ವಿಮೋಚನಕಾಂಡ 12:3 - ಪರಿಶುದ್ದ ಬೈಬಲ್3 ಈ ಆಜ್ಞೆಯು ಇಡೀ ಇಸ್ರೇಲರ ಸಮೂಹಕ್ಕೆ ಅನ್ವಯಿಸುತ್ತದೆ. ಈ ತಿಂಗಳ ಹತ್ತನೆಯ ದಿನದಲ್ಲಿ ಪ್ರತಿಯೊಬ್ಬನು ತನ್ನ ಮನೆಯಲ್ಲಿರುವ ಜನರಿಗಾಗಿ ಒಂದು ಕುರಿಮರಿಯನ್ನು ಅಥವಾ ಒಂದು ಆಡುಮರಿಯನ್ನು ಕೊಯ್ಯಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇದರ ವಿಷಯದಲ್ಲಿ ನೀವು ಇಸ್ರಾಯೇಲರ ಸಮೂಹಕ್ಕೆಲ್ಲಾ ಹೀಗೆ ಅಪ್ಪಣೆಮಾಡಬೇಕು, ‘ಈ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮ ನಿಮ್ಮ ಗೋತ್ರಗಳ ಪ್ರತಿಯೊಂದು ಮನೆಯವರು ಒಂದೊಂದು ಕುರಿಮರಿಯನ್ನಾಗಲಿ, ಆಡುಮರಿಯನ್ನಾಗಲಿ ತೆಗೆದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಈ ವಿಷಯದಲ್ಲಿ ನೀವು ಇಸ್ರಯೇಲರ ಸಮಾಜಕ್ಕೆಲ್ಲ ಈ ರೀತಿ ಕಟ್ಟಳೆಯಿಡಬೇಕು: ‘ಈ ತಿಂಗಳ ಹತ್ತನೆಯ ದಿನದಲ್ಲಿ ನಿಮ್ಮ ನಿಮ್ಮ ಗೋತ್ರಗಳ ಪ್ರತಿಯೊಂದು ಮನೆಯವರು ಒಂದೊಂದು ಕುರಿಮರಿಯನ್ನಾಗಲಿ, ಆಡುಮರಿಯನ್ನಾಗಲಿ ಆರಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಇದರ ವಿಷಯದಲ್ಲಿ ನೀವು ಇಸ್ರಾಯೇಲ್ಯರ ಸಮೂಹಕ್ಕೆಲ್ಲಾ ಅಪ್ಪಣೆ ಮಾಡಬೇಕಾದದ್ದೇನಂದರೆ - ಈ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮ ನಿಮ್ಮ ಗೋತ್ರಗಳ ಪ್ರತಿಯೊಂದು ಮನೆಯವರು ಒಂದೊಂದು ಕುರಿಮರಿಯನ್ನಾಗಲಿ ಆಡುಮರಿಯನ್ನಾಗಲಿ ತೆಗೆದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಇಸ್ರಾಯೇಲ್ ಸಭೆಗೆಲ್ಲಾ ನೀವು ಹೇಳಬೇಕಾದದ್ದೇನೆಂದರೆ, ಈ ತಿಂಗಳಿನ ಹತ್ತನೆಯ ದಿನದಲ್ಲಿ ಅವರು ತಮಗೆ ಪ್ರತಿ ಗೋತ್ರಗಳ ಪ್ರತಿಯೊಂದು ಕುಟುಂಬಕ್ಕೆ ಒಂದರಂತೆ ಕುರಿಮರಿಯನ್ನು ತೆಗೆದುಕೊಳ್ಳಬೇಕು. ಅಧ್ಯಾಯವನ್ನು ನೋಡಿ |
“‘ನಾಳೆ ಬೆಳಿಗ್ಗೆ ನೀವೆಲ್ಲರು ಯೆಹೋವನ ಮುಂದೆ ಬಂದು ನಿಲ್ಲಬೇಕು. ಎಲ್ಲಾ ಕುಲಗಳು ಯೆಹೋವನ ಮುಂದೆ ಬಂದು ನಿಲ್ಲಬೇಕು. ಯೆಹೋವನು ಒಂದು ಕುಲವನ್ನು ಸೂಚಿಸುತ್ತಾನೆ. ಆಗ ಆ ಕುಲ ಮಾತ್ರ ಮುಂದೆ ನಿಲ್ಲಬೇಕು. ಆಗ ಯೆಹೋವನು ಒಂದು ಗೋತ್ರವನ್ನು ಸೂಚಿಸುತ್ತಾನೆ. ಆಗ ಆ ಗೋತ್ರದವರು ಮಾತ್ರ ಯೆಹೋವನ ಮುಂದೆ ನಿಲ್ಲಬೇಕು. ಆಗ ಯೆಹೋವನು ಆ ಗೋತ್ರದ ಪ್ರತಿಯೊಂದು ಕುಟುಂಬವನ್ನು ನೋಡಿ, ಒಂದು ಕುಟುಂಬವನ್ನು ಸೂಚಿಸುತ್ತಾನೆ. ಬಳಿಕ ಯೆಹೋವನು ಆ ಕುಟುಂಬದ ಪ್ರತಿಯೊಬ್ಬ ಮನುಷ್ಯನನ್ನು ನೋಡುತ್ತಾನೆ.