ವಿಮೋಚನಕಾಂಡ 14:11 - ಪರಿಶುದ್ದ ಬೈಬಲ್11 ಅವರು ಮೋಶೆಗೆ, “ನೀನು ಯಾಕೆ ನಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದೆ? ನಮ್ಮನ್ನು ಅರಣ್ಯದಲ್ಲಿ ಸಾಯಿಸುವುದಕ್ಕೆ ನೀನು ನಮ್ಮನ್ನು ಕರೆದುಕೊಂಡು ಬಂದೆಯಾ? ನಾವು ಈಜಿಪ್ಟಿನಲ್ಲಿಯೇ ಸಮಾಧಾನದಿಂದ ಸಾಯಬಹುದಾಗಿತ್ತಲ್ಲವೆ? ಈಜಿಪ್ಟಿನಲ್ಲಿ ಸಾಕಷ್ಟು ಸಮಾಧಿಗಳಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವರು ಮೋಶೆಗೆ, “ಐಗುಪ್ತ ದೇಶದಲ್ಲಿ ಸಮಾಧಿಗಳಿರಲಿಲ್ಲವೆಂದು ಮರುಭೂಮಿಯಲ್ಲಿ ಸಾಯಲಿ ಎಂದು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದೆಯೋ? ಯಾಕೆ ನೀನು ನಮಗೆ ಈ ರೀತಿಮಾಡಿ ಐಗುಪ್ತ ದೇಶದಿಂದ ಕರೆದುಕೊಂಡು ಬಂದೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಮೋಶೆಗೆ ಅವರು, “ಈಜಿಪ್ಟಿನಲ್ಲಿ ಸಮಾಧಿಗಳಿಲ್ಲವೆಂದು ಮರುಭೂಮಿಯಲ್ಲಿ ಸಾಯಲಿಯೆಂದು ನಮ್ಮನ್ನು ಇಲ್ಲಿಗೆ ಕರೆದುತಂದಿರೋ? ಈಜಿಪ್ಟಿನಿಂದ ಕರೆದುಕೊಂಡು ಬಂದು ನಮಗೆ ಹೀಗೆ ಮಾಡಿಬಿಟ್ಟಿದ್ದೇಕೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅವರು ಮೋಶೆಗೆ - ಐಗುಪ್ತದೇಶದಲ್ಲಿ ಸಮಾಧಿಗಳಿಲ್ಲವಾದದರಿಂದ ಅರಣ್ಯದಲ್ಲಿ ಸಾಯಲಿ ಎಂಬದಾಗಿ ನಮ್ಮನ್ನು ಇಲ್ಲಿಗೆ ಕರಕೊಂಡು ಬಂದಿಯೇನು? ಯಾಕೆ ನಮಗೆ ಈ ಪ್ರಕಾರ ಮಾಡಿ ಐಗುಪ್ತದೇಶದಿಂದ ಕರಕೊಂಡು ಬಂದಿ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅವರು ಮೋಶೆಗೆ, “ಈಜಿಪ್ಟಿನಲ್ಲಿ ಸಮಾಧಿಗಳು ಇಲ್ಲದ ಕಾರಣ ನಾವು ಮರುಭೂಮಿಯಲ್ಲಿ ಸಾಯುವ ಹಾಗೆ ನಮ್ಮನ್ನು ಕರೆದುಕೊಂಡು ಬಂದೆಯೋ? ಏಕೆ ನೀನು ಈ ಪ್ರಕಾರ ನಮಗೆ ಮಾಡಿ, ನಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದೆ? ಅಧ್ಯಾಯವನ್ನು ನೋಡಿ |
ಇಸ್ರೇಲರು ಈಜಿಪ್ಟನ್ನು ಬಿಟ್ಟುಹೋಗುವಂತೆ ಫರೋಹನು ಅನುಮತಿ ನೀಡಿದನು. ಇಸ್ರೇಲರು ಫಿಲಿಷ್ಟಿಯರ ದೇಶದ ಮೂಲಕ ಹಾದುಹೋಗುವ ರಸ್ತೆಯಲ್ಲಿ ಹೋಗಲು ಯೆಹೋವನು ಅನುಮತಿ ನೀಡಲಿಲ್ಲ. ಸಮುದ್ರದ ಮೂಲಕ ಹಾದುಹೋಗುವ ಆ ರಸ್ತೆ ಬಹಳ ಹತ್ತಿರವಾಗಿತ್ತು. ಆದರೆ ಯೆಹೋವನು, “ಇಸ್ರೇಲರು ಆ ದಾರಿಯಲ್ಲಿ ಹೋದರೆ, ಯುದ್ಧಮಾಡಬೇಕಾಗುವುದು. ಆಗ ಅವರು ತಮ್ಮ ಮನಸ್ಸುಗಳನ್ನು ಬದಲಾಯಿಸಿ ಈಜಿಪ್ಟಿಗೆ ಹಿಂತಿರುಗಬಹುದು” ಅಂದುಕೊಂಡನು.