ವಿಮೋಚನಕಾಂಡ 14:18 - ಪರಿಶುದ್ದ ಬೈಬಲ್18 ಆಗ ನಾನೇ ಯೆಹೋವನೆಂದು ಈಜಿಪ್ಟಿಗೆ ತಿಳಿಯುವುದು. ನಾನು ಫರೋಹನನ್ನೂ ಅವನ ರಾಹುತರನ್ನೂ ರಥಗಳನ್ನೂ ಸೋಲಿಸಿದಾಗ ಅವರು ನನ್ನನ್ನು ಸನ್ಮಾನಿಸುವರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನಾನು ಫರೋಹನನಲ್ಲಿಯೂ ಅವನ ರಥಗಳಲ್ಲಿಯೂ, ಕುದುರೆಗಳಲ್ಲಿಯೂ ಪ್ರಖ್ಯಾತಿ ಹೊಂದಿದ ನಂತರ ನಾನೇ ಯೆಹೋವನು ಎಂಬುದನ್ನು ಐಗುಪ್ತ್ಯರು ತಿಳಿದುಕೊಳ್ಳುವರು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ರಾಹುತರನ್ನು ಸೋಲಿಸಿ ಪ್ರಖ್ಯಾತಿ ಹೊಂದಿದ ನಂತರ ನಾನೇ ಸರ್ವೇಶ್ವರ ಎಂಬುದನ್ನು ಈಜಿಪ್ಟಿನವರು ತಿಳಿದುಕೊಳ್ಳುವರು,” ಎಂದರು ಮೋಶೆಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನಾನು ಫರೋಹನಲ್ಲಿಯೂ ಅವನ ರಥಗಳಲ್ಲಿಯೂ ಕುದುರೆಗಳಲ್ಲಿಯೂ ಪ್ರಖ್ಯಾತಿಹೊಂದಿದ ನಂತರ ನಾನು ಯೆಹೋವನು ಎಂಬದನ್ನು ಐಗುಪ್ತ್ಯರು ತಿಳುಕೊಳ್ಳುವರು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನಾನು ಫರೋಹನ ಮೇಲೆಯೂ ಅವನ ರಥಗಳ ಮೇಲೆಯೂ ಅವನ ಕುದುರೆ ಸವಾರರ ಮೇಲೆಯೂ ನನ್ನನ್ನು ಘನಪಡಿಸಿಕೊಂಡಾಗ, ನಾನೇ ಯೆಹೋವ ದೇವರೆಂದು ಈಜಿಪ್ಟಿನವರು ತಿಳಿದುಕೊಳ್ಳುವರು,” ಎಂದರು. ಅಧ್ಯಾಯವನ್ನು ನೋಡಿ |
ನಾನು ಈಜಿಪ್ಟಿನಲ್ಲಿ ಮಾಡಿದ ಸೂಚಕಕಾರ್ಯಗಳನ್ನೂ ಇತರ ಅದ್ಭುತಕಾರ್ಯಗಳನ್ನೂ ನೀವು ನಿಮ್ಮ ಮಕ್ಕಳಿಗೆ ಮತ್ತು ಮೊಮ್ಮಕ್ಕಳಿಗೆ ವಿವರಿಸಿ, ‘ಯೆಹೋವನು ಈಜಿಪ್ಟಿನವರನ್ನು ತನಗೆ ಇಷ್ಟ ಬಂದಂತೆ ಶಿಕ್ಷಿಸಿದನು’ ಎಂಬುದಾಗಿ ತಿಳಿಸಬೇಕೆಂದು ನಾನು ಫರೋಹನ ಮತ್ತು ಅವನ ಅಧಿಕಾರಿಗಳ ಹೃದಯಗಳನ್ನು ಕಠಿಣಪಡಿಸಿದ್ದೇನೆ. ಇದಲ್ಲದೆ ಈ ಮಹತ್ಕಾರ್ಯಗಳ ಮೂಲಕ ನಾನೇ ಯೆಹೋವನೆಂದು ತಿಳಿದುಕೊಳ್ಳುವಿರಿ” ಎಂದು ಹೇಳಿದನು.
ನನ್ನ ಜನರಾದ ಇಸ್ರೇಲಿನವರೊಂದಿಗೆ ಯುದ್ಧಕ್ಕೆ ಬರುವಿರಿ. ನೀವು ಕರೀ ಮೋಡದಂತೆ ದೇಶವನ್ನು ಕವಿಯುವಿರಿ. ಆ ಸಮಯ ಬಂದಾಗ ನನ್ನ ದೇಶಕ್ಕೆ ವಿರುದ್ಧವಾಗಿ ಯುದ್ಧ ಮಾಡಲು ನಿಮ್ಮನ್ನು ತರಿಸುವೆನು. ಆಗ ಗೋಗ್ ಮತ್ತು ಅವನೊಂದಿಗಿರುವ ರಾಜ್ಯಗಳು ನಾನು ಎಷ್ಟು ಸಾಮರ್ಥ್ಯಶಾಲಿ ಎಂದು ತಿಳಿದುಕೊಳ್ಳುವರು. ಅವರು ನನ್ನನ್ನು ಗೌರವಿಸಲು ಕಲಿಯುವರು. ನಾನು ಪವಿತ್ರನು ಎಂದು ತಿಳಿಯುವರು. ನಾನು ನಿನಗೇನು ಮಾಡಬೇಕಿದ್ದೇನೆಂದು ಅವರು ಕಾದು ನೋಡುವರು.’”