ವಿಮೋಚನಕಾಂಡ 14:21 - ಪರಿಶುದ್ದ ಬೈಬಲ್21 ಮೋಶೆಯು ತನ್ನ ಕೈಯನ್ನು ಕೆಂಪುಸಮುದ್ರದ ಮೇಲೆ ಚಾಚಿದನು; ಆಗ ಯೆಹೋವನು ಪೂರ್ವದಿಂದ ಬಲವಾದ ಗಾಳಿಯನ್ನು ಬೀಸುವಂತೆ ಮಾಡಿದನು. ಗಾಳಿಯು ರಾತ್ರಿಯೆಲ್ಲಾ ಬೀಸಿತು. ಸಮುದ್ರವು ಇಬ್ಭಾಗವಾಗಿ ಮಧ್ಯದಲ್ಲಿ ಒಣನೆಲವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಮೋಶೆ ಸಮುದ್ರದ ಮೇಲೆ ಕೈಚಾಚಿದಾಗ, ಯೆಹೋವನು ಆ ರಾತ್ರಿಯೆಲ್ಲಾ ಮೂಡಣ ದಿಕ್ಕಿನಿಂದ ಬಲವಾದ ಬಿರುಗಾಳಿಯನ್ನು ಬೀಸುವಂತೆ ಮಾಡಿ ಸಮುದ್ರದ ನೀರನ್ನು ಒಂದು ಕಡೆಗೆ ನೂಕಿ ಅದರ ತಳದಲ್ಲಿ ಒಣನೆಲವು ಕಾಣಿಸುವಂತೆ ಮಾಡಿದನು. ನೀರು ಇಬ್ಭಾಗವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಮೋಶೆ ಸಮುದ್ರದ ಮೇಲೆ ಕೈ ಚಾಚಿದಾಗ ಸರ್ವೇಶ್ವರ ಸ್ವಾಮಿ ಆ ರಾತ್ರಿಯೆಲ್ಲಾ ಪೂರ್ವದಿಕ್ಕಿನಿಂದ ಬಲವಾದ ಬಿರುಗಾಳಿ ಬೀಸುವಂತೆ ಮಾಡಿ ಸಮುದ್ರದ ನೀರನ್ನು ಒಂದುಕಡೆ ನೂಕಿ ಅದರ ತಳದಲ್ಲಿ ಒಣನೆಲವು ಕಾಣಿಸುವಂತೆ ಮಾಡಿದರು. ನೀರು ಇಬ್ಭಾಗವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಮೋಶೆ ಸಮುದ್ರದ ಮೇಲೆ ಕೈಚಾಚಿದಾಗ ಯೆಹೋವನು ಆ ರಾತ್ರಿಯೆಲ್ಲಾ ಮೂಡಣ ದಿಕ್ಕಿನಿಂದ ಬಲವಾದ ಬಿರುಗಾಳಿಯನ್ನು ಬೀಸುವಂತೆ ಮಾಡಿ ಸಮುದ್ರದ ನೀರನ್ನು ಒಂದು ಕಡೆಗೆ ನೂಕಿ ಅದರ ತಳದಲ್ಲಿ ಒಣನೆಲವು ಕಾಣಿಸುವಂತೆ ಮಾಡಿದನು. ನೀರು ವಿಭಾಗವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆಗ ಮೋಶೆಯು ಸಮುದ್ರದ ಮೇಲೆ ತನ್ನ ಬಲಗೈಯನ್ನು ಚಾಚಲಾಗಿ, ಯೆಹೋವ ದೇವರು ರಾತ್ರಿಯೆಲ್ಲಾ ಬಲವಾದ ಪೂರ್ವದಿಕ್ಕಿನ ಗಾಳಿಯಿಂದ ಸಮುದ್ರವನ್ನು ಹಿಂದಕ್ಕೆ ಹೋಗುವಂತೆ ಸಮುದ್ರವನ್ನು ಸರಿಸಿ, ಒಣ ನೆಲ ಕಾಣಿಸುವಂತೆ ಮಾಡಿದರು. ಆಗ ನೀರು ವಿಭಾಗವಾಯಿತು. ಅಧ್ಯಾಯವನ್ನು ನೋಡಿ |