ನಿಮ್ಮಲ್ಲಿ ಕೆಲವರಲ್ಲಿ ಯಜ್ಞಕ್ಕೆ ಬೇಕಾಗಿರುವ ಒಳ್ಳೆಯ ಗಂಡು ಪಶುಗಳು ಇದ್ದಾಗ್ಯೂ ಅವರು ನನಗೆ ಅವುಗಳನ್ನು ಸಮರ್ಪಿಸುವದಿಲ್ಲ. ಕೆಲವರು ಕಳಂಕವಿಲ್ಲದ ಪಶುಗಳನ್ನು ನನಗೆ ತರುತ್ತಾರೆ. ಅವರು ಅಂಥಾ ಆರೋಗ್ಯಕರ ಪಶುಗಳನ್ನು ನನಗೆ ಸಮರ್ಪಿಸಲು ವಾಗ್ದಾನ ಮಾಡುವರು. ಆದರೆ ಗುಪ್ತವಾಗಿ ಅವರು ಆ ಪಶುವನ್ನು ಬದಲಿಸಿ ನನಗೆ ರೋಗಿಯಾದ ಪಶುಗಳನ್ನು ಕೊಡುತ್ತಾರೆ. ಅವರಿಗೆ ದುರ್ದೆಶೆ ಸಂಭವಿಸಲಿರುವದು. ನಾನು ದೊಡ್ಡ ಅರಸನು. ನೀವು ನನ್ನನ್ನು ಗೌರವಿಸಬೇಕು. ಭೂಲೋಕದ ಸರ್ವಜನರು ನನ್ನನ್ನು ಸನ್ಮಾನಿಸುವರು.” ಇವು ಸರ್ವಶಕ್ತನಾದ ಯೆಹೋವನ ನುಡಿಗಳು.