Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 13:14 - ಪರಿಶುದ್ದ ಬೈಬಲ್‌

14 “ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು, ‘ನೀವು ಹೀಗೇಕೆ ಮಾಡುತ್ತೀರಿ?’ ಎಂದು ಕೇಳುವಾಗ ನೀವು, ‘ಯೆಹೋವನು ನಮ್ಮನ್ನು ಈಜಿಪ್ಟಿನಿಂದ ತನ್ನ ಮಹಾಶಕ್ತಿಯಿಂದ ರಕ್ಷಿಸಿದನು. ನಾವು ಅಲ್ಲಿ ಗುಲಾಮರಾಗಿದ್ದೆವು, ಆದರೆ ಯೆಹೋವನು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಮುಂದೆ ನಿಮ್ಮ ಮಕ್ಕಳು, ‘ಇದರ ಅರ್ಥ ಏನು?’ ಎಂದು ನಿಮ್ಮನ್ನು ವಿಚಾರಿಸುವಾಗ ನೀವು ಅವರಿಗೆ, ‘ನಾವು ದಾಸತ್ವದಲ್ಲಿದ್ದ ಐಗುಪ್ತ ದೇಶದಿಂದ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇನ್ನು ಮುಂದೆ ನಿಮ್ಮ ಮಕ್ಕಳು, ಇದರ ಅರ್ಥವೇನೆಂದು ವಿಚಾರಿಸುವಾಗ ನೀವು ಅವರಿಗೆ, ‘ನಾವು ಗುಲಾಮತನದಲ್ಲಿದ್ದಾಗ ಸರ್ವೇಶ್ವರ ತಮ್ಮ ಭುಜಬಲವನ್ನು ಪ್ರದರ್ಶಿಸಿ ಈಜಿಪ್ಟಿನಿಂದ ನಮ್ಮನ್ನು ಬಿಡುಗಡೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇನ್ನು ಮೇಲೆ ನಿಮ್ಮ ಮಕ್ಕಳು - ಇದು ಯಾತಕ್ಕೆ ಎಂದು ವಿಚಾರಿಸುವಾಗ ನೀವು ಅವರಿಗೆ - ನಾವು ದಾಸತ್ವದಲ್ಲಿದ್ದ ಐಗುಪ್ತದೇಶದೊಳಗಿಂದ ಯೆಹೋವನು ಭುಜಬಲದಿಂದ ನಮ್ಮನ್ನು ಬಿಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ಮುಂದೆ ಬರುವ ಕಾಲದಲ್ಲಿ ನಿಮ್ಮ ಪುತ್ರರು ನಿಮಗೆ, ‘ಇದರ ಅರ್ಥವೇನು?’ ಎಂದು ಕೇಳುವಾಗ, ನೀವು ಅವರಿಗೆ, ‘ಯೆಹೋವ ದೇವರು ತಮ್ಮ ಭುಜಬಲದಿಂದ ನಮ್ಮನ್ನು ಈಜಿಪ್ಟಿನ ದಾಸತ್ವದೊಳಗಿಂದ ಹೊರಗೆ ಬರಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 13:14
29 ತಿಳಿವುಗಳ ಹೋಲಿಕೆ  

ಈ ಕಲ್ಲುಗಳು ನಿಮ್ಮ ಮಧ್ಯದಲ್ಲಿ ಗುರುತಾಗಿರುವವು. ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ನಿಮ್ಮನ್ನು, ‘ಈ ಕಲ್ಲುಗಳು ಏನು ಸೂಚಿಸುತ್ತವೆ?’ ಎಂದು ಕೇಳುತ್ತಾರೆ.


ಮೋಶೆಯು ಜನರಿಗೆ, “ನೀವು ಈಜಿಪ್ಟಿನ ಗುಲಾಮತನದಿಂದ ಬಿಡುಗಡೆಯಾದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಆದರೆ ಈ ದಿನದಲ್ಲಿ ಯೆಹೋವನು ತನ್ನ ಮಹಾಶಕ್ತಿಯಿಂದ ನಿಮ್ಮನ್ನು ಸ್ವತಂತ್ರರನ್ನಾಗಿ ಮಾಡಿದನು. ನೀವು ಹುಳಿಯಿರುವ ರೊಟ್ಟಿಯನ್ನು ತಿನ್ನಬಾರದು.


ಯೆಹೋವನೇ, ನಿನ್ನ ಕಾರ್ಯಗಳನ್ನು ಜನರು ಎಂದೆಂದಿಗೂ ಸ್ತುತಿಸುವರು; ನಿನ್ನ ಮಹತ್ಕಾರ್ಯಗಳ ವಿಷಯವಾಗಿ ಜನರು ಬೇರೆಯವರಿಗೆ ಹೇಳುವರು.


ನಾವು ಈ ಯಜ್ಞವೇದಿಕೆಯನ್ನು ಸರ್ವಾಂಗಹೋಮ, ಸಮಾಧಾನಯಜ್ಞ, ಧಾನ್ಯಸಮರ್ಪಣೆ ಇವುಗಳನ್ನು ಸಮರ್ಪಿಸುವುದಕ್ಕೋಸ್ಕರ ಕಟ್ಟಿದ್ದೇವೆ ಎಂದು ನೀವು ತಿಳಿದಿರುವಿರೇನು? ಇಲ್ಲ! ನಾವು ಆ ಕಾರಣಕ್ಕಾಗಿ ಇದನ್ನು ಕಟ್ಟಲಿಲ್ಲ. ನಾವು ಈ ಯಜ್ಞವೇದಿಕೆಯನ್ನು ಕಟ್ಟಿರುವುದಕ್ಕೆ ಕಾರಣವೇನೆಂದರೆ ಮುಂದಿನ ಕಾಲದಲ್ಲಿ ನಿಮ್ಮ ಜನರು ನಮ್ಮನ್ನು ತಮ್ಮ ಜನಾಂಗದ ಒಂದು ಭಾಗವೆಂದು ಸ್ವೀಕರಿಸದೆ ಇಸ್ರೇಲಿನ ದೇವರಾದ ಯೆಹೋವನನ್ನು ಆರಾಧಿಸಲು ಅವಕಾಶಕೊಡದಿರಬಹುದು ಎಂಬ ಭಯ ನಮಗಿತ್ತು.


“ಈ ಹಬ್ಬವು ನಿಮ್ಮ ಕೈಗಳಲ್ಲಿ ಜ್ಞಾಪಕಪಟ್ಟಿಯಂತಿದ್ದು ಯೆಹೋವನು ತನ್ನ ಮಹಾಶಕ್ತಿಯಿಂದ ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿದ್ದನ್ನು ಮತ್ತು ನಿಮಗೆ ಆತನು ನೀಡಿದ ಉಪದೇಶಗಳನ್ನು ನೆನಪಿಗೆ ತರುತ್ತದೆ.


ನಾನು ಈಜಿಪ್ಟಿನಲ್ಲಿ ಮಾಡಿದ ಸೂಚಕಕಾರ್ಯಗಳನ್ನೂ ಇತರ ಅದ್ಭುತಕಾರ್ಯಗಳನ್ನೂ ನೀವು ನಿಮ್ಮ ಮಕ್ಕಳಿಗೆ ಮತ್ತು ಮೊಮ್ಮಕ್ಕಳಿಗೆ ವಿವರಿಸಿ, ‘ಯೆಹೋವನು ಈಜಿಪ್ಟಿನವರನ್ನು ತನಗೆ ಇಷ್ಟ ಬಂದಂತೆ ಶಿಕ್ಷಿಸಿದನು’ ಎಂಬುದಾಗಿ ತಿಳಿಸಬೇಕೆಂದು ನಾನು ಫರೋಹನ ಮತ್ತು ಅವನ ಅಧಿಕಾರಿಗಳ ಹೃದಯಗಳನ್ನು ಕಠಿಣಪಡಿಸಿದ್ದೇನೆ. ಇದಲ್ಲದೆ ಈ ಮಹತ್ಕಾರ್ಯಗಳ ಮೂಲಕ ನಾನೇ ಯೆಹೋವನೆಂದು ತಿಳಿದುಕೊಳ್ಳುವಿರಿ” ಎಂದು ಹೇಳಿದನು.


ಮುಂದಿನ ದಿನಗಳಲ್ಲಿ ನೀನು ಬಂದು ಪರೀಕ್ಷಿಸಿದಾಗ ನಾನು ಯಥಾರ್ಥನೊ ಇಲ್ಲವೊ ಎಂಬುದನ್ನು ನೀನು ಸುಲಭವಾಗಿ ಕಂಡುಕೊಳ್ಳಬಹುದು. ನಾನೇನಾದರೂ ಚುಕ್ಕೆಯಿಲ್ಲದ ಮೇಕೆಗಳನ್ನಾಗಲಿ ಅಥವಾ ಕಪ್ಪಿಲ್ಲದ ಕುರಿಗಳನ್ನಾಗಲಿ ಹೊಂದಿದ್ದರೆ, ನಾನು ಅದನ್ನು ಕದ್ದುಕೊಂಡದ್ದೆಂದು ನೀನು ಪರಿಗಣಿಸಬಹುದು” ಎಂದು ಹೇಳಿದನು.


ಇಸ್ರೇಲರ ದೇವರು ನಮ್ಮ ಪಿತೃಗಳನ್ನು ಆರಿಸಿಕೊಂಡನು. ಈಜಿಪ್ಟಿನಲ್ಲಿ ಪ್ರವಾಸಿಗರಾಗಿ ವಾಸಿಸುತ್ತಿದ್ದ ತನ್ನ ಜನರಿಗೆ ದೇವರು ಸಹಾಯಮಾಡಿ ಅಭಿವೃದ್ಧಿಪಡಿಸಿದನು. ದೇವರು ತನ್ನ ಮಹಾಶಕ್ತಿಯಿಂದ ಅವರನ್ನು ಆ ದೇಶದೊಳಗಿಂದ ಬರಮಾಡಿದನು.


ಆದ್ದರಿಂದ ನನ್ನ ಈ ಮಾತುಗಳನ್ನು ಇಸ್ರೇಲರಿಗೆ ತಿಳಿಸು: ‘ನಾನೇ ಯೆಹೋವನು. ಈಜಿಪ್ಟಿನವರು ನಿಮ್ಮಿಂದ ಮಾಡಿಸುವ ಬಿಟ್ಟೀಕೆಲಸದಿಂದ ತಪ್ಪಿಸಿ ಈಜಿಪ್ಟಿನವರ ಗುಲಾಮಗಿರಿಯಿಂದ ಬಿಡಿಸುವೆನು. ನನ್ನ ಮಹಾಶಕ್ತಿಯಿಂದ ಈಜಿಪ್ಟಿನವರನ್ನು ಭಯಂಕರವಾಗಿ ದಂಡಿಸುವೆನು; ಬಳಿಕ ನಿಮ್ಮನ್ನು ರಕ್ಷಿಸುವೆನು.


ಈ ದಿನದಲ್ಲಿ ನೀವು ನಿಮ್ಮ ಮಕ್ಕಳಿಗೆ, ‘ಯೆಹೋವನು ನಮ್ಮನ್ನು ಈಜಿಪ್ಟಿನಿಂದ ಬಿಡಿಸಿಕೊಂಡು ಬಂದದ್ದರಿಂದ ನಾವು ಈ ಹಬ್ಬವನ್ನು ಮಾಡುತ್ತಿದ್ದೇವೆ’ ಎಂದು ಹೇಳಬೇಕು.


ನಾವು ಅವುಗಳನ್ನು ಮರೆಯುವುದೇ ಇಲ್ಲ. ನಮ್ಮ ಜನರು ಕೊನೆಯ ತಲೆಮಾರಿನವರೆಗೂ ಅವುಗಳನ್ನು ಹೇಳುತ್ತಲೇ ಇರುವರು. ನಾವೆಲ್ಲರೂ ಯೆಹೋವನ ಪರಾಕ್ರಮವನ್ನೂ ಅದ್ಭುತಕಾರ್ಯಗಳನ್ನೂ ಹೇಳುತ್ತಾ ಕೊಂಡಾಡುವೆವು.


ಆಗ ಯೆಹೋವನು ಮೋಶೆಗೆ, “ನಾನು ಫರೋಹನಿಗೆ ಮಾಡುವುದನ್ನು ಈಗ ನೀನು ನೋಡುವೆ. ನಾನು ನನ್ನ ಮಹಾಶಕ್ತಿಯನ್ನು ಅವನಿಗೆ ವಿರುದ್ಧವಾಗಿ ಉಪಯೋಗಿಸುವುದರಿಂದ ಅವನು ನನ್ನ ಜನರನ್ನು ಹೋಗಗೊಡಿಸುವನು; ಬಲವಂತದಿಂದ ಅವರನ್ನು ಹೊರಡಿಸುವನು” ಎಂದು ಹೇಳಿದನು.


ನೀವು ನನ್ನ ಜನರಾಗಿರುವಿರಿ; ನಾನು ನಿಮ್ಮ ದೇವರಾಗಿರುವೆನು. ನಿಮ್ಮ ದೇವರಾಗಿರುವ ಯೆಹೋವನಾದ ನಾನೇ ನಿಮ್ಮನ್ನು ಈಜಿಪ್ಟಿನವರ ಬಿಟ್ಟೀಕೆಲಸದಿಂದ ಬಿಡುಗಡೆಗೊಳಿಸಿದೆನೆಂದು ಆಗ ನೀವು ತಿಳಿದುಕೊಳ್ಳುವಿರಿ.


ನಾನೂರಮೂವತ್ತು ವರ್ಷಗಳಾದ ನಂತರ, ಅದೇ ದಿನದಂದು ಯೆಹೋವನ ಸೈನ್ಯಗಳೆಲ್ಲಾ ಈಜಿಪ್ಟನ್ನು ಬಿಟ್ಟು ಹೊರಟವು.


“ಯೆಹೋವನೆಂಬ ನಾನೇ ನಿಮ್ಮ ದೇವರು. ಈಜಿಪ್ಟಿನಲ್ಲಿ ಗುಲಾಮರಾಗಿದ್ದ ನಿಮ್ಮನ್ನು ಆ ದೇಶದಿಂದ ಹೊರಗೆ ನಡಿಸಿದವನು ನಾನೇ.


“ಯೆಹೋವನು ಹೇಳಿದ್ದೇನೆಂದರೆ: ‘ನಾನು ನಿಮ್ಮ ದೇವರಾದ ಯೆಹೋವನು. ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಾಗ ನಿಮ್ಮನ್ನು ಅಲ್ಲಿಂದ ಬಿಡುಗಡೆ ಮಾಡಿದೆನು. ಆದ್ದರಿಂದ ನೀವು ಈ ಆಜ್ಞೆಗಳಿಗೆ ವಿಧೇಯರಾಗಬೇಕು:


ನೀವು ಈಜಿಪ್ಟ್ ದೇಶದಲ್ಲಿ ಗುಲಾಮರಾಗಿದ್ದಿರೆಂಬುದನ್ನು ಮರೆಯಬೇಡಿ. ನಿಮ್ಮ ದೇವರಾದ ಯೆಹೋವನು ತನ್ನ ಮಹಾಶಕ್ತಿಯಿಂದ ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿ ನಿಮ್ಮನ್ನು ಸ್ವತಂತ್ರರನ್ನಾಗಿ ಮಾಡಿದನು. ಆದ್ದರಿಂದಲೇ ನಿಮ್ಮ ದೇವರು ಸಬ್ಬತ್ ದಿನವನ್ನು ಆಚರಿಸಬೇಕೆಂದು ಆಜ್ಞೆ ಮಾಡಿದ್ದು.


“ನಿಮ್ಮ ದೇವರಾದ ಯೆಹೋವನನ್ನು ಸನ್ಮಾನಿಸಿ ಆತನನ್ನೇ ಸೇವಿಸಿರಿ. ಆತನನ್ನು ಮರೆತುಬಿಡಬೇಡಿರಿ. ಈಜಿಪ್ಟ್ ದೇಶದಲ್ಲಿ ಗುಲಾಮರಾಗಿದ್ದಾಗ ಆತನೇ ನಿಮ್ಮನ್ನು ವಿಮೋಚಿಸಿದನಲ್ಲಾ?


ನಮ್ಮ ಜನರನ್ನು ಈಜಿಪ್ಟಿನಿಂದ ಹೊರತಂದವನು ನಮ್ಮ ದೇವರಾದ ಯೆಹೋವನೆಂದು ನಮಗೆ ಗೊತ್ತು. ನಾವು ಈಜಿಪ್ಟಿನಲ್ಲಿ ಗುಲಾಮರಾಗಿದ್ದೆವು; ಆದರೆ ಯೆಹೋವನು ಅಲ್ಲಿ ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿ ನಮ್ಮನ್ನು ಅಲ್ಲಿಂದ ಬಿಡಿಸಿಕೊಂಡು ಬಂದನು. ನಾವು ಬೇರೆ ದೇಶಗಳಲ್ಲಿ ಪ್ರವಾಸ ಮಾಡಿಕೊಂಡು ಬರುವಾಗ ನಮ್ಮನ್ನು ರಕ್ಷಿಸಿದನು.


ಯೆಹೋವನು ಇಸ್ರೇಲರನ್ನು ಈಜಿಪ್ಟಿನಿಂದ ಬಿಡಿಸಿಕೊಂಡು ಬಂದಿದ್ದನು. ಅವರ ಪೂರ್ವಿಕರು ಯೆಹೋವನನ್ನು ಆರಾಧಿಸುತ್ತಿದ್ದರು. ಆದರೆ ಇಸ್ರೇಲರು ಯೆಹೋವನನ್ನು ಅನುಸರಿಸದೆ ತಮ್ಮ ಸುತ್ತಮುತ್ತಲಿನ ಜನರ ಸುಳ್ಳುದೇವರುಗಳನ್ನು ಪೂಜಿಸಲು ಆರಂಭಿಸಿದರು. ಆದ್ದರಿಂದ ಯೆಹೋವನಿಗೆ ಕೋಪ ಬಂತು.


ಆದ್ದರಿಂದ ಯೆಹೋವನು ಅವರ ಹತ್ತಿರಕ್ಕೆ ಒಬ್ಬ ಪ್ರವಾದಿಯನ್ನು ಕಳುಹಿಸಿದನು. ಆ ಪ್ರವಾದಿಯು ಇಸ್ರೇಲರಿಗೆ ಹೀಗೆ ಹೇಳಿದನು: “ಇಸ್ರೇಲರ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಿರಿ. ನಾನು ನಿಮ್ಮನ್ನು ಸ್ವತಂತ್ರರನ್ನಾಗಿ ಮಾಡಿ ಅಲ್ಲಿಂದ ಹೊರಗೆ ತಂದೆನು.


ಆತನ ಸೇವಕನಾದ ಇಸ್ರೇಲನ ಸಂತತಿಯವರೇ, ಆತನು ಆರಿಸಿಕೊಂಡ ಯಾಕೋಬನ ಸಂತತಿಯವರೇ,


“ಇಸ್ರೇಲ್ ಜನರು ನಿನ್ನ ಜನಾಂಗ; ಅವರು ನಿನ್ನ ಸೇವಕರಾಗಿದ್ದಾರೆ. ನೀನು ನಿನ್ನ ಮಹಾಶಕ್ತಿಯನ್ನು ಉಪಯೋಗಿಸಿ ಅವರನ್ನು ರಕ್ಷಿಸಿರುವೆ.


ಆತನು ಇಸ್ರೇಲರನ್ನು ಈಜಿಪ್ಟಿನಿಂದ ಹೊರತಂದನು. ಆತನ ಪ್ರೀತಿ ಶಾಶ್ವತವಾದದ್ದು.


ಯೆರೆಮೀಯನೇ, ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ: “ನಾನು ಈಜಿಪ್ಟಿನಲ್ಲಿ ಗುಲಾಮರಾಗಿದ್ದ ನಿಮ್ಮ ಪೂರ್ವಿಕರನ್ನು ಅಲ್ಲಿಂದ ಹೊರತಂದೆನು. ನಾನು ಹಾಗೆ ಮಾಡಿದಾಗ ಅವರ ಸಂಗಡ ಒಂದು ಒಡಂಬಡಿಕೆಯನ್ನು ಮಾಡಿಕೊಂಡೆ.


“ನಮ್ಮ ದೇವರಾದ ಯೆಹೋವನೇ, ನೀನು ನಿನ್ನ ಶಕ್ತಿಯಿಂದ ನಮ್ಮನ್ನು ಈಜಿಪ್ಟಿನಿಂದ ಹೊರಗೆ ತೆಗೆದುಕೊಂಡು ಬಂದೆ. ನಾವು ನಿನ್ನ ಜನರಾಗಿದ್ದೇವೆ. ನೀನು ಕರುಣೆ ತೋರುವುದರಲ್ಲಿ ಇಂದಿಗೂ ಸುಪ್ರಸಿದ್ಧನಾಗಿರುವೆ. ಯೆಹೋವನೇ, ನಾವು ಪಾಪ ಮಾಡಿದ್ದೇವೆ. ನಾವು ಬಹಳ ಹೀನಕೃತ್ಯಗಳನ್ನು ಮಾಡಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು