ವಿಮೋಚನಕಾಂಡ 13:12 - ಪರಿಶುದ್ದ ಬೈಬಲ್12 ನೀವು ನಿಮ್ಮ ಚೊಚ್ಚಲು ಗಂಡುಮಕ್ಕಳನ್ನು ಆತನಿಗಾಗಿ ಮೀಸಲಿಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಿಮ್ಮಲ್ಲಿಯೂ ನಿಮ್ಮ ಪಶುಗಳಲ್ಲಿಯೂ ಹುಟ್ಟುವ ಪ್ರಥಮ ಗರ್ಭಫಲವು ಗಂಡಾದ ಪಕ್ಷಕ್ಕೆ ಅದು ಯೆಹೋವನ ಭಾಗವೆಂದು ತಿಳಿದುಕೊಂಡು ಅದನ್ನು ಆತನಿಗೆ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನಿಮಗೂ ನಿಮ್ಮ ಪಶುಪ್ರಾಣಿಗಳಿಗೂ ಹುಟ್ಟುವ ಚೊಚ್ಚಲು ಫಲವನ್ನೆಲ್ಲ, ಅವು ಗಂಡಾದ ಪಕ್ಷಕ್ಕೆ, ಸರ್ವೇಶ್ವರನ ಪಾಲೆಂದು ತಿಳಿದು ಅವರಿಗೆ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನಿಮ್ಮಲ್ಲಿಯೂ ನಿಮ್ಮ ಪಶುಗಳಲ್ಲಿಯೂ ಹುಟ್ಟುವ ಪ್ರಥಮಗರ್ಭವನ್ನೆಲ್ಲಾ ಗಂಡಾದ ಪಕ್ಷಕ್ಕೆ ಯೆಹೋವನ ಭಾಗವೆಂದು ತಿಳಿದುಕೊಂಡು ಆತನಿಗೆ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಿಮ್ಮಲ್ಲಿಯೂ ನಿಮ್ಮ ಪಶುಪ್ರಾಣಿಗಳಲ್ಲಿಯೂ ಹುಟ್ಟುವ ಪ್ರತಿಯೊಂದು ಗರ್ಭದ ಪ್ರಥಮ ಫಲವನ್ನು ನೀವು ಯೆಹೋವ ದೇವರಿಗೆ ಕೊಡಬೇಕು. ಅಧ್ಯಾಯವನ್ನು ನೋಡಿ |
ನೀವು ಈಜಿಪ್ಟಿನಲ್ಲಿದ್ದಾಗ ನಾನು ಈಜಿಪ್ಟಿನವರ ಎಲ್ಲಾ ಚೊಚ್ಚಲು ಮಕ್ಕಳನ್ನು ಕೊಂದೆನು. ಆ ಕಾಲದಲ್ಲಿ ನಾನು ಇಸ್ರೇಲರ ಎಲ್ಲಾ ಚೊಚ್ಚಲು ಮಕ್ಕಳನ್ನು ನನ್ನವರನ್ನಾಗಿ ತೆಗೆದುಕೊಂಡೆನು. ಎಲ್ಲಾ ಚೊಚ್ಚಲು ಗಂಡುಮಕ್ಕಳು ಮತ್ತು ಚೊಚ್ಚಲು ಪಶುಗಳು ನನ್ನದಾಗಿದ್ದವು. ಆದರೆ ಈಗ ನಿಮ್ಮ ಎಲ್ಲಾ ಚೊಚ್ಚಲು ಗಂಡುಮಕ್ಕಳನ್ನು ನಿಮಗೇ ಹಿಂದಕ್ಕೆ ಕೊಡುತ್ತಿದ್ದೇನೆ ಮತ್ತು ಲೇವಿಯರನ್ನು ನನ್ನವರನ್ನಾಗಿ ಮಾಡುತ್ತಿದ್ದೇನೆ. ನಾನೇ ಯೆಹೋವನು!”