ವಿಮೋಚನಕಾಂಡ 13:9 - ಪರಿಶುದ್ದ ಬೈಬಲ್9 “ಈ ಹಬ್ಬವು ನಿಮ್ಮ ಕೈಗಳಲ್ಲಿ ಜ್ಞಾಪಕಪಟ್ಟಿಯಂತಿದ್ದು ಯೆಹೋವನು ತನ್ನ ಮಹಾಶಕ್ತಿಯಿಂದ ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿದ್ದನ್ನು ಮತ್ತು ನಿಮಗೆ ಆತನು ನೀಡಿದ ಉಪದೇಶಗಳನ್ನು ನೆನಪಿಗೆ ತರುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಐಗುಪ್ತ ದೇಶದಿಂದ ಬಿಡಿಸಿದ್ದರಿಂದ ಆತನ ನಿಯಮವನ್ನು ಕುರಿತು ನೀವು ಹೇಳಬೇಕು. ಈ ಆಚರಣೆಯು ನಿಮ್ಮ ಕೈಗಳ ಮೇಲೆ ಗುರುತಾಗಿಯೂ, ಹಣೆಗೆ ಕಟ್ಟಿಕೊಂಡಿರುವ ಜ್ಞಾಪಕಪಟ್ಟಿಯಂತೆಯೂ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಇದಕ್ಕೆ ಈ ಆಚರಣೆಯು ನಮ್ಮ ಕೈಗೆ ಕಟ್ಟಿದ ಕಂಕಣದಂತೆ, ಹಣೆಗೆ ಕಟ್ಟಿದ ಜ್ಞಾಪಕ ಪಟ್ಟಿಯಂತೆ ಇರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಐಗುಪ್ತದೇಶದಿಂದ ಬಿಡಿಸಿದನಾದದರಿಂದ ಆತನ ನಿಯಮವನ್ನು ಕುರಿತು ನೀವು ಮಾತಾಡಬೇಕೆಂಬದಕ್ಕಾಗಿ ಈ ಆಚಾರವು ನಿಮಗೆ ಕೈಯಲ್ಲಿ ಕಟ್ಟಿಕೊಂಡಿರುವ ದಾರದಂತೆಯೂ ಹುಬ್ಬುಗಳ ನಡುವೆ ಕಟ್ಟಿಕೊಂಡಿರುವ ಜ್ಞಾಪಕಪಟ್ಟಿಯಂತೆಯೂ ಇರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಏಕೆಂದರೆ ಯೆಹೋವ ದೇವರು ನಿಮ್ಮನ್ನು ತಮ್ಮ ಭುಜಬಲದಿಂದ ಈಜಿಪ್ಟಿನಿಂದ ಹೊರಗೆ ಬರಮಾಡಿದ್ದಾರೆ. ಆದ್ದರಿಂದ ದೇವರ ನಿಯಮವು ನಿಮ್ಮ ಬಾಯಲ್ಲಿ ಇರುವಂತೆ, ಈ ಆಚರಣೆಯು ನಿಮ್ಮ ಕೈಯಲ್ಲಿ ಗುರುತಾಗಿಯೂ ನಿಮ್ಮ ಹಣೆಯಲ್ಲಿ ಜ್ಞಾಪಕಾರ್ಥವಾಗಿಯೂ ಇರಬೇಕು. ಅಧ್ಯಾಯವನ್ನು ನೋಡಿ |