ವಿಮೋಚನಕಾಂಡ 13:19 - ಪರಿಶುದ್ದ ಬೈಬಲ್19 ಮೋಶೆಯು ತನ್ನೊಡನೆ ಯೋಸೇಫನ ಎಲುಬುಗಳನ್ನು ತೆಗೆದುಕೊಂಡು ಹೋದನು. (ಯೋಸೇಫನು ಸಾಯುವ ಮೊದಲು, ತನಗಾಗಿ ಈ ಕಾರ್ಯವನ್ನು ಮಾಡುವಂತೆ ಇಸ್ರೇಲನ ಪುತ್ರರಿಂದ ಪ್ರಮಾಣ ಮಾಡಿಸಿದ್ದನು. ಯೋಸೇಫನು ಅವರಿಗೆ, “ಯೆಹೋವನು ನಿಮ್ಮನ್ನು ರಕ್ಷಿಸುವಾಗ, ಈಜಿಪ್ಟಿನಿಂದ ನನ್ನ ಎಲುಬುಗಳನ್ನು ತೆಗೆದುಕೊಂಡು ಹೋಗಲು ಮರೆಯಬೇಡಿ” ಎಂದು ಹೇಳಿದ್ದನು.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಇದಲ್ಲದೆ ಯೋಸೇಫನು ಇಸ್ರಾಯೇಲರಿಗೆ, “ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಪರಾಂಬರಿಸಿ ತನ್ನ ವಾಗ್ದಾನವನ್ನು ನೆರವೇರಿಸುವವನಾಗಿರುವುದರಿಂದ ನೀವು ಹೋಗುವಾಗ ನನ್ನ ದೇಹದ ಅಸ್ತಿಮೂಳೆಗಳನ್ನು ನಿಮ್ಮ ಸಂಗಡ ತೆಗೆದುಕೊಂಡು ಹೋಗಬೇಕು” ಎಂದು ಖಂಡಿತವಾದ ಪ್ರಮಾಣವನ್ನು ಮಾಡಿಸಿದ್ದರಿಂದ ಮೋಶೆಯು ಅವನ ಮೂಳೆಗಳನ್ನು ತನ್ನ ಸಂಗಡ ತೆಗೆದುಕೊಂಡು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಇದಲ್ಲದೆ ಜೋಸೆಫನು ಇಸ್ರಯೇಲರಿಗೆ, “ಖಂಡಿತವಾಗಿ ದೇವರು ನಿಮ್ಮ ನೆರವಿಗೆ ಬರುವರು; ತಮ್ಮ ವಾಗ್ದಾನವನ್ನು ಈಡೇರಿಸುವರು. ನೀವು ಹೋಗುವಾಗ ನನ್ನ ಶವವನ್ನು ನಿಮ್ಮ ಸಂಗಡ ತೆಗೆದುಕೊಂಡು ಹೋಗಬೇಕು” ಎಂದು ಹೇಳಿ ಅವರಿಂದ ದೃಢಪ್ರಮಾಣ ಮಾಡಿಸಿದ್ದನು. ಆದುದರಿಂದಲೆ ಮೋಶೆ ಅವನ ಶವವನ್ನು ತನ್ನ ಸಂಗಡ ತೆಗೆದುಕೊಂಡು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಇದಲ್ಲದೆ ಯೋಸೇಫನು ಇಸ್ರಾಯೇಲ್ಯರಿಗೆ - ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಪರಾಂಬರಿಸಿ ತನ್ನ ವಾಗ್ದಾನವನ್ನು ನೆರವೇರಿಸುವನಾದದರಿಂದ ನೀವು ಹೋಗುವಾಗ ನನ್ನ ಶವವನ್ನು ನಿಮ್ಮ ಸಂಗಡ ತೆಗೆದುಕೊಂಡು ಹೋಗಬೇಕೆಂದು ಹೇಳಿ ಖಂಡಿತವಾದ ಪ್ರಮಾಣವನ್ನು ಮಾಡಿಸಿದ್ದದರಿಂದ ಮೋಶೆಯು ಅವನ ಶವವನ್ನು ಸಂಗಡ ತೆಗೆದುಕೊಂಡು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆಗ ಮೋಶೆಯು ತನ್ನೊಂದಿಗೆ ಯೋಸೇಫನ ಎಲುಬುಗಳನ್ನು ತೆಗೆದುಕೊಂಡು ಹೋದನು. ಏಕೆಂದರೆ ಯೋಸೇಫನು ಇಸ್ರಾಯೇಲರಿಗೆ, “ದೇವರು ನಿಜವಾಗಿಯೂ ನಿಮ್ಮ ಸಹಾಯಕ್ಕೆ ಬರುವರು. ಆಗ ನೀವು ನನ್ನ ಎಲುಬುಗಳನ್ನು ಇಲ್ಲಿಂದ ನಿಮ್ಮ ಕೂಡ ತೆಗೆದುಕೊಂಡು ಹೋಗಬೇಕು,” ಎಂದು ಹೇಳಿ ಅವರಿಂದ ದೃಢಪ್ರಮಾಣ ಮಾಡಿಸಿದ್ದನು. ಅಧ್ಯಾಯವನ್ನು ನೋಡಿ |