Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 14:16 - ಪರಿಶುದ್ದ ಬೈಬಲ್‌

16 ನಿನ್ನ ಕೈಯಲ್ಲಿರುವ ಊರುಗೋಲನ್ನು ಕೆಂಪುಸಮುದ್ರದ ಮೇಲೆ ಚಾಚು. ಆಗ ಸಮುದ್ರವು ಇಬ್ಭಾಗವಾಗುವುದು. ಜನರು ಒಣನೆಲದ ಮೇಲೆ ಸಮುದ್ರವನ್ನು ದಾಟಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಕೈಚಾಚಿ ಅದನ್ನು ವಿಭಾಗಿಸು, ಆಗ ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ನಡೆದುಕೊಂಡು ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಚಾಚಿ ಅದನ್ನು ವಿಭಾಗಿಸು; ಆಗ ಇಸ್ರಯೇಲರು ಸಮುದ್ರದ ಮಧ್ಯೆ ಒಣಗಿದ ನೆಲದ ಮೇಲೆ ನಡೆದುಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಮತ್ತು ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಕೈಚಾಚಿ ಅದನ್ನು ವಿಭಾಗಿಸು; ಆಗ ಇಸ್ರಾಯೇಲ್ಯರು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ನಡೆದುಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನೀನು ನಿನ್ನ ಕೋಲನ್ನು ಎತ್ತಿ, ನಿನ್ನ ಕೈಯನ್ನು ಸಮುದ್ರದ ಮೇಲೆ ಚಾಚಿ, ಅದನ್ನು ವಿಭಾಗಿಸು. ಆಗ ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 14:16
16 ತಿಳಿವುಗಳ ಹೋಲಿಕೆ  

ಯೆಹೋವನು ಮೋಶೆಗೆ, “ನೀನು ಆರೋನನಿಗೆ, ‘ನಿನ್ನ ಕೈಯಲ್ಲಿರುವ ಊರುಗೋಲನ್ನು ನದಿಗಳ, ಕಾಲುವೆಗಳ, ಕೆರೆಗಳ ಮತ್ತು ನೀರಿರುವ ಪ್ರತಿಯೊಂದು ಸ್ಥಳದ ಮೇಲೆ ಚಾಚು’ ಎಂದು ಹೇಳು. ಅವನು ಚಾಚಿದಾಗ ನೀರೆಲ್ಲಾ ರಕ್ತವಾಗುವುದು. ಮರದ ಮತ್ತು ಕಲ್ಲಿನ ಪಾತ್ರೆಗಳಲ್ಲಿರುವ ನೀರು ಸಹ ರಕ್ತವಾಗುವುದು” ಎಂದು ಹೇಳಿದನು.


ಆಗ ಯೆಹೋವನು ಮೋಶೆಗೆ, “ನಿನ್ನ ಕೈಯನ್ನು ಸಮುದ್ರದ ಮೇಲೆ ಚಾಚು; ನೀರು ಈಜಿಪ್ಟಿನವರ ರಥಗಳನ್ನು ಮತ್ತು ರಾಹುತರನ್ನು ಮುಚ್ಚಿಕೊಳ್ಳುವುದು” ಎಂದು ಹೇಳಿದನು.


ಆದ್ದರಿಂದ ಮೋಶೆ ತನ್ನ ಹೆಂಡತಿಯನ್ನೂ ಗಂಡುಮಕ್ಕಳನ್ನೂ ಕತ್ತೆಗಳ ಮೇಲೆ ಕುಳ್ಳಿರಿಸಿ ಈಜಿಪ್ಟ್ ದೇಶಕ್ಕೆ ಮರಳಿ ಪ್ರಯಾಣ ಮಾಡಿದನು. ಮೋಶೆಯು ಯೆಹೋವನ ಶಕ್ತಿಯಿಂದ ಕೂಡಿದ ತನ್ನ ಊರುಗೋಲನ್ನು ಹಿಡಿದುಕೊಂಡು ಹೋದನು.


ಆದ್ದರಿಂದ ಹೋಗು. ನಿನ್ನ ಊರುಗೋಲನ್ನೂ ತೆಗೆದುಕೊಂಡು ಹೋಗು. ಯಾಕೆಂದರೆ ಅದರಿಂದಲೇ ನೀನು ಅದ್ಭುತಕಾರ್ಯಗಳನ್ನು ಮಾಡುವೆ” ಎಂದು ಹೇಳಿದನು.


ಯೆಹೋವನು ಮೋಶೆಗೆ, “ನಿನ್ನ ಕೈಯಲ್ಲಿರುವುದೇನು?” ಅಂದನು. ಮೋಶೆ, “ಊರುಗೋಲು” ಎಂದು ಉತ್ತರಿಸಿದನು.


ಆ ಬಳಿಕ ಸರ್ವಶಕ್ತನಾದ ಯೆಹೋವನು ಕೊರಡೆಯಿಂದ ಅಶ್ಶೂರವನ್ನು ಹೊಡೆಯುವನು. ಹಿಂದಿನ ಕಾಲದಲ್ಲಿ ಓರೇಬ್ ಬಂಡೆಯ ಮೇಲೆ ಮಿದ್ಯಾನ್ಯರನ್ನು ಯೆಹೋವನು ಹೇಗೆ ಸೋಲಿಸಿದನೋ ಹಾಗೆಯೇ ಅಶ್ಶೂರವನ್ನು ಸೋಲಿಸುವನು. ಹಿಂದಿನ ಕಾಲದಲ್ಲಿ ಯೆಹೋವನು ಈಜಿಪ್ಟನ್ನು ಶಿಕ್ಷಿಸಿದನು. ಆತನು ಕೋಲನ್ನೆತ್ತಿ ಸಮುದ್ರ ಮಾರ್ಗವಾಗಿ ತನ್ನ ಜನರನ್ನು ಈಜಿಪ್ಟಿನಿಂದ ಹೊರನಡಿಸಿದನು. ಅದೇ ರೀತಿಯಲ್ಲಿ ಅಶ್ಶೂರದಿಂದ ಯೆಹೋವನು ತನ್ನ ಜನರನ್ನು ರಕ್ಷಿಸಿ ಬಿಡಿಸುವನು.


“ಫರೋಹನು ನಿಮಗೆ, ಅದ್ಭುತಕಾರ್ಯವೊಂದನ್ನು ಮಾಡಿ ನಿಮ್ಮ ಅಧಿಕಾರವನ್ನು ರುಜುವಾತುಪಡಿಸಬೇಕೆಂದು ಕೇಳುವನು. ಆಗ ಮೋಶೆಯು ಆರೋನನಿಗೆ ಊರುಗೋಲನ್ನು ನೆಲದ ಮೇಲೆ ಬಿಸಾಡಲು ಹೇಳಬೇಕು. ಆರೋನನು ಬಿಸಾಡಿದ ಕೂಡಲೇ ಆ ಕೋಲು ಅವರ ಕಣ್ಣೆದುರಿನಲ್ಲಿಯೇ ಸರ್ಪವಾಗುವುದು” ಅಂದನು.


ತನ್ನ ಕೈಯಲ್ಲಿದ್ದ ಕೋಲನ್ನು ಎತ್ತಿ ಎರಡು ಸಾರಿ ಬಂಡೆಯನ್ನು ಹೊಡೆದನು. ಬಂಡೆಯಿಂದ ನೀರು ಹರಿಯತೊಡಗಿತು. ಜನರಿಗೆ ಮತ್ತು ಪಶುಗಳಿಗೆ ಕುಡಿಯಲು ನೀರು ದೊರೆಯಿತು.


ಆಗ ಯೆಹೋವನು ಮೋಶೆಗೆ, “ನೀನು ನನಗೆ ಮೊರೆಯಿಡುತ್ತಿರುವುದೇಕೆ? ಇಸ್ರೇಲರಿಗೆ ಮುಂದೆ ಹೋಗಲು ಆಜ್ಞಾಪಿಸು.


ಯೆಹೋವನು ಮೋಶೆಗೆ, “ಇಸ್ರೇಲ್ ಜನರ ಮುಂದೆ ಹೋಗು. ನಿನ್ನೊಡನೆ ಜನರ ಕೆಲವು ಹಿರಿಯರನ್ನು ಕರೆದುಕೊ. ನಿನ್ನ ಊರುಗೋಲನ್ನು ಹಿಡಿದುಕೊಂಡು ಹೋಗು. ನೀನು ನೈಲ್ ನದಿಯನ್ನು ಹೊಡೆಯಲು ಉಪಯೋಗಿಸಿದ ಕೋಲು ಇದಾಗಿದೆ.


ಹೋರೇಬಿನಲ್ಲಿ ನಾನು ನಿನ್ನ ಮುಂದೆ ಒಂದು ಬಂಡೆಯ ಮೇಲೆ ನಿಲ್ಲುವೆನು. ಊರುಗೋಲಿನಿಂದ ಆ ಬಂಡೆಯನ್ನು ಹೊಡೆ; ಆಗ ನೀರು ಅದರೊಳಗಿಂದ ಬರುವುದು. ಆಗ ಜನರು ಕುಡಿಯಬಹುದು” ಎಂದು ಹೇಳಿದನು. ಅಂತೆಯೇ ಮೋಶೆ ಮಾಡಿದನು. ಇಸ್ರೇಲರ ಹಿರಿಯರು ಇದನ್ನು ನೋಡಿದರು.


ಆಗ ಯೆಹೋವನು ಯೆಹೋಶುವನಿಗೆ, “ನಿನ್ನ ಕೈಯಲ್ಲಿರುವ ಈಟಿಯನ್ನು ‘ಆಯಿ’ ಕಡೆಗೆ ಚಾಚು, ಆ ಪಟ್ಟಣವನ್ನು ನಾನು ನಿಮಗೆ ಕೊಟ್ಟಿದ್ದೇನೆ” ಎಂದನು. ಯೆಹೋಶುವನು ತನ್ನ ಈಟಿಯನ್ನು “ಆಯಿ”ಯ ಕಡೆಗೆ ಚಾಚಿದನು.


ಎಲೀಷನು ಗೇಹಜಿಗೆ, “ಹೊರಡಲು ಸಿದ್ಧನಾಗು. ನನ್ನ ಕೋಲನ್ನು ತೆಗೆದುಕೊಂಡು ಹೋಗು. ಯಾರ ಹತ್ತಿರವಾಗಲಿ ಮಾತನಾಡಲು ನಿಲ್ಲದಿರು! ನೀನು ಯಾರನ್ನಾದರೂ ಸಂಧಿಸಿದರೆ ಅವನಿಗೆ, ‘ಕ್ಷೇಮವಾಗಿರುವೆಯಾ?’ ಎಂದು ಕೇಳದಿರು. ಯಾರಾದರೂ ನಿನ್ನನ್ನು ‘ಕ್ಷೇಮವಾಗಿರುವೆಯಾ?’ ಎಂದು ಕೇಳಿದರೆ, ಅವನಿಗೆ ಉತ್ತರಿಸದಿರು. ಹೀಗೆ ನೀನು ಹೋಗಿ, ನನ್ನ ಕೋಲನ್ನು ಮಗುವಿನ ಮುಖದ ಮೇಲೆ ಇಡು” ಎಂದು ಹೇಳಿದನು.


ಯೆಹೋವನೇ, ನೀನು ನದಿಗಳ ಮೇಲೆ ಕೋಪಗೊಂಡಿದ್ದೀಯೋ? ತೊರೆಗಳ ಮೇಲೆ ನೀನು ಕೋಪಗೊಂಡಿದ್ದೀಯೋ? ಸಮುದ್ರದ ಮೇಲೆ ನೀನು ಕೋಪಗೊಂಡಿದ್ದೀಯೋ? ನೀನು ನಿನ್ನ ಕುದುರೆಗಳ ಮೇಲೆ ಮತ್ತು ರಥಗಳ ಮೇಲೆ ಸವಾರಿ ಮಾಡಿದಾಗ ಕೋಪಗೊಂಡಿದ್ದೀಯೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು