ವಿಮೋಚನಕಾಂಡ 14:20 - ಪರಿಶುದ್ದ ಬೈಬಲ್20 ಹೀಗೆ ಮೋಡವು ಈಜಿಪ್ಟಿನವರಿಗೂ ಇಸ್ರೇಲರಿಗೂ ನಡುವೆ ನಿಂತಿತು. ಅಲ್ಲಿ ಇಸ್ರೇಲರಿಗೆ ಬೆಳಕಿತ್ತು. ಆದರೆ ಈಜಿಪ್ಟಿನವರಿಗೆ ಕತ್ತಲಿತ್ತು. ಆದ್ದರಿಂದ ಈಜಿಪ್ಟಿನವರು ಆ ರಾತ್ರಿ ಇಸ್ರೇಲರ ಸಮೀಪಕ್ಕೆ ಬರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆ ಮೇಘಸ್ತಂಭವು ಐಗುಪ್ತ್ಯರ ಪಾಳೆಯಕ್ಕೂ, ಇಸ್ರಾಯೇಲರ ಪಾಳೆಯಕ್ಕೂ ನಡುವೆ ಬಂದಿತು. ಅದು ಐಗುಪ್ತ್ಯರಿಗೆ ಕತ್ತಲನ್ನೂ, ಇಸ್ರಾಯೇಲರಿಗೆ ರಾತ್ರಿಯಲ್ಲಿ ಬೆಳಕನ್ನು ಕೊಟ್ಟಿದ್ದರಿಂದ ಆ ರಾತ್ರಿಯೆಲ್ಲಾ ಒಬ್ಬರ ಹತ್ತಿರಕ್ಕೆ ಒಬ್ಬರು ಬರಲಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆ ಮೇಘಸ್ತಂಭವು ಈಜಿಪ್ಟಿನವರ ಪಡೆಗೂ ಇಸ್ರಯೇಲರ ಪಡೆಗೂ ನಡುವೆ ಬಂದು ಈಜಿಪ್ಟಿನವರಿಗೆ ಕತ್ತಲೆಯನ್ನುಂಟುಮಾಡಿತು; ಇಸ್ರಯೇಲರಿಗೆ ರಾತ್ರಿಯನ್ನು ಬೆಳಕಾಗಿಸಿತು. ಈ ಕಾರಣ ಆ ರಾತ್ರಿಯೆಲ್ಲಾ ಒಂದು ಪಡೆಯವರು ಇನ್ನೊಂದು ಪಡೆಯವರ ಬಳಿಗೆ ಬರಲಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆ ಮೇಘಸ್ತಂಭವು ಐಗುಪ್ತ್ಯರ ಪಾಳೆಯಕ್ಕೂ ಇಸ್ರಾಯೇಲ್ಯರ ಪಾಳೆಯಕ್ಕೂ ನಡುವೆ ಬಂದು [ಐಗುಪ್ತ್ಯರಿಗೆ] ಕತ್ತಲನ್ನು ಉಂಟುಮಾಡಿದರೂ [ಇಸ್ರಾಯೇಲ್ಯರಿಗೋಸ್ಕರ] ರಾತ್ರಿಯನ್ನು ಬೆಳಕುಮಾಡಿತು; ಆ ರಾತ್ರಿಯೆಲ್ಲಾ ಒಬ್ಬರ ಹತ್ತಿರಕ್ಕೆ ಒಬ್ಬರು ಬರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅದು ಈಜಿಪ್ಟಿನ ದಂಡಿಗೂ ಇಸ್ರಾಯೇಲರ ದಂಡಿಗೂ ನಡುವೆ ಬಂದಿತು. ಮೇಘಸ್ತಂಭವು ಈಜಿಪ್ಟಿನವರಿಗೆ ಕತ್ತಲನ್ನೂ ಇಸ್ರಾಯೇಲರಿಗೆ ಬೆಳಕನ್ನೂ ನೀಡಿತು. ಆ ರಾತ್ರಿಯೆಲ್ಲಾ ಒಬ್ಬರ ಹತ್ತಿರ ಒಬ್ಬರು ಬರಲಾಗಲಿಲ್ಲ. ಅಧ್ಯಾಯವನ್ನು ನೋಡಿ |