36 ಯೆಹೋವನು ಅವರ ಮೇಲೆ ಐಗುಪ್ತ್ಯರಲ್ಲಿ ದಯೆಯನ್ನು ಹುಟ್ಟಿಸಿದ್ದರಿಂದ ಅವರು ಕೇಳಿಕೊಂಡದ್ದೆಲ್ಲವನ್ನು ಐಗುಪ್ತರು ಕೊಟ್ಟರು. ಹೀಗೆ ಇಸ್ರಾಯೇಲರು ಐಗುಪ್ತ್ಯರ ಸೊತ್ತನ್ನು ಸುಲಿದುಕೊಂಡರು.
36 ಇಸ್ರಯೇಲರ ಮೇಲೆ ಈಜಿಪ್ಟಿನವರಿಗೆ ದಯೆ ಹುಟ್ಟುವಂತೆ ಮಾಡಿದ್ದರು ಸರ್ವೇಶ್ವರ. ಆದ್ದರಿಂದ ಅವರು ಕೇಳಿಕೊಂಡದ್ದನ್ನು ಈಜಿಪ್ಟಿನವರು ಕೊಟ್ಟುಬಿಟ್ಟರು. ಹೀಗೆ ಇಸ್ರಯೇಲರು ಈಜಿಪ್ಟಿನವರ ಸೊತ್ತನ್ನು ಸುಲಿಗೆ ಮಾಡಿಕೊಂಡರು.
ಯೋಸೇಫನಿಗೆ ಅಲ್ಲಿ ಅನೇಕ ತೊಂದರೆಗಳು ಬಂದವು. ಆದರೆ ದೇವರು ಆ ಎಲ್ಲಾ ತೊಂದರೆಗಳಿಂದ ಅವನನ್ನು ರಕ್ಷಿಸಿದನು. ಆಗ ಫರೋಹನು ಈಜಿಪ್ಟಿನ ರಾಜನಾಗಿದ್ದನು. ದೇವರು ಯೋಸೇಫನಿಗೆ ಕೊಟ್ಟ ಜ್ಞಾನದ ದೆಸೆಯಿಂದ ಫರೋಹನು ಯೋಸೇಫನನ್ನು ಇಷ್ಟಪಟ್ಟನು ಮತ್ತು ಗೌರವಿಸಿದನು. ಫರೋಹನು ಯೋಸೇಫನನ್ನು ಈಜಿಪ್ಟಿನ ರಾಜ್ಯಪಾಲನನ್ನಾಗಿಯೂ ತನ್ನ ಮನೆಯಲ್ಲಿದ್ದ ಎಲ್ಲಾ ಜನರ ಮೇಲೆ ಅಧಿಪತಿಯನ್ನಾಗಿಯೂ ಮಾಡಿದನು.
ಆದರೆ ನಾನೂರು ವರ್ಷಗಳಾದ ಮೇಲೆ ಅವರ ಮೇಲೆ ದೊರೆತನ ಮಾಡಿದ ಆ ದೇಶವನ್ನು ನಾನು ದಂಡಿಸುವೆನು; ನಿನ್ನ ಜನರು ಆ ದೇಶವನ್ನು ಬಿಟ್ಟು ಹೊರಡುವರು. ನಿನ್ನ ಜನರು ಅದನ್ನು ಬಿಡುವಾಗ ತಮ್ಮೊಡನೆ ಸಂಪತ್ತುಗಳನ್ನು ತೆಗೆದುಕೊಂಡು ಹೋಗುವರು.
ಈಜಿಪ್ಟಿನವರು ನಿಮಗೆ ದಯೆತೋರುವಂತೆ ಯೆಹೋವನು ಅವರನ್ನು ಪ್ರೇರೇಪಿಸುವನು. ಈಜಿಪ್ಟಿನ ಜನರು ಮತ್ತು ಫರೋಹನ ಅಧಿಕಾರಿಗಳು ಮೋಶೆಯನ್ನು ಮಹಾಪುರುಷನೆಂದು ತಿಳಿದುಕೊಂಡಿದ್ದಾರೆ” ಎಂದು ಹೇಳಿದನು.
ಅವರು ದೇವರನ್ನು ಕೊಂಡಾಡುತ್ತಿದ್ದರು ಮತ್ತು ಜನರೆಲ್ಲರೂ ಅವರನ್ನು ಇಷ್ಟಪಡುತ್ತಿದ್ದರು. ಪ್ರತಿದಿನವೂ ಹೆಚ್ಚುಹೆಚ್ಚು ಜನರು ರಕ್ಷಣೆ ಹೊಂದುತ್ತಿದ್ದರು; ಪ್ರಭುವು ಅವರನ್ನೆಲ್ಲಾ ವಿಶ್ವಾಸಿಗಳ ಸಭೆಗೆ ಸೇರಿಸುತ್ತಿದ್ದನು.