Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:38 - ಪರಿಶುದ್ದ ಬೈಬಲ್‌

38 ಲೆಕ್ಕವಿಲ್ಲದಷ್ಟು ಕುರಿಗಳೂ ದನಕರುಗಳೂ ಇವರೊಂದಿಗಿದ್ದವು. ಇಸ್ರೇಲರಲ್ಲದ ಬೇರೆ ಜನರು ಸಹ ಇಸ್ರೇಲರೊಂದಿಗೆ ಈಜಿಪ್ಟಿನಿಂದ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಅವರೊಂದಿಗೆ ಬಹು ಮಂದಿ ಅನ್ಯರೂ ಹೊರಟುಬಂದಿದ್ದರು. ಕುರಿದನಗಳ ಹಿಂಡೂ ಪಶುಗಳೂ ಅವರ ಸಂಗಡ ಹೊರಟುಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಅವರೊಂದಿಗೆ ಬಹುಮಂದಿ ಅನ್ಯದೇಶೀಯರೂ ಹೊರಟು ಬಂದಿದ್ದರು. ಕುರಿ, ದನ ಮುಂತಾದ ಪಶುಪ್ರಾಣಿಗಳು ಬಹಳವಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಅವರೊಂದಿಗೆ ಬಹು ಮಂದಿ ಅನ್ಯರೂ ಹೊರಟುಹೋದರು; ಕುರಿದನ ಮೊದಲಾದ ಪಶುಗಳೂ ಬಹಳವಾಗಿದ್ದವು. ಅವರು ಐಗುಪ್ತದೇಶದಿಂದ ತಂದ ಕಣಕದ ಮುದ್ದೆಯಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿ ಸುಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಬೇರೆ ಜನಸಮೂಹವೂ ಕುರಿದನ ಮೊದಲಾದ ಪಶುಗಳ ಬಹುದೊಡ್ಡ ಹಿಂಡೂ ಇಸ್ರಾಯೇಲರ ಸಂಗಡ ಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:38
10 ತಿಳಿವುಗಳ ಹೋಲಿಕೆ  

ಅವರ ಮಧ್ಯದಲ್ಲಿದ್ದ ಕಿರುಕುಳಕೊಡುವ ಪರದೇಶಸ್ಥರು ಬೇರೆ ರೀತಿಯ ಆಹಾರಕ್ಕಾಗಿ ಬಹಳವಾಗಿ ಆಶಿಸಿದರು. ಇಸ್ರೇಲರು ಸಹ ಮತ್ತೆ ಅಳಲು ಆರಂಭಿಸಿ, “ನಮಗೆ ಯಾರು ಮಾಂಸವನ್ನು ಕೊಡುತ್ತಾರೆ?


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ಆ ಸಮಯದಲ್ಲಿ ಬೇರೆಬೇರೆ ಭಾಷೆಗಳನ್ನು ಮಾತಾಡುವ ಅನೇಕ ವಿದೇಶಿಯರು ಯೆಹೂದ್ಯನೊಬ್ಬನ ಬಳಿಗೆ ಬಂದು, ಅವನ ಬಟ್ಟೆಯ ಅಂಚನ್ನು ಹಿಡಿದು, ‘ದೇವರು ನಿಮ್ಮೊಂದಿಗಿದ್ದಾನೆಂದು ನಾವು ಕೇಳಿದ್ದೇವೆ. ನಿಮ್ಮೊಂದಿಗೆ ನಾವೂ ಬಂದು ಆತನನ್ನು ಆರಾಧಿಸಬಹುದೋ?’” ಎಂದು ಕೇಳುವರು.


ಮೋಶೆಯು, “ಯೌವನಸ್ಥರು, ಮುದುಕರು, ಎಲ್ಲರೂ ಹೋಗುತ್ತೇವೆ. ನಮ್ಮ ಗಂಡು ಹೆಣ್ಣುಮಕ್ಕಳನ್ನೂ ನಮ್ಮ ದನಕುರಿಗಳನ್ನೂ ತೆಗೆದುಕೊಂಡು ಹೋಗುತ್ತೇವೆ. ಯಾಕೆಂದರೆ ಇದು ಯೆಹೋವನ ಜಾತ್ರೆ” ಎಂದು ಉತ್ತರಕೊಟ್ಟನು.


ಆದರೆ ಜನರು ನೀರಿಲ್ಲದೆ ಬಹಳ ಬಾಯಾರಿಕೆಗೆ ಒಳಗಾಗಿದ್ದರು. ಆದ್ದರಿಂದ ಅವರು ಮೋಶೆಯ ಮೇಲೆ ಗುಣುಗುಟ್ಟುತ್ತಿದ್ದರು. “ನೀನು ನಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದದ್ದೇಕೆ? ನಾವು, ನಮ್ಮ ಮಕ್ಕಳು ಮತ್ತು ನಮ್ಮ ದನಕರುಗಳೆಲ್ಲಾ ನೀರಿಲ್ಲದೆ ಸಾಯುವುದಕ್ಕೆ ನೀನು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದೆಯಾ?” ಎಂದು ಅವರು ಕೇಳಿದರು.


ಅದಕ್ಕೆ ಇಸ್ರೇಲರು, “ನಾವು ರಾಜಮಾರ್ಗದಲ್ಲಿಯೇ ಹೋಗುವೆವು. ನಾವೂ ನಮ್ಮ ಪಶುಗಳೂ ನಿಮ್ಮ ನೀರನ್ನು ಕುಡಿದರೆ ಅದಕ್ಕೆ ಬೆಲೆ ಕೊಡುವೆವು. ನಮಗೆ ಕೇವಲ ನಡೆದುಕೊಂಡು ಹೋಗಲು ಅನುಮತಿ ಕೊಡಿ. ಇದೊಂದೇ ನಮ್ಮ ಚಿಕ್ಕ ಬೇಡಿಕೆ” ಎಂದು ಹೇಳಿದರು.


ರೂಬೇನ್ ಕುಲದವರಿಗೂ ಗಾದ್ ಕುಲದವರಿಗೂ ಬಹಳ ದನಕುರಿಗಳಿದ್ದವು. ಅವರು ಯಗ್ಜೇರ್ ಮತ್ತು ಗಿಲ್ಯಾದ್ ಪ್ರದೇಶಗಳನ್ನು ನೋಡಿದಾಗ ಅವು ಅವರ ಪಶುಗಳ ಮೇವಿಗೆ ಒಳ್ಳೆಯ ಸ್ಥಳವೆಂದು ತಿಳಿದುಕೊಂಡರು.


ನಾನು ನಿಮಗೆ ಕೊಟ್ಟಿರುವ ಪಟ್ಟಣಗಳಲ್ಲಿ ನಿಮ್ಮ ಹೆಂಡತಿಯರೂ ಮಕ್ಕಳೂ ಪಶುಗಳೂ ವಾಸಿಸಬೇಕು; (ನಿಮಗೆ ಪಶುಗಳು ಹೆಚ್ಚಾಗಿವೆ ಎಂದು ನನಗೆ ಗೊತ್ತುಂಟು.)


ಅಲ್ಲಿ ಇಸ್ರೇಲಿನ ಎಲ್ಲ ಜನರು ಸೇರಿ ಬಂದಿದ್ದರು. ಎಲ್ಲ ಹೆಂಗಸರು ಮತ್ತು ಮಕ್ಕಳು ಮತ್ತು ಇಸ್ರೇಲಿನ ಜನರೊಂದಿಗೆ ಇದ್ದ ಎಲ್ಲ ವಿದೇಶಿಯರು ಅಲ್ಲಿ ಇದ್ದರು. ಅವರೆಲ್ಲರಿಗೆ ಕೇಳಿಸುವಂತೆ ಮೋಶೆಯು ಕೊಟ್ಟಿದ್ದ ಪ್ರತಿಯೊಂದು ಆಜ್ಞೆಯನ್ನು ಯೆಹೋಶುವನು ಓದಿದನು.


ಇಸ್ರೇಲರು ದೇವರ ಕಟ್ಟಳೆಯನ್ನು ಕೇಳಿ ಅದಕ್ಕೆ ವಿಧೇಯರಾದರು. ಅನ್ಯರ ಸಂತತಿಯವರಿಂದ ತಮ್ಮನ್ನು ಪ್ರತ್ಯೇಕಿಸಿಕೊಂಡರು.


ಇಸ್ರೇಲಿನ ಒಬ್ಬ ಸ್ತ್ರೀಗೆ ಒಬ್ಬ ಮಗನಿದ್ದನು. ಅವನ ತಂದೆ ಈಜಿಪ್ಟಿನವನು. ಪಾಳೆಯದಲ್ಲಿದ್ದ ಇಸ್ರೇಲರ ಮಧ್ಯದಿಂದ ಅವನು ಹೊರಬಂದನು. ಅವನು ಒಬ್ಬ ಇಸ್ರೇಲನೊಡನೆ ಜಗಳವಾಡತೊಡಗಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು