Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:31 - ಪರಿಶುದ್ದ ಬೈಬಲ್‌

31 ಆದ್ದರಿಂದ ಆ ರಾತ್ರಿ, ಫರೋಹನು ಮೋಶೆ ಆರೋನರನ್ನು ಕರೆಸಿ, “ನನ್ನ ಜನರನ್ನು ಬಿಟ್ಟುಹೋಗಿ. ನೀವು ಕೇಳಿಕೊಂಡಂತೆ ನೀವು ಮತ್ತು ನಿಮ್ಮ ಜನರು ಹೊರಟುಹೋಗಿ ಯೆಹೋವನನ್ನು ಆರಾಧಿಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಫರೋಹನು ಆ ರಾತ್ರಿಯಲ್ಲೇ ಮೋಶೆ ಮತ್ತು ಆರೋನರನ್ನು ಕರೆಯಿಸಿ ಅವರಿಗೆ, “ನೀವು ಎದ್ದು ನನ್ನ ಜನರ ಮಧ್ಯದಿಂದ ಹೊರಟುಹೋಗಿರಿ. ನೀವು ಕೇಳಿಕೊಂಡ ಮೇರೆಗೆ ಯೆಹೋವನನ್ನು ಆರಾಧಿಸುವುದಕ್ಕೆ ನೀವು ಮತ್ತು ಇಸ್ರಾಯೇಲರು ಹೊರಟುಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಫರೋಹನು ಆ ರಾತ್ರಿಯಲ್ಲೆ ಮೋಶೆ ಮತ್ತು ಆರೋನರನ್ನು ಕರೆಯಿಸಿದನು. “ನೀವೂ ಹಾಗು ಇಸ್ರಯೇಲರೆಲ್ಲರೂ ನನ್ನ ಜನರನ್ನು ಬಿಟ್ಟು ಹೊರಟುಹೋಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಫರೋಹನು ಆ ರಾತ್ರಿಯಲ್ಲೇ ಮೋಶೆ ಆರೋನರನ್ನು ಕರಿಸಿ - ನೀವೂ ಇಸ್ರಾಯೇಲ್ಯರೆಲ್ಲರೂ ನನ್ನ ಜನರ ಮಧ್ಯದಿಂದ ಹೊರಟುಹೋಗಿರಿ; ನೀವು ಕೇಳಿಕೊಂಡ ಮೇರೆಗೆ ಯೆಹೋವನನ್ನು ಆರಾಧಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಫರೋಹನು ರಾತ್ರಿಯಲ್ಲಿ ಮೋಶೆ ಆರೋನರನ್ನು ಕರೆಯಿಸಿ ಅವರಿಗೆ, “ನೀವು ಮತ್ತು ಇಸ್ರಾಯೇಲರೆಲ್ಲರೂ ಎದ್ದು ನನ್ನ ಜನರೊಳಗಿಂದ ಹೊರಟು ಹೋಗಿರಿ. ನೀವು ಹೇಳಿದ ಹಾಗೆಯೇ, ಯೆಹೋವ ದೇವರನ್ನು ಆರಾಧಿಸುವುದಕ್ಕೆ ಹೊರಟುಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:31
12 ತಿಳಿವುಗಳ ಹೋಲಿಕೆ  

ಆಗ ಯೆಹೋವನು ಮೋಶೆಗೆ, “ನಾನು ಫರೋಹನಿಗೆ ಮಾಡುವುದನ್ನು ಈಗ ನೀನು ನೋಡುವೆ. ನಾನು ನನ್ನ ಮಹಾಶಕ್ತಿಯನ್ನು ಅವನಿಗೆ ವಿರುದ್ಧವಾಗಿ ಉಪಯೋಗಿಸುವುದರಿಂದ ಅವನು ನನ್ನ ಜನರನ್ನು ಹೋಗಗೊಡಿಸುವನು; ಬಲವಂತದಿಂದ ಅವರನ್ನು ಹೊರಡಿಸುವನು” ಎಂದು ಹೇಳಿದನು.


ದೇವಜನರು ಈಜಿಪ್ಟಿನಿಂದ ಹೊರಟಾಗ ಸಂತೋಷಪಟ್ಟರು; ಯಾಕೆಂದರೆ ಅವರು ದೇವಜನರಿಗೆ ಹೆದರಿಕೊಂಡಿದ್ದರು.


ಮೋಶೆಯು, “ಯೌವನಸ್ಥರು, ಮುದುಕರು, ಎಲ್ಲರೂ ಹೋಗುತ್ತೇವೆ. ನಮ್ಮ ಗಂಡು ಹೆಣ್ಣುಮಕ್ಕಳನ್ನೂ ನಮ್ಮ ದನಕುರಿಗಳನ್ನೂ ತೆಗೆದುಕೊಂಡು ಹೋಗುತ್ತೇವೆ. ಯಾಕೆಂದರೆ ಇದು ಯೆಹೋವನ ಜಾತ್ರೆ” ಎಂದು ಉತ್ತರಕೊಟ್ಟನು.


ಫರೋಹನು ಮೋಶೆ ಆರೋನರನ್ನು ಕರೆಯಿಸಿ, “ನನ್ನಿಂದ ಮತ್ತು ನನ್ನ ಜನರ ಮೇಲಿಂದ ಕಪ್ಪೆಗಳನ್ನು ತೊಲಗಿಸಬೇಕೆಂದು ಯೆಹೋವನನ್ನು ಕೇಳಿಕೊಳ್ಳಿರಿ. ಯೆಹೋವನಿಗೆ ಯಜ್ಞಗಳನ್ನು ಸಮರ್ಪಿಸಲು ನಾನು ಆತನ ಜನರನ್ನು ಹೋಗಗೊಡಿಸುವೆನು” ಎಂದು ಹೇಳಿದನು.


ಆಗ ನಿಮ್ಮ ಈ ಗುಲಾಮರೆಲ್ಲರೂ (ಈಜಿಪ್ಟಿನ ಅಧಿಕಾರಿಗಳು) ನನ್ನ ಬಳಿಗೆ ಬಂದು ನನಗೆ ಅಡ್ಡಬಿದ್ದು ನನ್ನನ್ನು ಆರಾಧಿಸುವರು.’ ಅವರು, ‘ಹೊರಟುಹೋಗಿ, ನಿಮ್ಮ ಜನರೆಲ್ಲರನ್ನು ನಿಮ್ಮೊಂದಿಗೆ ಕರೆದುಕೊಂಡು ಹೋಗಿರಿ’ ಎಂದು ಹೇಳುವರು. ಆಗ ನಾನು ಫರೋಹನ ಬಳಿಯಿಂದ ಬಿಟ್ಟುಹೋಗುವೆನು” ಅಂದನು.


ಅದಕ್ಕೆ ಮೋಶೆಯು ಫರೋಹನಿಗೆ, “ಸರಿ, ಇನ್ನು ಮೇಲೆ ನಾನು ನಿನ್ನ ಸನ್ನಿಧಿಗೆ ಬರುವುದೇ ಇಲ್ಲ” ಎಂದು ಹೇಳಿದನು.


ಆಗ ಫರೋಹನು ಮೋಶೆ ಆರೋನರನ್ನು ಕರೆಯಿಸಿ, “ನಿಮ್ಮ ದೇವರಿಗೆ ಈ ದೇಶದಲ್ಲಿಯೇ ಯಜ್ಞಗಳನ್ನು ಅರ್ಪಿಸಿರಿ” ಎಂದು ಹೇಳಿದನು.


ಬಳಿಕ ಯೆಹೋವನು ಮೋಶೆಗೆ, “ನಾನು ಫರೋಹನಿಗೂ ಈಜಿಪ್ಟಿಗೂ ಮತ್ತೊಂದು ವಿಪತ್ತನ್ನು ಬರಮಾಡುತ್ತೇನೆ. ಆಗ ಅವನು ನಿಮ್ಮನ್ನು ಈಜಿಪ್ಟಿನಿಂದ ಕಳುಹಿಸುವನು; ನಿಮ್ಮನ್ನು ಬಲವಂತದಿಂದ ಕಳುಹಿಸಿಬಿಡುವನು.


ರೊಟ್ಟಿಗೆ ಹುಳಿಹಾಕುವಷ್ಟು ಸಮಯವೂ ಜನರಿಗೆ ಇರಲಿಲ್ಲ; ಅವರು ತಮ್ಮ ಪ್ರಯಾಣಕ್ಕಾಗಿ ವಿಶೇಷ ಆಹಾರವನ್ನು ತಯಾರಿಸುವುದಕ್ಕೂ ಆಗಲಿಲ್ಲ. ಆದ್ದರಿಂದ ಅವರು ಹುಳಿಯಿಲ್ಲದ ರೊಟ್ಟಿ ಮಾಡಿ ತಮ್ಮೊಡನೆ ತೆಗೆದುಕೊಂಡು ಹೋದರು.


ಫರೋಹನಂತೆ ಮತ್ತು ಈಜಿಪ್ಟಿನವರಂತೆ ಮೊಂಡರಾಗಬೇಡಿ. ದೇವರು ಈಜಿಪ್ಟಿನವರನ್ನು ದಂಡಿಸಿದನು. ಆದ್ದರಿಂದ ಇಸ್ರೇಲರನ್ನು ಕಳುಹಿಸಿಕೊಡುವಂತೆ ಈಜಿಪ್ಟಿನವರನ್ನು ಬಲವಂತ ಮಾಡಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು