ವಿಮೋಚನಕಾಂಡ 14:24 - ಪರಿಶುದ್ದ ಬೈಬಲ್24 ಬೆಳಗಿನ ಜಾವ ಇನ್ನೂ ಮೊಬ್ಬಿರುವಾಗ, ಯೆಹೋವನು ಎತ್ತರವಾದ ಮೇಘಸ್ತಂಭದಿಂದ ಮತ್ತು ಅಗ್ನಿಸ್ತಂಭದಿಂದ ಈಜಿಪ್ಟಿನ ಸೈನ್ಯವನ್ನು ದೃಷ್ಟಿಸಿದನು. ಆಗ ಯೆಹೋವನು ಅವರ ಮೇಲೆ ಧಾಳಿಮಾಡಿ ಅವರ ಪಾಳೆಯದಲ್ಲಿ ಗಲಿಬಿಲಿಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಬೆಳಗಿನ ಜಾವದಲ್ಲಿ ಯೆಹೋವನು ಆ ಅಗ್ನಿ ಸ್ತಂಭ ಮತ್ತು ಮೇಘ ಸ್ತಂಭದೊಳಗಿನಿಂದ ಐಗುಪ್ತ್ಯರ ದಂಡಿನ ಕಡೆಗೆ ನೋಡಿ ಅವರಲ್ಲಿ ಗಲಿಬಿಲಿಯನ್ನು ಉಂಟುಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಬೆಳಗಿನ ಜಾವದಲ್ಲಿ ಸರ್ವೇಶ್ವರ ಆ ಅಗ್ನಿಸ್ತಂಭದಿಂದ ಈಜಿಪ್ಟಿನವರ ದಂಡಿನ ಕಡೆಗೆ ನೋಡಿ ಅದನ್ನು ಗಲಿಬಿಲಿ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಬೆಳಗಿನ ಜಾವದಲ್ಲಿ ಯೆಹೋವನು ಆ ಅಗ್ನಿಮೇಘಸ್ತಂಭದೊಳಗಿಂದ ಐಗುಪ್ತ್ಯರ ದಂಡಿನ ಕಡೆಗೆ ನೋಡಿ ಅದನ್ನು ಗಲಿಬಿಲಿ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಬೆಳಗಿನ ಜಾವದಲ್ಲಿ ಯೆಹೋವ ದೇವರು ಅಗ್ನಿ ಮೇಘಗಳ ಸ್ತಂಭದೊಳಗಿಂದ ಈಜಿಪ್ಟಿನ ದಂಡಿನ ಮೇಲೆ ದೃಷ್ಟಿಯಿಟ್ಟು, ಈಜಿಪ್ಟಿನ ದಂಡನ್ನು ಗಾಬರಿಗೊಳಿಸಿದರು. ಅಧ್ಯಾಯವನ್ನು ನೋಡಿ |
ಮಾರನೆಯ ದಿನ ಬೆಳಿಗ್ಗೆ ಸೌಲನು ತನ್ನ ಸೈನ್ಯವನ್ನು ಮೂರು ಗುಂಪುಗಳಾಗಿ ವಿಂಗಡಿಸಿದನು. ಸೌಲನು ಮತ್ತು ಅವನ ಸೈನಿಕರು ಬೆಳಗಿನ ಜಾವದಲ್ಲೇ ಅಮ್ಮೋನಿಯರ ಶಿಬಿರದೊಳಕ್ಕೆ ನುಗ್ಗಿದರು. ಅವರು ಆ ದಿನ ಬೆಳಗಿನ ಜಾವ ಶಿಬಿರ ರಕ್ಷಕರನ್ನು ಬದಲಾಯಿಸುತ್ತಿದ್ದಂತೆಯೇ ಸೌಲನು ಆಕ್ರಮಣ ಮಾಡಿದನು. ಸೌಲನು ಮತ್ತು ಅವನ ಸೈನಿಕರು ನಡುಮಧ್ಯಾಹ್ನದೊಳಗೆ ಅಮ್ಮೋನಿಯರನ್ನು ಸೋಲಿಸಿದರು. ಅಮ್ಮೋನಿಯ ಸೈನಿಕರೆಲ್ಲರೂ ದಿಕ್ಕುಪಾಲಾಗಿ ಓಡಿಹೋದರು; ಅವರು ಒಟ್ಟಾಗಿ ಸೇರಿಬರಲು ಸಾಧ್ಯವಾಗಲಿಲ್ಲ.