Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:50 - ಪರಿಶುದ್ದ ಬೈಬಲ್‌

50 ಯೆಹೋವನು ಮೋಶೆ ಆರೋನರಿಗೆ ಆಜ್ಞಾಪಿಸಿದಂತೆಯೇ ಇಸ್ರೇಲರೆಲ್ಲರೂ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಯೆಹೋವನು ಮೋಶೆ ಮತ್ತು ಆರೋನರಿಗೆ ಆಜ್ಞಾಪಿಸಿದ ಪ್ರಕಾರ ಇಸ್ರಾಯೇಲರೆಲ್ಲರೂ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

50 ಮೋಶೆ ಮತ್ತು ಆರೋನರಿಗೆ ಸರ್ವೇಶ್ವರ ಆಜ್ಞಾಪಿಸಿದ ಮೇರೆಗೆ ಇಸ್ರಯೇಲರೆಲ್ಲರೂ ನಡೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ಯೆಹೋವನು ಮೋಶೆ ಆರೋನರಿಗೆ ಆಜ್ಞಾಪಿಸಿದ ಮೇರೆಗೆ ಇಸ್ರಾಯೇಲ್ಯರೆಲ್ಲರೂ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಇಸ್ರಾಯೇಲರೆಲ್ಲಾ ಯೆಹೋವ ದೇವರು ಮೋಶೆ ಆರೋನರಿಗೆ ಆಜ್ಞಾಪಿಸಿದಂತೆಯೇ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:50
21 ತಿಳಿವುಗಳ ಹೋಲಿಕೆ  

ನಗರದ ಹೊರಭಾಗದಲ್ಲಿ ನಾಯಿಗಳಿವೆ (ಕೆಟ್ಟಜನರು), ಕೆಟ್ಟ ಮಾಟವನ್ನು ಮಾಡುವ ಜನರಿದ್ದಾರೆ, ಲೈಂಗಿಕ ಪಾಪಗಳನ್ನು ಮಾಡುವ ಜನರಿದ್ದಾರೆ, ಕೊಲೆಗಾರರಿದ್ದಾರೆ, ವಿಗ್ರಹಗಳನ್ನು ಆರಾಧಿಸುವ ಜನರಿದ್ದಾರೆ ಮತ್ತು ಸುಳ್ಳನ್ನು ಪ್ರೀತಿಸುವ ಮತ್ತು ಹೇಳುವ ಜನರಿದ್ದಾರೆ.


ನಾನು ಹೇಳುವ ಕಾರ್ಯಗಳನ್ನು ನೀವು ಮಾಡಿದರೆ, ನೀವು ನನ್ನ ಸ್ನೇಹಿತರು.


ನೀವು ಈ ಸಂಗತಿಗಳನ್ನು ತಿಳಿದುಕೊಂಡು ಇವುಗಳನ್ನು ಕೈಕೊಂಡು ನಡೆದರೆ ಸಂತೋಷದಿಂದಿರುವಿರಿ.


ಯೇಸುವಿನ ತಾಯಿ ಸೇವಕರಿಗೆ, “ಯೇಸು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ” ಎಂದು ಹೇಳಿದಳು.


ನಾನು ನಿಮಗೆ ಆಜ್ಞಾಪಿಸಿದವುಗಳಿಗೆಲ್ಲಾ ವಿಧೇಯರಾಗುವಂತೆ ಜನರಿಗೆ ಉಪದೇಶಿಸಿ, ಲೋಕಾಂತ್ಯದವರೆಗೂ ಸದಾಕಾಲ ನಾನು ನಿಮ್ಮೊಂದಿಗಿರುತ್ತೇನೆ” ಎಂದು ಹೇಳಿದನು.


“ನಾನು ಆಜ್ಞಾಪಿಸಿದ ಪ್ರಕಾರವೇ ನೀವು ಮಾಡಿರಿ. ಅದಕ್ಕೆ ಏನೂ ಕೂಡಿಸಬಾರದು; ಅದರಿಂದ ಏನೂ ತೆಗೆಯಬಾರದು.


ನಾನೂರಮೂವತ್ತು ವರ್ಷಗಳಾದ ನಂತರ, ಅದೇ ದಿನದಂದು ಯೆಹೋವನ ಸೈನ್ಯಗಳೆಲ್ಲಾ ಈಜಿಪ್ಟನ್ನು ಬಿಟ್ಟು ಹೊರಟವು.


ಆಗ ನಾನು ಈಜಿಪ್ಟನ್ನು ಭಯಂಕರವಾಗಿ ದಂಡಿಸಿ ನನ್ನ ಜನರನ್ನು ಆ ದೇಶದಿಂದ ಹೊರತರುವೆನು.


ಮೋಶೆ ಆರೋನರು ಸಹ ಲೇವಿ ಕುಲದವರು. “ನನ್ನ ಜನರನ್ನು ಗುಂಪುಗುಂಪಾಗಿ ಈಜಿಪ್ಟಿನಿಂದ ನಡೆಸಿಕೊಂಡು ಹೋಗಿ” ಎಂದು ದೇವರು ಹೇಳಿದ್ದು ಇವರಿಗೇ.


ಅವನು ಈಜಿಪ್ಟನ್ನು ಬಿಟ್ಟುಹೋದದ್ದು ನಂಬಿಕೆಯಿಂದಲೇ. ಫರೋಹನ ಸಿಟ್ಟಿಗೆ ಅವನು ಭಯಪಡಲಿಲ್ಲ. ಯಾರಿಗೂ ಕಾಣದ ದೇವರು ತನಗೆ ಕಾಣುತ್ತಿರುವನೋ ಎಂಬಂತೆ ಅವನು ದೃಢಚಿತ್ತನಾಗಿದ್ದನು;


ಪ್ರತಿಯೊಬ್ಬರಿಗೂ ಇದೇ ನಿಯಮ ಅನ್ವಯಿಸುತ್ತದೆ. ಸ್ವದೇಶದವನಿಗೂ ನಿಮ್ಮಲ್ಲಿ ವಾಸವಾಗಿರುವ ಪರದೇಶದವನಿಗೂ ಒಂದೇ ನಿಯಮವಿರಬೇಕು” ಅಂದನು.


ಆದ್ದರಿಂದ ಅದೇ ದಿನದಲ್ಲಿ ಯೆಹೋವನು ಇಸ್ರೇಲರನ್ನು ಈಜಿಪ್ಟ್ ದೇಶದಿಂದ ಜನರನ್ನು ಗುಂಪುಗುಂಪುಗಳಾಗಿ ಹೊರತಂದನು.


ಮೋಶೆಯು ಯೆಹೋವನಿಗೆ ವಿಧೇಯನಾಗಿ ಆತನ ಆಜ್ಞೆಯಂತೆ ಬೆಳ್ಳಿಯನ್ನು ಆರೋನನಿಗೂ ಅವನ ಪುತ್ರರಿಗೂ ಕೊಟ್ಟನು.


ಯೆಹೋವನ ಅಪ್ಪಣೆಯ ಮೇರೆಗೆ ಇಸ್ರೇಲರು ತಮ್ಮಲ್ಲಿರುವ ಅಂಥವರೆಲ್ಲರನ್ನೂ ಪಾಳೆಯದ ಹೊರಗಿರಿಸಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅವರು ಮಾಡಿದರು.


ಇಸ್ರೇಲರ ಮಧ್ಯದಿಂದ ನಾನು ಲೇವಿಯರನ್ನು ಆರಿಸಿಕೊಂಡಿದ್ದೇನೆ ಮತ್ತು ದೇವದರ್ಶನಗುಡಾರದಲ್ಲಿ ಇಸ್ರೇಲರ ಪರವಾಗಿ ಕೆಲಸ ಮಾಡಲೂ ಮತ್ತು ಇಸ್ರೇಲರಿಗೆ ದೋಷಪರಿಹಾರ ಮಾಡುವುದಕ್ಕೂ ನಾನು ಅವರನ್ನು ಆರೋನ ಮತ್ತು ಅವನ ಪುತ್ರರಿಗೆ ಒಪ್ಪಿಸಿಕೊಟ್ಟಿದ್ದೇನೆ. ಇಸ್ರೇಲರನ್ನು ಶುದ್ಧಿಗೊಳಿಸುವ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಅವರು ಸಹಾಯ ಮಾಡುವರು. ಹೀಗಿರುವುದರಿಂದ ಇಸ್ರೇಲರು ಪವಿತ್ರವಸ್ತುಗಳ ಅತೀ ಸಮೀಪಕ್ಕೆ ಬಂದರೂ ಅವರಿಗೆ ಅಪಾಯವು ಸಂಭವಿಸುವುದಿಲ್ಲ.”


ಯೆಹೋವನು ಲೇವಿಯರ ವಿಷಯದಲ್ಲಿ ಆಜ್ಞಾಪಿಸಿದಂತೆ ಮೋಶೆ ಆರೋನರೂ ಇಸ್ರೇಲರ ಸಮೂಹದವರೆಲ್ಲರೂ ಮಾಡಿದರು.


ಆಗ ಲೇವಿಯರು ದೇವದರ್ಶನಗುಡಾರದಲ್ಲಿ ಆರೋನನ ಮತ್ತು ಅವನ ಪುತ್ರರ ಮೇಲ್ವಿಚಾರಣೆಯಲ್ಲಿ ಕೆಲಸ ಮಾಡಲು ಅರ್ಹರಾದರು. ಯೆಹೋವನು ಮೋಶೆಗೆ ಲೇವಿಯರ ಬಗ್ಗೆ ಆಜ್ಞಾಪಿಸಿದ್ದಂತೆಯೇ ಅವರಿಗೆ ಮಾಡಲಾಯಿತು.


ಜನರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ನಸುಸಂಜೆಯ ವೇಳೆಯಲ್ಲಿ ಸೀನಾಯಿ ಮರುಭೂಮಿಯಲ್ಲಿ ಇದನ್ನು ಆಚರಿಸಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಪ್ರತಿಯೊಂದನ್ನೂ ಮಾಡಿದರು.


ಯೆಹೋವನು ಮೋಶೆಗೆ ಕೊಟ್ಟ ಆಜ್ಞೆಗೆ ಚಲ್ಪಹಾದನ ಹೆಣ್ಣುಮಕ್ಕಳು ವಿಧೇಯರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು