Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 13:5 - ಪರಿಶುದ್ದ ಬೈಬಲ್‌

5 ಆಗ ಯೆಹೋವನು ಒಂದು ವಿಶೇಷ ವಾಗ್ದಾನವನ್ನು ನಿಮ್ಮ ಪೂರ್ವಿಕರಿಗೆ ಮಾಡಿದನು. ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸಿಸುವ ಸಮೃದ್ಧಿಕರವಾದ ದೇಶವನ್ನು ನಿಮಗೆ ಕೊಡುವುದಾಗಿ ಯೆಹೋವನು ವಾಗ್ದಾನ ಮಾಡಿದನು. ಆತನು ನಿಮಗೆ ಆ ದೇಶವನ್ನು ಕೊಟ್ಟಾಗ ಪ್ರತಿವರ್ಷದ ಮೊದಲನೆಯ ತಿಂಗಳ ಈ ದಿನವನ್ನು ಆರಾಧನೆಯ ವಿಶೇಷ ದಿನವನ್ನಾಗಿ ಇಟ್ಟುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಮಾಡಿ ಹೇಳಿದಂತೆ, ನಿಮ್ಮನ್ನು ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ಕರೆದು ತಂದು ಅದನ್ನು ನಿಮಗೆ ಕೊಟ್ಟಾಗ ನೀವು ಈ ತಿಂಗಳಲ್ಲಿ ಈ ಆಚರಣೆಯನ್ನು ನಡೆಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸರ್ವೇಶ್ವರ ನಿಮ್ಮ ಪೂರ್ವಜರಿಗೆ ಪ್ರಮಾಣವಾಗಿ ಹೇಳಿದಂತೆ ನಿಮ್ಮನ್ನು ಹಾಲೂ ಜೇನೂ ಹರಿಯುವ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ಕರೆದು ತಂದು ಅದನ್ನು ನಿಮಗೆ ಕೊಟ್ಟಾಗ, ನೀವು ಈ ಆಚರಣೆಯನ್ನು ಈ ತಿಂಗಳಿನಲ್ಲೇ ನಡೆಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೋವನು ನಿಮ್ಮ ಪಿತೃಗಳಿಗೆ ಪ್ರಮಾಣವಾಗಿ ಹೇಳಿದಂತೆ ನಿಮ್ಮನ್ನು ಹಾಲೂ ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಹಿವ್ವಿಯರೂ ಯೆಬೂಸಿಯರೂ ವಾಸವಾಗಿರುವ ದೇಶಕ್ಕೆ ಕರತಂದು, ಅದನ್ನು ನಿಮಗೆ ಕೊಟ್ಟಾಗ ನೀವು ಈ ತಿಂಗಳಲ್ಲಿ ಈ ಆಚಾರವನ್ನು ನಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದ್ದರಿಂದ ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಹಾಲೂ ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರ, ಹಿತ್ತಿಯರ, ಅಮೋರಿಯರ, ಹಿವ್ವಿಯರ, ಯೆಬೂಸಿಯರ ದೇಶಕ್ಕೆ ನಿಮ್ಮನ್ನು ಕರೆತಂದು ಅದನ್ನು ನಿಮಗೆ ಕೊಟ್ಟಾಗ ಈ ಹಬ್ಬವನ್ನು ಈ ತಿಂಗಳಲ್ಲಿ ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 13:5
31 ತಿಳಿವುಗಳ ಹೋಲಿಕೆ  

ಈಗ ನಾನು ಇಳಿದುಹೋಗಿ ಈಜಿಪ್ಟಿನವರಿಂದ ನನ್ನ ಜನರನ್ನು ರಕ್ಷಿಸುವೆನು. ನಾನು ಅವರನ್ನು ಆ ದೇಶದಿಂದ ಬಿಡುಗಡೆ ಮಾಡಿ ಒಳ್ಳೆಯದಾದ ಮತ್ತು ವಿಶಾಲವಾದ ದೇಶಕ್ಕೆ ಅವರನ್ನು ನಡೆಸುವೆನು. ಅದು ಸಮೃದ್ಧಿಕರವಾದ ದೇಶ. ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸವಾಗಿರುವ ದೇಶ ಅದಾಗಿದೆ.


“‘ತರುವಾಯ ನೀವು ಜೋರ್ಡನ್ ನದಿಯನ್ನು ದಾಟಿ ಜೆರಿಕೊ ನಗರಕ್ಕೆ ಹೋದಿರಿ. ಜೆರಿಕೊ ನಗರದ ಜನರು ನಿಮ್ಮ ಮೇಲೆ ಯುದ್ಧ ಮಾಡಿದರು. ಅಮೋರಿಯರು, ಪೆರಿಜ್ಜೀಯರು, ಕಾನಾನ್ಯರು, ಹಿತ್ತಿಯರು, ಗಿರ್ಗಾಷಿಯರು, ಹಿವ್ವಿಯರು, ಯೆಬೂಸಿಯರು ಕೂಡ ನಿಮ್ಮ ಮೇಲೆ ಯುದ್ಧಕ್ಕೆ ಬಂದರು. ಆದರೆ ನೀವು ಅವರೆಲ್ಲರನ್ನು ಸೋಲಿಸುವಂತೆ ನಾನು ಮಾಡಿದೆನು.


ಇದಲ್ಲದೆ ಅಬ್ರಹಾಮ, ಇಸಾಕ ಮತ್ತು ಯಾಕೋಬರಿಗೆ ನಾನು ವಾಗ್ದಾನ ಮಾಡಿದ ದೇಶಕ್ಕೆ ನಿಮ್ಮನ್ನು ನಡಿಸುವೆನು. ನಾನು ಆ ದೇಶವನ್ನು ನಿಮಗೆ ಕೊಡುವೆನು. ಅದು ನಿಮ್ಮದಾಗಿರುವುದು. ನಾನೇ ಯೆಹೋವನು’” ಎಂದು ಹೇಳಿದನು.


ನಾನು ಈ ದಿನ ಕೊಡುವ ಆಜ್ಞೆಗಳಿಗೆ ವಿಧೇಯರಾಗಿರಿ. ನಿಮ್ಮ ವೈರಿಗಳಾದ ಅಮೋರಿಯರನ್ನು, ಕಾನಾನ್ಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಮತ್ತು ಯೆಬೂಸಿಯರನ್ನು ನಾನು ಹೊರಗಟ್ಟುವೆನು.


ಈಜಿಪ್ಟಿನಲ್ಲಿ ನೀವು ಅನುಭವಿಸುತ್ತಿರುವ ಸಂಕಟಗಳಿಂದ ಬಿಡಿಸಬೇಕೆಂದು ತೀರ್ಮಾನಿಸಿದ್ದೇನೆ. ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸವಾಗಿರುವ ಸಮೃದ್ಧಿಕರವಾದ ದೇಶಕ್ಕೆ ನಾನು ನಿಮ್ಮನ್ನು ನಡೆಸುವೆನು!’ ಎಂದು ಹೇಳು.


“ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ನೀವು ಬೇಗನೆ ಪ್ರವೇಶಿಸಲಿದ್ದೀರಿ. ಆ ದೇಶವನ್ನು ಸ್ವಾಧೀನಮಾಡಿಕೊಂಡು ಅಲ್ಲಿ ನೆಲೆಸುವಿರಿ.


“ಬೇರೆ ಜನಾಂಗಗಳು ವಾಸಿಸುವ ದೇಶವನ್ನು ನಿಮ್ಮ ದೇವರು ನಿಮಗೆ ಕೊಡುತ್ತಿದ್ದಾನೆ. ಆ ಜನಾಂಗಗಳನ್ನು ಆತನು ನಾಶಮಾಡುತ್ತಾನೆ. ಅವರು ವಾಸಿಸುತ್ತಿದ್ದ ಸ್ಥಳಗಳಲ್ಲಿ ನೀವು ವಾಸಿಸುವಿರಿ. ಅವರ ಮನೆಗಳನ್ನೂ ಪಟ್ಟಣಗಳನ್ನೂ ನೀವು ವಶಪಡಿಸಿಕೊಳ್ಳುವಿರಿ. ಅಂಥಾ ಸಮಯದಲ್ಲಿ


“ನೀವು ಬೇರೆಯವರ ದೇಶವನ್ನು ವಶಪಡಿಸಿಕೊಳ್ಳಲು ಹೋಗುತ್ತಿದ್ದೀರಿ. ನಿಮ್ಮ ದೇವರಾದ ಯೆಹೋವನು ಆ ಜನರನ್ನು ನಿಮಗಾಗಿ ನಾಶಮಾಡುವನು. ಆ ಜನರನ್ನು ಅಲ್ಲಿಂದ ಹೊಡೆದೋಡಿಸಿ ಅವರ ಸ್ಥಳದಲ್ಲಿ ನೀವು ವಾಸಿಸುವಿರಿ.


“ನಿಮಗೆ ಸ್ವಾಸ್ತ್ಯವಾಗಿ ಕೊಡುವ ದೇಶಕ್ಕೆ ಯೆಹೋವನು ನಿಮ್ಮನ್ನು ನಡೆಸುವನು. ನಿಮಗಿಂತ ಬಲಿಷ್ಠವಾಗಿದ್ದು ಅಲ್ಲಿ ವಾಸಿಸುತ್ತಿರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ಎಂಬ ಏಳು ಜನಾಂಗಗಳನ್ನು ಆ ದೇಶದಿಂದ ನಿಮಗಾಗಿ ಹೊರಗಟ್ಟುವನು.


‘ಈಜಿಪ್ಟಿನಿಂದ ಬಂದ ಈ ಜನರಲ್ಲಿ ಮತ್ತು ಇಪ್ಪತ್ತು ವರ್ಷ ಮೊದಲುಗೊಂಡು ಅದಕ್ಕಿಂತ ಹೆಚ್ಚು ವಯಸ್ಸಾದ ನಿಮ್ಮವರೆಲ್ಲಾ ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನ ಮತ್ತು ನೂನನ ಮಗನಾದ ಯೆಹೋಶುವನ ಹೊರತು ಯಾರೂ ನನ್ನನ್ನು ನಿಜವಾಗಿಯೂ ಅನುಸರಿಸದೆ ಹೋದದ್ದರಿಂದ, ನಾನು ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ದೇಶವನ್ನು ಅವರಿಬ್ಬರೇ ಹೊರತು ಬೇರೆ ಯಾರೂ ನೋಡುವುದೇ ಇಲ್ಲ’ ಎಂದು ಖಂಡಿತವಾಗಿ ಹೇಳಿದನು.


ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರೇ ಹೊರತು ನಿಮ್ಮಲ್ಲಿ ಬೇರೆ ಯಾರೂ ನಾನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಸೇರುವುದಿಲ್ಲ.


‘ಯೆಹೋವನು ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶದಲ್ಲಿ ಇಸ್ರೇಲರನ್ನು ಸೇರಿಸುವುದಕ್ಕೆ ಶಕ್ತಿಸಾಲದೆ ಅವರನ್ನು ಮರುಭೂಮಿಯಲ್ಲಿ ನಾಶಮಾಡಿದನು’ ಎಂದು ಮಾತಾಡಿಕೊಳ್ಳುವರು.


ತರುವಾಯ ಯೆಹೋವನು ಮೋಶೆಗೆ, “ನೀನು ಮತ್ತು ಈಜಿಪ್ಟಿನಿಂದ ನೀನು ಕರೆದುಕೊಂಡು ಬಂದ ಜನರು ಈ ಸ್ಥಳವನ್ನು ಬಿಡಬೇಕು. ನಾನು ಅಬ್ರಹಾಮನಿಗೆ, ಇಸಾಕನಿಗೆ ಮತ್ತು ಯಾಕೋಬನಿಗೆ ವಾಗ್ದಾನ ಮಾಡಿದ ದೇಶಕ್ಕೆ ಹೋಗಿ. ನಾನು ಅವರಿಗೆ ‘ನಿಮ್ಮ ನಂತರ ಜೀವಿಸುವ ನಿಮ್ಮ ಸಂತತಿಯವರಿಗೆ ಆ ದೇಶವನ್ನು ಕೊಡುವೆನು’ ಎಂದು ನಾನು ಅವರಿಗೆ ವಾಗ್ದಾನ ಮಾಡಿದ್ದೇನೆ.


ಯೋಸೇಫನಿಗೆ ಸಾವು ಸಮೀಪಿಸಿದಾಗ ಅವನು ತನ್ನ ಸಹೋದರರಿಗೆ, “ನಾನು ಸಾಯುವ ಕಾಲ ಸಮೀಪಿಸಿದೆ. ಆದರೆ ನಿಮ್ಮನ್ನು ಪೋಷಿಸುವವನು ದೇವರೆಂಬುದು ನಿಮಗೆ ತಿಳಿದಿರಲಿ. ಆತನು ಈ ದೇಶದಿಂದ ನಿಮ್ಮನ್ನು ಕರೆದುಕೊಂಡು ಹೋಗಿ ಅಬ್ರಹಾಮನಿಗೂ ಇಸಾಕನಿಗೂ ಮತ್ತು ಯಾಕೋಬನಿಗೂ ವಾಗ್ದಾನ ಮಾಡಿದ್ದ ದೇಶವನ್ನು ಕೊಡುವನು” ಎಂದು ಹೇಳಿದನು.


ನಾನು ನಿನ್ನ ಸಂಗಡವಿದ್ದು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಕುಟುಂಬಕ್ಕೂ ಈ ಪ್ರದೇಶಗಳನ್ನೆಲ್ಲ ಕೊಡುವೆನು. ನಾನು ನಿನ್ನ ತಂದೆಯಾದ ಅಬ್ರಹಾಮನಿಗೆ ಪ್ರಮಾಣ ಮಾಡಿದ್ದನ್ನು ನೆರವೇರಿಸುವೆನು.


ನೀವು ಈ ಆಜ್ಞೆಯನ್ನು ಜ್ಞಾಪಕದಲ್ಲಿಡಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತವಾದ ನಿಯಮವಾಗಿದೆ.


ಆದ್ದರಿಂದ ಪ್ರತಿವರ್ಷ ನಿಯಮಿತವಾದ ಕಾಲದಲ್ಲಿ ನೀವು ಈ ಹಬ್ಬವನ್ನು ಆಚರಿಸಬೇಕು.


“ಯೆಹೋವನು ನಿಮಗೆ ಕೊಡುವುದಾಗಿ ವಾಗ್ದಾನ ಮಾಡಿದ ದೇಶಕ್ಕೆ ನಿಮ್ಮನ್ನು ನಡಿಸುವನು. ಈಗ ಅಲ್ಲಿ ಕಾನಾನ್ಯರು ವಾಸವಾಗಿದ್ದಾರೆ. ಆದರೆ ದೇವರು ಆ ದೇಶವನ್ನು ನಿಮಗೆ ಕೊಡುವುದಾಗಿ ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದನು. ದೇವರು ಆ ದೇಶವನ್ನು ನಿಮಗೆ ಕೊಟ್ಟನಂತರ


ನಿನ್ನ ಸೇವೆಮಾಡಿದ ಅಬ್ರಹಾಮನನ್ನು, ಇಸಾಕನನ್ನು, ಯಾಕೋಬನನ್ನು ಜ್ಞಾಪಿಸಿಕೊ. ನೀನು ನಿನ್ನ ಹೆಸರನ್ನು ಉಪಯೋಗಿಸಿ ಆ ಜನರಿಗೆ ವಾಗ್ದಾನವನ್ನು ಮಾಡಿದೆ. ‘ನಾನು ನಿನ್ನ ಸಂತತಿಯವರನ್ನು ಆಕಾಶದ ನಕ್ಷತ್ರಗಳಷ್ಟು ಮಾಡುವೆನು. ನಾನು ವಾಗ್ದಾನ ಮಾಡಿದಂತೆ ಈ ದೇಶವನ್ನೆಲ್ಲಾ ನಿನ್ನ ಸಂತತಿಗಳವರಿಗೆ ಕೊಡುವೆನು. ಈ ದೇಶ ಎಂದೆಂದಿಗೂ ಅವರದಾಗಿರುವುದು’ ಎಂದು ನೀನು ನಿನ್ನ ಹೆಸರಿನಲ್ಲಿ ವಾಗ್ದಾನ ಮಾಡಿದೆಯಲ್ಲಾ” ಅಂದನು.


ನೀವು ಅವರ ದೇಶವನ್ನು ಪಡೆಯುವಿರಿ ಎಂದು ನಾನು ನಿಮಗೆ ಹೇಳಿದ್ದೇನೆ. ನಾನು ಅವರ ದೇಶವನ್ನು ನಿಮಗೆ ಕೊಡುವೆ. ಅದು ನಿಮ್ಮ ದೇಶವಾಗಿರುವದು. ಅದು ಅನೇಕ ಒಳ್ಳೆ ಸಂಗತಿಗಳಿಂದ ತುಂಬಿದ ದೇಶವಾಗಿದೆ. ನಾನು ನಿಮ್ಮ ದೇವರಾಗಿರುವ ಯೆಹೋವನು! “ನಾನು ನಿಮ್ಮನ್ನು ನನ್ನ ವಿಶೇಷ ಜನರನ್ನಾಗಿ ಮಾಡಿಕೊಂಡಿದ್ದೇನೆ. ನಾನು ನಿಮ್ಮನ್ನು ಇತರ ಜನರಿಂದ ಆರಿಸಿಕೊಂಡಿದ್ದೇನೆ.


ನಾನು ಇವರಿಗೆ ಹೆತ್ತ ತಾಯಿಯೋ? ನಾನು ಅವರಿಗೆ ಜನ್ಮ ಕೊಡಲಿಲ್ಲವೆಂದು ನಿನಗೆ ಗೊತ್ತಿದೆ. ದಾದಿಯು ಮಗುವನ್ನು ಎತ್ತಿಕೊಂಡು ಹೋಗುವಂತೆ, ಈ ಜನರನ್ನು ನಾನು ನನ್ನ ಮಡಿಲಲ್ಲಿ ಇಟ್ಟು, ನೀನು ಅವರ ಪೂರ್ವಿಕರಿಗೆ ವಾಗ್ದಾನಮಾಡಿರುವ ದೇಶಕ್ಕೆ ಎತ್ತಿಕೊಂಡು ಹೋಗುವಂತೆ ನೀನು ನನಗೇಕೆ ಹೇಳುವೆ?


ಜನರು ಮೋಶೆಗೆ, “ನೀನು ಕಳುಹಿಸಿದ ದೇಶಕ್ಕೆ ನಾವು ಹೋಗಿ ಸಂಚರಿಸಿ ನೋಡಿದೆವು. ಅದು ಹಾಲೂ ಜೇನೂ ಹರಿಯುವ ದೇಶವಾಗಿದೆ. ಇಗೋ, ಹಣ್ಣುಗಳಲ್ಲಿ ಕೆಲವು ಇಲ್ಲಿವೆ.


“ನಾನು ನಿಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನೆರವೇರಿಸಲು ನಾನು ಇದೆಲ್ಲವನ್ನು ಮಾಡಿದೆ. ನಾನು ಅವರಿಗೆ ಫಲವತ್ತಾದ ಭೂಮಿಯನ್ನೂ ಹಾಲು ಮತ್ತು ಜೇನು ಹರಿಯುವ ಪ್ರದೇಶವನ್ನೂ ಕೊಡುವ ವಾಗ್ದಾನ ಮಾಡಿದ್ದೆ. ನೀವು ಈಗ ಈ ಪ್ರದೇಶದಲ್ಲಿ ವಾಸಮಾಡುತ್ತಿದ್ದೀರಿ.” ನಾನು, “ಯೆಹೋವನೇ ನಿನ್ನ ಅಪ್ಪಣೆಯಂತಾಗಲಿ” ಎಂದು ಉತ್ತರಿಸಿದೆನು.


“ಯೆಹೋವನೇ, ನೀನು ಈ ಭೂಮಿಯನ್ನು ಇಸ್ರೇಲರಿಗೆ ಕೊಟ್ಟೆ. ನೀನು ಬಹಳ ಕಾಲದ ಹಿಂದೆಯೇ ಈ ಭೂಮಿಯನ್ನು ಅವರ ಪೂರ್ವಿಕರಿಗೆ ಕೊಡುವದಾಗಿ ಮಾತು ಕೊಟ್ಟಿದ್ದೆ. ಇದು ಬಹಳ ಒಳ್ಳೆಯ ಭೂಮಿ. ಇದು ಅನೇಕ ಒಳ್ಳೆ ವಸ್ತುಗಳನ್ನು ಹೊಂದಿರುವ ಒಳ್ಳೆಯ ಭೂಮಿ.


ಅವರನ್ನು ಈಜಿಪ್ಟಿನಿಂದ ಹೊರಗೆ ತಂದು, ನಾನು ಅವರಿಗಾಗಿ ಹುಡುಕಿಟ್ಟಿರುವ ದೇಶಕ್ಕೆ ಕರೆದುಕೊಂಡು ಹೋಗುವುದಾಗಿ ವಾಗ್ದಾನ ಮಾಡಿದೆನು. ಅದು ಹಾಲೂ ಜೇನೂ ಹರಿಯುವ ದೇಶವಾಗಿತ್ತು. ಅದು ಎಲ್ಲಾ ದೇಶಗಳಿಗಿಂತಲೂ ಸುಂದರವಾದ ದೇಶ.


ನಾನು ಅವರೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡೆನು. ಕಾನಾನ್ ದೇಶವನ್ನು ಅವರಿಗೆ ಕೊಡುವುದಾಗಿ ನಾನು ವಾಗ್ದಾನ ಮಾಡಿದೆನು. ಅವರು ಆ ದೇಶದಲ್ಲಿ ಜೀವಿಸಿದರೂ ಅದು ಅವರ ಸ್ವಂತ ದೇಶವಾಗಿರಲಿಲ್ಲ.


ಹಿವ್ವಿಯರಿಗೆ, ಅರ್ಕಿಯರಿಗೆ, ಸೀನಿಯರಿಗೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು