದೆ. ನೀವು ಜನರಿಗೆಲ್ಲ ತೀರ್ಪು ನೀಡುವ ದೇವರ ಬಳಿಗೂ ಪರಿಪೂರ್ಣರನ್ನಾಗಿ ಮಾಡಲ್ಪಟ್ಟ ಒಳ್ಳೆಯ ಜನರ ಆತ್ಮಗಳ ಬಳಿಗೂ ಬಂದಿರುವಿರಿ.


ಜೆರುಸಲೇಮೇ, ನಾವು ನಿನ್ನ ಒಡಂಬಡಿಕೆಗೆ ಮುದ್ರೆ ಹಾಕಲು ರಕ್ತವನ್ನು ಉಪಯೋಗಿಸಿದೆವು. ಆದ್ದರಿಂದ ನೆಲದ ಹೊಂಡದೊಳಗಿಂದ ಜನರನ್ನು ಬಿಡುಗಡೆ ಮಾಡಿದ್ದೇನೆ.


ಅವರು ಯೆರೆಮೀಯನನ್ನು ಹಗ್ಗದಿಂದ ಮೇಲಕ್ಕೆ ಎಳೆದು ಬಾವಿಯಿಂದ ಹೊರತೆಗೆದರು. ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ವಾಸಿಸಿದನು.


ಆಗ ಆ ಅಧಿಕಾರಿಗಳು ಯೆರೆಮೀಯನನ್ನು ಹಿಡಿದು ಮಲ್ಕೀಯನ ಬಾವಿಯೊಳಗೆ ಹಾಕಿದರು. (ಮಲ್ಕೀಯನು ರಾಜವಂಶದವನಾಗಿದ್ದನು.) ಆ ಬಾವಿಯು ಕಾರಾಗೃಹದ ಅಂಗಳದಲ್ಲಿತ್ತು. ಆ ಅಧಿಕಾರಿಗಳು ಹಗ್ಗಗಳನ್ನು ಕಟ್ಟಿ ಯೆರೆಮೀಯನನ್ನು ಬಾವಿಯಲ್ಲಿ ಇಳಿಬಿಟ್ಟರು. ಆ ಬಾವಿಯಲ್ಲಿ ಸ್ವಲ್ಪವೂ ನೀರಿರಲಿಲ್ಲ. ಕೇವಲ ಕೇಸರಿತ್ತು. ಯೆರೆಮೀಯನು ಕೆಸರಿನಲ್ಲಿ ಮುಳುಗಿಹೋದನು.


ಸೆರೆಯಲ್ಲಿರುವವರು ಬೇಗನೆ ಬಿಡುಗಡೆ ಹೊಂದುವರು. ಅವರು ಸೆರೆಮನೆಯಲ್ಲಿ ಸತ್ತು ಕೊಳೆಯುವುದಿಲ್ಲ. ಅವರಿಗೆ ತಿನ್ನಲು ಬೇಕಾದಷ್ಟು ಊಟವಿರುವದು.


ಅನೇಕ ಮಂದಿ ಒಟ್ಟು ಸೇರುವರು. ಕೆಲವರು ಗುಂಡಿಯಲ್ಲಿ ಸಿಕ್ಕಿಹಾಕಿಕೊಳ್ಳುವರು. ಕೆಲವರು ಸೆರೆಹಿಡಿಯಲ್ಪಡುವರು. ಆಮೇಲೆ ಸ್ವಲ್ಪ ಕಾಲದ ನಂತರ ಅವರ ನ್ಯಾಯವಿಚಾರಣೆ ನಡಿಯುವದು.


ಒಬ್ಬನು ಕ್ಷಣಮಾತ್ರದೊಳಗೆ ಮಧ್ಯರಾತ್ರಿಯಲ್ಲಿ ಸಾಯಬಹುದು. ಜನರು ಕಾಯಿಲೆಯಿಂದ ಸಾಯಬಹುದು. ದುಷ್ಟರು ಸಹ ಯಾವುದೇ ಕಾರಣವಿಲ್ಲದೆ ಸಾಯಬಹುದು.


ನೀವು ಈಜಿಪ್ಟಿನಲ್ಲಿದ್ದಾಗ ನಾನು ಈಜಿಪ್ಟಿನವರ ಎಲ್ಲಾ ಚೊಚ್ಚಲು ಮಕ್ಕಳನ್ನು ಕೊಂದೆನು. ಆ ಕಾಲದಲ್ಲಿ ನಾನು ಇಸ್ರೇಲರ ಎಲ್ಲಾ ಚೊಚ್ಚಲು ಮಕ್ಕಳನ್ನು ನನ್ನವರನ್ನಾಗಿ ತೆಗೆದುಕೊಂಡೆನು. ಎಲ್ಲಾ ಚೊಚ್ಚಲು ಗಂಡುಮಕ್ಕಳು ಮತ್ತು ಚೊಚ್ಚಲು ಪಶುಗಳು ನನ್ನದಾಗಿದ್ದವು. ಆದರೆ ಈಗ ನಿಮ್ಮ ಎಲ್ಲಾ ಚೊಚ್ಚಲು ಗಂಡುಮಕ್ಕಳನ್ನು ನಿಮಗೇ ಹಿಂದಕ್ಕೆ ಕೊಡುತ್ತಿದ್ದೇನೆ ಮತ್ತು ಲೇವಿಯರನ್ನು ನನ್ನವರನ್ನಾಗಿ ಮಾಡುತ್ತಿದ್ದೇನೆ. ನಾನೇ ಯೆಹೋವನು!”


ಮರುದಿನ ಯೆಹೋವನು ಈ ಕಾರ್ಯವನ್ನು ಮಾಡಿದನು. ಈಜಿಪ್ಟಿನ ಹೊಲಗಳಲ್ಲಿದ್ದ ಪಶುಗಳೆಲ್ಲಾ ಸತ್ತುಹೋದವು; ಆದರೆ ಇಸ್ರೇಲರಿಗೆ ಸೇರಿದ ಯಾವ ಪಶುವೂ ಸಾಯಲಿಲ್ಲ.


ಯೆಹೋವನು ಮೋಶೆ ಮತ್ತು ಆರೋನರಿಗೆ ಆಜ್ಞಾಪಿಸಿದ್ದಂತೆಯೇ ಇಸ್ರೇಲರು ಮಾಡಿದರು.


ಆತನು ತನ್ನ ಕೋಪವನ್ನು ತೋರಿಸಿದನು. ಅವರಲ್ಲಿ ಯಾರೂ ಬದುಕದಂತೆ ಆತನು ಮಾಡಿದನು. ಮರಣಕರವಾದ ರೋಗದಿಂದ ಅವರಿಗೆ ಸಾವನ್ನು ಬರಮಾಡಿದನು.


ರೋಗವು ಆತನ ಮುಂದೆ ಹೊರಟಿತು. ನಾಶಕನು ಆತನನ್ನು ಹಿಂಬಾಲಿಸಿದನು.


ಆದರೆ ನಾನೂರು ವರ್ಷಗಳಾದ ಮೇಲೆ ಅವರ ಮೇಲೆ ದೊರೆತನ ಮಾಡಿದ ಆ ದೇಶವನ್ನು ನಾನು ದಂಡಿಸುವೆನು; ನಿನ್ನ ಜನರು ಆ ದೇಶವನ್ನು ಬಿಟ್ಟು ಹೊರಡುವರು. ನಿನ್ನ ಜನರು ಅದನ್ನು ಬಿಡುವಾಗ ತಮ್ಮೊಡನೆ ಸಂಪತ್ತುಗಳನ್ನು ತೆಗೆದುಕೊಂಡು ಹೋಗುವರು.


ಬಳಿಕ ಯೆಹೋವನು ಮೋಶೆಗೆ, “ನಾನು ಫರೋಹನಿಗೂ ಈಜಿಪ್ಟಿಗೂ ಮತ್ತೊಂದು ವಿಪತ್ತನ್ನು ಬರಮಾಡುತ್ತೇನೆ. ಆಗ ಅವನು ನಿಮ್ಮನ್ನು ಈಜಿಪ್ಟಿನಿಂದ ಕಳುಹಿಸುವನು; ನಿಮ್ಮನ್ನು ಬಲವಂತದಿಂದ ಕಳುಹಿಸಿಬಿಡುವನು.


ನೋಡು, ಕೆಲವರು ನಿನ್ನ ಮೇಲೆ ಕೋಪಗೊಂಡಿದ್ದಾರೆ. ಆದರೆ ಅವರು ನಾಚಿಕೆಪಡುವರು. ನಿನ್ನ ಶತ್ರುಗಳು ಕಳೆದುಹೋಗಿ ಕಾಣದೆಹೋಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು