ವಿಮೋಚನಕಾಂಡ 12:30 - ಪರಿಶುದ್ದ ಬೈಬಲ್30 ಆ ರಾತ್ರಿಯಲ್ಲಿ ಫರೋಹನೂ ಅವನ ಅಧಿಕಾರಿಗಳೂ ಈಜಿಪ್ಟಿನ ಜನರೆಲ್ಲರೂ ಎದ್ದರು. ಈಜಿಪ್ಟಿನಲ್ಲಿ ಮಹಾ ಗೋಳಾಟ ಉಂಟಾಯಿತು. ಯಾಕೆಂದರೆ ಸಾವಿಲ್ಲದ ಮನೆಯೇ ಇರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಆ ರಾತ್ರಿಯಲ್ಲಿ ಫರೋಹನೂ, ಅವನ ಪರಿವಾರದವರೂ, ಐಗುಪ್ತ್ಯರೆಲ್ಲರೂ ಎದ್ದು ನೋಡಲಾಗಿ ಸಾವಿಲ್ಲದ ಮನೆ ಒಂದೂ ಇರಲಿಲ್ಲ. ಐಗುಪ್ತ ದೇಶದಲ್ಲಿ ದೊಡ್ಡ ಗೋಳಾಟವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಆ ರಾತ್ರಿ ಫರೋಹನೂ ಅವನ ಪರಿವಾರದವರೂ ಈಜಿಪ್ಟಿನವರೆಲ್ಲರೂ ಎದ್ದು ನೋಡಿದಾಗ ಶವವಿಲ್ಲದ ಮನೆ ಒಂದೂ ಇರಲಿಲ್ಲ. ಆದ್ದರಿಂದ ಆ ದೇಶದಲ್ಲೆಲ್ಲಾ ದೊಡ್ಡ ಗೋಳಾಟ ಎದ್ದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಆ ರಾತ್ರಿಯಲ್ಲಿ ಫರೋಹನೂ ಅವನ ಪರಿವಾರದವರೂ ಐಗುಪ್ತ್ಯರೆಲ್ಲರೂ ಎದ್ದು ನೋಡಲಾಗಿ ಶವವಿಲ್ಲದ ಮನೆ ಒಂದೂ ಇರಲಿಲ್ಲವಾದದರಿಂದ ಐಗುಪ್ತದೇಶದಲ್ಲಿ ದೊಡ್ಡ ಗೋಳಾಟವುಂಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಆಗ ಫರೋಹನೂ, ಅವನ ಎಲ್ಲಾ ಅಧಿಕಾರಿಗಳೂ, ಎಲ್ಲಾ ಈಜಿಪ್ಟಿನವರೂ ರಾತ್ರಿಯಲ್ಲಿ ಎದ್ದರು. ಆ ಈಜಿಪ್ಟಿನಲ್ಲಿ ದೊಡ್ಡ ಗೋಳಾಟವಾಯಿತು. ಏಕೆಂದರೆ ಅಲ್ಲಿ ಸತ್ತವರು ಇಲ್ಲದ ಒಂದು ಮನೆಯಾದರೂ ಇರಲಿಲ್ಲ. ಅಧ್ಯಾಯವನ್ನು ನೋಡಿ |