Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 14:22 - ಪರಿಶುದ್ದ ಬೈಬಲ್‌

22 ಇಸ್ರೇಲರು ಒಣನೆಲದ ಮೇಲೆ ಸಮುದ್ರವನ್ನು ದಾಟಿದರು. ನೀರು ಅವರ ಎಡಬಲಗಳಲ್ಲಿ ಗೋಡೆಯಂತೆ ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣನೆಲದಲ್ಲಿ ನಡೆದುಹೋದರು. ನೀರು ಅವರ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಂತೆ ನಿಂತುಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಇಸ್ರಯೇಲರು ಸಮುದ್ರದ ಮಧ್ಯದಲ್ಲಿ ಒಣನೆಲದಲ್ಲೇ ನಡೆದುಹೋದರು. ನೀರು ಅವರ ಎಡಗಡೆ ಬಲಗಡೆಗಳಲ್ಲಿ ಗೋಡೆಯಂತೆ ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಇಸ್ರಾಯೇಲ್ಯರು ಸಮುದ್ರದ ಮಧ್ಯದಲ್ಲಿ ಒಣನೆಲದಲ್ಲೇ ನಡೆದುಹೋದರು. ನೀರು ಅವರ ಎಡಗಡೆ ಬಲಗಡೆಗಳಲ್ಲಿ ಗೋಡೆಯಂತೆ ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಹೀಗೆ ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ನಡೆದುಹೋದರು. ನೀರು ಅವರಿಗೆ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಾಗಿ ನಿಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 14:22
27 ತಿಳಿವುಗಳ ಹೋಲಿಕೆ  

ಮೋಶೆಯಿಂದ ಮುನ್ನಡೆಸಲ್ಪಟ್ಟ ಜನರು ಕೆಂಪುಸಮುದ್ರವನ್ನು ಒಣಭೂಮಿಯೋ ಎಂಬಂತೆ ದಾಟಿದ್ದು ನಂಬಿಕೆಯಿಂದಲೇ. ಆದರೆ ಈಜಿಪ್ಟ್ ದೇಶದವರು ಕೆಂಪುಸಮುದ್ರವನ್ನು ದಾಟಲು ಪ್ರಯತ್ನಿಸಿ, ಮುಳುಗಿಹೋದರು.


ಆತನು ಸಮುದ್ರವನ್ನು ಒಣನೆಲವನ್ನಾಗಿ ಮಾಡಿದನು. ಆತನ ಜನರು ಕಾಲುನಡಿಗೆಯಿಂದ ನದಿಯನ್ನು ದಾಟಿದರು. ಅದಕ್ಕಾಗಿ ನಾವು ಆತನಲ್ಲಿ ಉಲ್ಲಾಸಪಡೋಣ.


ದೇವರು ಕೆಂಪು ಸಮುದ್ರವನ್ನು ಇಬ್ಭಾಗಮಾಡಿ ಅವರನ್ನು ದಾಟಿಸಿದನು. ಅವರ ಎರಡು ಕಡೆಗಳಲ್ಲಿ ನೀರು ಬಲವಾದ ಗೋಡೆಯಂತೆ ನಿಂತುಕೊಂಡಿತು.


ಫರೋಹನ ಕುದುರೆಗಳು, ಸವಾರರು, ರಥಗಳು ಸಮುದ್ರದೊಳಕ್ಕೆ ಹೋದಾಗ ಸಮುದ್ರದ ನೀರು ಅವರನ್ನು ಆವರಿಸಿಕೊಳ್ಳುವಂತೆ ಯೆಹೋವನು ಮಾಡಿದನು. ಆದರೆ ಇಸ್ರೇಲರು ಸಮುದ್ರದೊಳಗಿನ ಒಣನೆಲದ ಮೇಲೆ ನಡೆದು ಸಮುದ್ರವನ್ನು ದಾಟಿದರು.


ಆದರೆ ಇಸ್ರೇಲರು ಒಣನೆಲದಲ್ಲಿ ಸಮುದ್ರವನ್ನು ದಾಟಿದರು. ನೀರು ಅವರ ಎಡಬಲಗಳಲ್ಲಿ ಗೋಡೆಯಂತೆ ನಿಂತಿತು.


ಸಹೋದರ ಸಹೋದರಿಯರೇ, ಮೋಶೆಯನ್ನು ಅನುಸರಿಸಿದ ನಮ್ಮ ಪಿತೃಗಳಿಗೆ ಏನು ಸಂಭವಿಸಿತೆಂಬುದನ್ನು ನೀವು ತಿಳಿದುಕೊಳ್ಳಬೇಕೆಂದು ನಾನು ಅಪೇಕ್ಷಿಸುತ್ತೇನೆ. ಅವರೆಲ್ಲರೂ ಮೋಡದ ಕೆಳಗಿದ್ದರು; ಸಮುದ್ರದ ಮೂಲಕ ನಡೆದುಕೊಂಡು ಹೋದರು;


ಆಳವಾದ ಸಮುದ್ರದೊಳಗಿಂದ ಯೆಹೋವನು ತನ್ನ ಜನರನ್ನು ನಡೆಸಿದನು. ಕುದುರೆಯು ಮರುಭೂಮಿಯಲ್ಲಿ ನಡೆಯುವಂತೆ ಜನರು ಎಡವಿಬೀಳದೆ ನಡೆದರು.


ಕೆಂಪುಸಮುದ್ರವನ್ನು ಅವರ ಕಣ್ಣು ಮುಂದೆಯೇ ಇಬ್ಬಾಗ ಮಾಡಿದೆ. ಅವರು ಆ ಒಣನೆಲದಲ್ಲಿ ನಡೆದರು. ಈಜಿಪ್ಟಿನ ವೈರಿಗಳು ಅವರನ್ನು ಹಿಂಬಾಲಿಸುತ್ತಿದ್ದರು. ಆದರೆ ಆ ವೈರಿಗಳನ್ನು ನೀನು ಸಮುದ್ರದೊಳಗೆ ಬಿಸಾಡಿದೆ; ಅವರು ಗುಂಡುಕಲ್ಲಿನಂತೆ ಸಮುದ್ರದಲ್ಲಿ ಮುಳುಗಿದರು.


ನೀನು ಊದಿದ ಮಹಾಗಾಳಿಯಿಂದ ನೀರು ಒತ್ತಟ್ಟಿಗೆ ಸೇರಿತು. ವೇಗವಾಗಿ ಹರಿಯುವ ನೀರು ಗಟ್ಟಿಯಾದ ಗೋಡೆಯಾಯಿತು. ಸಾಗರಗರ್ಭದೊಳಗಿನ ಜಲವು ಗಟ್ಟಿಯಾಯಿತು.


ಜನರು ಪೀಹಹೀರೋತನ್ನು ಬಿಟ್ಟು ಸಮುದ್ರದ ಮಧ್ಯದಲ್ಲೇ ನಡೆದು ಮರುಭೂಮಿಗೆ ಬಂದರು. ಅವರು ಏತಾಮ್ ಮರುಭೂಮಿಯಲ್ಲಿ ಮೂರು ದಿನಗಳವರೆಗೆ ಪ್ರಯಾಣಮಾಡಿ ಅಲ್ಲಿ ಪಾಳೆಯ ಮಾಡಿಕೊಂಡರು.


ಯೆಹೋವನು ಹೇಳುವುದೇನೆಂದರೆ, ‘ನಾನು ಆಕೆಯ ಸುತ್ತಲೂ ಆಕೆಯನ್ನು ಸಂರಕ್ಷಿಸುವ ಬೆಂಕಿಯ ಗೋಡೆಯಂತಿರುವೆನು. ಮತ್ತು ನಾನು ಅಲ್ಲಿಯೇ ವಾಸಿಸುವದರಿಂದ ಆ ನಗರಕ್ಕೆ ಮಹಿಮೆಯನ್ನು ತರುವೆನು.’”


ಆ ಸ್ಥಳದಲ್ಲಿ ನೆಲವು ಒಣಗಿತ್ತು; ಯಾಜಕರು ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ನದಿಯ ಮಧ್ಯದವರೆಗೆ ತೆಗೆದುಕೊಂಡು ಹೋಗಿ ಅಲ್ಲಿ ನಿಂತುಕೊಂಡರು. ಯಾಜಕರು ಅಲ್ಲಿಯೇ ನಿಂತುಕೊಂಡಿರಲಾಗಿ ಎಲ್ಲಾ ಇಸ್ರೇಲರು ಒಣನೆಲದ ಮೇಲೆ ನಡೆದುಕೊಂಡು ಹೋಗಿ ಜೋರ್ಡನ್ ನದಿಯನ್ನು ದಾಟಿದರು.


‘ಇಸ್ರೇಲಿನ ಜನರು ಜೋರ್ಡನ್ ನದಿಯನ್ನು ಒಣನೆಲದ ಮೇಲೆ ಹೇಗೆ ದಾಟಿದರು ಎಂಬುದನ್ನು ನಮ್ಮ ನೆನಪಿಗೆ ತರಲು ಈ ಕಲ್ಲುಗಳು ಸಹಾಯಕವಾಗಿವೆ.’


ನಾವು ಕುರಿಗಳನ್ನು ಕಾಯುತ್ತಿದ್ದಾಗ ದಾವೀದನ ಜನರು ನಮ್ಮನ್ನು ಹಗಲುರಾತ್ರಿ ರಕ್ಷಿಸಿದರು! ಅವರು ನಮ್ಮ ಸುತ್ತಲೂ ಗೋಡೆಯಂತಿದ್ದರು.


ಎಲೀಯನು ತನ್ನ ಮೇಲಂಗಿಯನ್ನು ತೆಗೆದು ಅದರಿಂದ ನೀರನ್ನು ಹೊಡೆದನು. ಆಗ ನೀರು ಎರಡು ಭಾಗವಾಗಿ ಬಲಗಡೆಯಲ್ಲಿಯೂ ಎಡಗಡೆಯಲ್ಲಿಯೂ ನಿಂತುಕೊಂಡಿತು. ನಂತರ ಎಲೀಯ ಮತ್ತು ಎಲೀಷರು ಒಣನೆಲದ ಮೇಲೆ ನದಿಯನ್ನು ದಾಟಿದರು.


ತೊರೆಗಳೂ ನದಿಗಳೂ ಹರಿಯುವಂತೆ ಮಾಡುವಾತನು ನೀನೇ. ನದಿಗಳನ್ನು ಒಣಗಿಸುವಾತನೂ ನೀನೇ.


ಆತನು ಇಸ್ರೇಲರನ್ನು ಸಮುದ್ರದ ಮಧ್ಯದಲ್ಲಿ ನಡೆಸಿದನು. ಆತನ ಪ್ರೀತಿ ಶಾಶ್ವತವಾದದ್ದು.


ಯೆಹೋವನು ಸಮುದ್ರದ ಮೂಲಕ ಮಾರ್ಗವನ್ನು ನಿರ್ಮಿಸುವನು. ಅಲ್ಲೋಲಕಲ್ಲೋಲವಾಗಿರುವ ನೀರಿನ ಮೂಲಕ ತನ್ನ ಜನರಿಗೆ ಮಾರ್ಗವನ್ನು ಮಾಡುವನು. ಯೆಹೋವನು ಹೇಳುವುದೇನೆಂದರೆ,


ಯೆಹೋವನು ಮೋಶೆಯನ್ನು ತನ್ನ ಬಲವಾದ ಹಸ್ತದಿಂದ ನಡೆಸಿದನು. ತನ್ನ ಅದ್ಭುತ ಶಕ್ತಿಯಿಂದ ಮೋಶೆಯನ್ನು ನಡೆಸಿದನು. ತನ್ನ ಜನರು ಸಮುದ್ರದೊಳಗಿಂದ ನಡೆದುಹೋಗಲೆಂದು ಯೆಹೋವನು ಸಮುದ್ರವನ್ನು ಇಬ್ಭಾಗ ಮಾಡಿದನು. ಅಂಥಾ ಅದ್ಭುತಕಾರ್ಯಗಳ ನಿಮಿತ್ತ ತನ್ನ ಹೆಸರನ್ನು ಪ್ರಸಿದ್ಧಿಪಡಿಸಿದನು.


ಆಗ ನೀರು ಹರಿಯದೆ ನಿಂತುಬಿಟ್ಟಿತು. ಆ ಸ್ಥಳದ ಹಿಂಭಾಗದಲ್ಲಿ ಒಂದು ಸರೋವರದಂತೆ ನೀರು ತುಂಬಿಕೊಂಡಿತು. ನೀರು ಬಹುದೂರದಲ್ಲಿರುವ ಆದಾಮ್ ಊರು ಅಂದರೆ ಜಾರೆತಾನಿನ ಹತ್ತಿರ ಇರುವ ಒಂದು ಊರಿನವರೆಗೂ ರಾಶಿರಾಶಿಯಾಗಿ ನಿಂತುಕೊಂಡಿತು. ಜನರು ಜೆರಿಕೊವಿನ ಹತ್ತಿರ ನದಿಯನ್ನು ದಾಟಿದರು.


ಎಲೀಷನು ನೀರನ್ನು ಹೊಡೆದಾಗ, ನೀರು ಎರಡು ಭಾಗವಾಗಿ ಬಲಗಡೆಯಲ್ಲೂ ಎಡಗಡೆಯಲ್ಲೂ ನಿಂತುಕೊಂಡಿತು! ಎಲೀಷನು ನದಿಯನ್ನು ದಾಟಿದನು.


ಆತನು ಆಜ್ಞಾಪಿಸಲು ಕೆಂಪು ಸಮುದ್ರವು ಒಣಗಿಹೋಯಿತು. ಆತನು ಆಳವಾದ ಸಮುದ್ರವನ್ನು ಇಬ್ಭಾಗ ಮಾಡಿ ಮರಳುಗಾಡಿನಂತೆ ಒಣಗಿಹೋಗಿದ್ದ ಭೂಮಿಯ ಮೇಲೆ ನಮ್ಮ ಪೂರ್ವಿಕರನ್ನು ನಡೆಸಿದನು.


ಆತನು ಕೆಂಪು ಸಮುದ್ರವನ್ನು ಎರಡು ಭಾಗವನ್ನಾಗಿ ಮಾಡಿದನು. ಆತನ ಪ್ರೀತಿ ಶಾಶ್ವತವಾದದ್ದು.


ಯೆಹೋವನು ಸಿಟ್ಟುಗೊಂಡು ಈಜಿಪ್ಟಿನ ಸಮುದ್ರವನ್ನು ವಿಂಗಡಿಸಿದನು. ಅದೇ ರೀತಿಯಲ್ಲಿ ಯೂಫ್ರೇಟೀಸ್ ನದಿಯ ಮೇಲೆ ತನ್ನ ಕೈಯನ್ನು ಚಾಚುವನು. ಆತನು ನದಿಯ ನೀರಿಗೆ ಹೊಡೆಯುವನು. ಆಗ ಅದು ಏಳು ಚಿಕ್ಕ ನದಿಗಳಾಗಿ ಹರಿಯುವುದು. ಆ ನದಿಗಳು ಆಳವಾಗಿರುವದಿಲ್ಲ. ಜನರು ತಮ್ಮ ಕೆರಗಳೊಂದಿಗೆ ದಾಟಬಹುದು.


ಅಳಿದುಳಿದ ದೇವಜನರು ಅಶ್ಶೂರ ದೇಶವನ್ನು ಬಿಡಲು ಒಂದು ಮಾರ್ಗವಿರುವದು. ಅದು ದೇವರು ತನ್ನ ಜನರನ್ನು ಈಜಿಪ್ಟಿನಿಂದ ಬಿಡಿಸಿದ ಕಾಲದಂತಿರುವುದು.


ನೀನು ಸಮುದ್ರವನ್ನು ಬತ್ತಿಸಿರುವೆ. ಮಹಾ ಆಳದ ಗುಂಡಿಗಳ ನೀರನ್ನು ನೀನು ಬತ್ತಿಸಿರುವೆ. ಅತ್ಯಂತ ಆಳವಾದ ಸಮುದ್ರದ ತಳವನ್ನು ನೀನು ರಸ್ತೆಯನ್ನಾಗಿ ಮಾಡಿರುವೆ. ನಿನ್ನ ಜನರು ಆ ರಸ್ತೆಯಲ್ಲಿ ಸಮುದ್ರವನ್ನು ದಾಟಿ ರಕ್ಷಿಸಲ್ಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು