ವಿಮೋಚನಕಾಂಡ 12:43 - ಪರಿಶುದ್ದ ಬೈಬಲ್43 ಯೆಹೋವನು ಮೋಶೆ ಆರೋನರಿಗೆ, “ಪಸ್ಕಹಬ್ಬದ ನಿಯಮಗಳು ಇಂತಿವೆ: ಯಾವ ಪರದೇಶಿಯೂ ಪಸ್ಕಹಬ್ಬದ ಊಟವನ್ನು ಮಾಡಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಯೆಹೋವನು ಮೋಶೆ ಮತ್ತು ಆರೋನರಿಗೆ ಹೇಳಿದ್ದೇನೆಂದರೆ, “ಪಸ್ಕವನ್ನು ಆಚರಿಸಬೇಕಾದ ಕ್ರಮ ಹೇಗೆಂದರೆ, ಅನ್ಯನೊಬ್ಬನೂ ಅದರಲ್ಲಿ ಭೋಜನ ಮಾಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ಸರ್ವೇಶ್ವರ ಸ್ವಾಮಿ ಮೋಶೆ ಮತ್ತು ಆರೋನರಿಗೆ ಹೀಗೆಂದರು: “ಪಾಸ್ಕಹಬ್ಬ ಆಚರಣೆಯ ಕ್ರಮ ಇದು - ವಿದೇಶೀಯನಾರೂ ಆ ಭೋಜನದಲ್ಲಿ ಪಾಲ್ಗೊಳ್ಳಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ಯೆಹೋವನು ಮೋಶೆ ಆರೋನರಿಗೆ ಹೇಳಿದ್ದೇನಂದರೆ - ಪಸ್ಕವನ್ನು ಆಚರಿಸಬೇಕಾದ ಕ್ರಮ ಹೇಗಂದರೆ - ಅನ್ಯನೊಬ್ಬನೂ ಅದರಲ್ಲಿ ಭೋಜನ ಮಾಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ಯೆಹೋವ ದೇವರು ಮೋಶೆ ಆರೋನರಿಗೆ, “ಪಸ್ಕದ ಶಾಸನವು ಇದೆ: “ವಿದೇಶಿಯರಲ್ಲಿ ಯಾರೂ ಪಸ್ಕಭೋಜನವನ್ನು ತಿನ್ನಬಾರದು. ಅಧ್ಯಾಯವನ್ನು ನೋಡಿ |
ಎಫ್ರಾಯೀಮ್, ಮನಸ್ಸೆ, ಇಸ್ಸಾಕಾರ್ ಮತ್ತು ಜೆಬುಲೂನಿನಿಂದ ಬಂದಿದ್ದ ಎಷ್ಟೋ ಮಂದಿ ಪಸ್ಕಹಬ್ಬಕ್ಕಾಗಿ ತಮ್ಮನ್ನು ಸಿದ್ಧಮಾಡಿಕೊಂಡಿರಲಿಲ್ಲ. ಅವರು ಪಸ್ಕದ ಕುರಿಮರಿಯನ್ನು ಯೋಗ್ಯವಾದ ರೀತಿಯಲ್ಲಿ ತಿನ್ನಲಿಲ್ಲ. ಆದರೆ ಹಿಜ್ಕೀಯನು ಅಂಥವರಿಗೋಸ್ಕರವಾಗಿ, “ದೇವರಾದ ಯೆಹೋವನೇ, ನೀನು ಒಳ್ಳೆಯವನಾಗಿರುವೆ. ಇವರು ಯೋಗ್ಯವಾದ ರೀತಿಯಲ್ಲಿ ನಿನ್ನನ್ನು ಆರಾಧಿಸಲು ಬಂದಿದ್ದಾರೆ. ಆದರೆ ಧರ್ಮಶಾಸ್ತ್ರದ ಪ್ರಕಾರ ಅವರು ತಮ್ಮನ್ನು ಶುದ್ಧ ಮಾಡಿಕೊಳ್ಳಲಿಲ್ಲ. ದಯಮಾಡಿ ಅವರನ್ನು ಕ್ಷಮಿಸು. ನಮ್ಮ ಪಿತೃಗಳು ವಿಧೇಯರಾಗಿದ್ದ ದೇವರೇ, ಜನರು ಮೋಶೆಯ ನಿಯಮಕ್ಕನುಸಾರವಾಗಿ ತಮ್ಮನ್ನು ಶುದ್ಧಿ ಮಾಡಿಕೊಂಡಿಲ್ಲದಿದ್ದರೂ ನೀನು ಅವರನ್ನು ದಯವಿಟ್ಟು ಕ್ಷಮಿಸು” ಎಂದು ಪ್ರಾರ್ಥಿಸಿದನು.
ನೀವು ನನ್ನ ಆಲಯದೊಳಗೆ ಅನ್ಯರನ್ನು ತಂದಿರುತ್ತೀರಿ. ಅವರು ಸುನ್ನತಿಯಾದವರಾಗಿರಲಿಲ್ಲ. ಅವರು ಸಂಪೂರ್ಣವಾಗಿ ನನ್ನನ್ನು ನಂಬಿರಲಿಲ್ಲ. ಈ ರೀತಿಯಾಗಿ ನೀವು ನನ್ನ ಆಲಯವನ್ನು ಹೊಲೆ ಮಾಡಿರುತ್ತೀರಿ. ನೀವು ನಾವು ಮಾಡಿಕೊಂಡ ಒಡಂಬಡಿಕೆಯನ್ನು ಮುರಿದುಬಿಟ್ಟಿರಿ. ಭಯಂಕರ ಕೃತ್ಯಗಳನ್ನು ಮಾಡಿ ಆಮೇಲೆ ನನಗೆ ರೊಟ್ಟಿ, ಕೊಬ್ಬು, ರಕ್ತಗಳ ಕಾಣಿಕೆ ಅರ್ಪಿಸುತ್ತೀರಿ. ಆದರೆ ಇವೆಲ್ಲಾ ನನ್ನ ಆಲಯವನ್ನು ಅಶುದ್ಧಗೊಳಿಸುತ್ತಿವೆ.