Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 14:25 - ಪರಿಶುದ್ದ ಬೈಬಲ್‌

25 ರಥಗಳ ಚಕ್ರಗಳು ನೆಲಕ್ಕೆ ಅಂಟಿಕೊಂಡವು. ರಥಗಳನ್ನು ನಡಿಸುವುದು ಬಹುಕಷ್ಟವಾಗಿತ್ತು. ಈಜಿಪ್ಟಿನವರು “ನಾವು ಇಲ್ಲಿಂದ ಹೋಗೋಣ. ಯೆಹೋವನು ಈಜಿಪ್ಟಿನ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾನೆ. ಯೆಹೋವನು ಇಸ್ರೇಲರಿಗಾಗಿ ಯುದ್ಧ ಮಾಡುತ್ತಿದ್ದಾನೆ” ಎಂದು ಕೂಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಯೆಹೋವನು ಅವರ ರಥಗಳ ಚಕ್ರದ ಕೀಲುಗಳಲ್ಲಿ ವ್ಯತ್ಯಾಸ ಮಾಡಿಬಿಟ್ಟದ್ದರಿಂದ ಐಗುಪ್ತರು ಬಹು ಕಷ್ಟದಿಂದ ರಥಗಳನ್ನು ಸಾಗಿಸಿಕೊಂಡು ಹೋಗಬೇಕಾಯಿತು. ಆಗ ಐಗುಪ್ತ್ಯರು, “ನಾವು ಇಸ್ರಾಯೇಲರ ಮುಂದೆ ನಿಲ್ಲಲಾರೆವು, ಓಡಿ ಹೋಗೋಣ, ಯೆಹೋವನು ಅವರಿಗೋಸ್ಕರ ನಮಗೆ ವಿರೋಧವಾಗಿ ಯುದ್ಧಮಾಡುತ್ತಿದ್ದಾನೆ” ಎಂದು ಹೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಸರ್ವೇಶ್ವರ ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟದ್ದರಿಂದ ಈಜಿಪ್ಟಿನವರು ಬಹುಕಷ್ಟದಿಂದ ಅವುಗಳನ್ನು ಸಾಗಿಸಿಕೊಂಡು ಹೋದರು. ಆಗ ಈಜಿಪ್ಟಿನವರು, “ನಾವು ಇಸ್ರಯೇಲರ ಮುಂದೆ ಗೆಲ್ಲಲಾರೆವು. ಓಡಿಹೋಗೋಣ ಬನ್ನಿ; ಸರ್ವೇಶ್ವರನು ಅವರ ಪರವಾಗಿ, ನಮಗೆ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾನೆ,” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆತನು ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟದ್ದರಿಂದ ಐಗುಪ್ತ್ಯರು ಬಹು ಕಷ್ಟದಿಂದ ಹೊಡಕೊಂಡು ಹೋದರು. ಆಗ ಐಗುಪ್ತ್ಯರು - ನಾವು ಇಸ್ರಾಯೇಲ್ಯರ ಮುಂದೆ ನಿಲ್ಲಲಾರೆವು, ಓಡಿಹೋಗೋಣ; ಯೆಹೋವನು ಅವರಿಗೋಸ್ಕರ ನಮಗೆ ವಿರೋಧವಾಗಿ ಯುದ್ಧಮಾಡುತ್ತಾನೆ ಎಂದು ಹೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟು ಕಷ್ಟದಿಂದ ಅವರು ಹೋಗುವಂತೆ ಮಾಡಿದರು. ಆಗ ಈಜಿಪ್ಟಿನವರು, “ಇಸ್ರಾಯೇಲರ ಎದುರಿನಿಂದ ಓಡಿಹೋಗೋಣ. ಏಕೆಂದರೆ ಯೆಹೋವ ದೇವರು ಈಜಿಪ್ಟಿನವರಿಗೆ ವಿರೋಧವಾಗಿ ಯುದ್ಧಮಾಡುತ್ತಾರೆ,” ಎಂದು ಹೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 14:25
26 ತಿಳಿವುಗಳ ಹೋಲಿಕೆ  

ಯೆಹೋವನು ನಿಮಗೋಸ್ಕರ ಯುದ್ಧಮಾಡುವನು. ಆದ್ದರಿಂದ ನೀವು ಸುಮ್ಮನೆ ಇರಿ” ಎಂದು ಹೇಳಿದನು.


ಕುದುರೆಗಳನ್ನೂ ಅದರ ಸವಾರರನ್ನೂ ಜಜ್ಜಿಹಾಕಲು ನಾನು ನಿನ್ನನ್ನು ಬಳಸುತ್ತೇನೆ. ರಥಗಳನ್ನೂ ಸಾರಥಿಗಳನ್ನೂ ಪುಡಿಪುಡಿ ಮಾಡಲು ನಾನು ನಿನ್ನನ್ನು ಬಳಸುತ್ತೇನೆ.


ದುಷ್ಟನು ಕಬ್ಬಿಣದ ಖಡ್ಗದಿಂದ ಓಡಿಹೋಗುವನು; ಆದರೆ ತಾಮ್ರದ ಬಾಣವು ಅವನನ್ನು ಹೊಡೆದುರುಳಿಸುವುದು.


ಆ ಪ್ರಾಂತ್ಯದ ಅರಸುಗಳಿಗೆ ನೀನು ಹೆದರಬೇಡ. ನಿನ್ನ ದೇವರಾದ ಯೆಹೋವನು ನಿನಗಾಗಿ ಯುದ್ಧ ಮಾಡುವನು’ ಎಂದು ಹೇಳಿದೆನು.


ಯಜ್ಞವೇದಿಕೆಯ ಬಳಿಯಲ್ಲಿ ನನ್ನ ಒಡೆಯನು ನಿಂತಿರುವುದನ್ನು ಕಂಡೆನು. ಆತನು ಹೇಳಿದ್ದೇನೆಂದರೆ, “ಸ್ತಂಭಗಳ ಮೇಲೆ ಹೊಡೆಯಿರಿ, ಆಗ ಕಟ್ಟಡವು ಹೊಸ್ತಿಲಿನ ತನಕ ಕಂಪಿಸುವದು. ಸ್ತಂಭಗಳು ಜನರ ತಲೆಗಳ ಮೇಲೆ ಕುಸಿದುಬೀಳುವಂತೆ ಮಾಡಿರಿ. ಅದರಿಂದ ಸಾಯದೆ ಉಳಿಯುವವರನ್ನು ನಾನು ಖಡ್ಗದಿಂದ ಸಾಯಿಸುವೆನು. ಅದರಿಂದ ತಪ್ಪಿಸಿಕೊಂಡು ಓಡಿಹೋಗಲು ಒಬ್ಬನು ಪ್ರಯತ್ನಿಸಿದರೂ ಸಾಧ್ಯವಾಗುವುದಿಲ್ಲ. ಒಬ್ಬನಾದರೂ ತಪ್ಪಿಸಿಕೊಳ್ಳುವುದಿಲ್ಲ.


ಆಗ ನೀವು ಸಿಂಹದ ಬಾಯಿಂದ ತಪ್ಪಿಸಿಕೊಂಡು ಕರಡಿಯ ಬಾಯಿಗೆ ಬೀಳುವ ಮನುಷ್ಯನಂತಿರುವಿರಿ. ಆಗ ನೀವು ನಿಮ್ಮ ಮನೆಯ ಆಶ್ರಯಕ್ಕೆ ಓಡಿಹೋಗಿ ಗೋಡೆಗೆ ಒರಗಿ ನಿಂತಾಗ ಒಂದು ಹಾವಿನಿಂದ ಕಚ್ಚಿಸಿಕೊಂಡವರಂತೆ ಇರುವಿರಿ.


ಯಾಕೋಬನ ದೇವರು ಆ ಸೈನಿಕರನ್ನು ಗದರಿಸಲು ರಥಾಶ್ವಗಳ ಸೇನೆಯು ಮೂರ್ಛೆಗೊಂಡಿತು.


“ಬಲಿಷ್ಠ ರಾಜರುಗಳ ಸೈನ್ಯಗಳು ಓಡಿಹೋಗುತ್ತಿವೆ! ಸೈನಿಕರು ಯುದ್ಧದಿಂದ ತಂದ ಕೊಳ್ಳೆವಸ್ತುಗಳನ್ನು ಮನೆಯಲ್ಲಿದ್ದ ಸ್ತ್ರೀಯರು ಹಂಚಿಕೊಳ್ಳುವರು.


ಇಡೀ ಪ್ರಪಂಚದಲ್ಲಿ ಆತನು ಯುದ್ಧವನ್ನು ನಿಲ್ಲಿಸುವನು; ಬಿಲ್ಲುಗಳನ್ನೂ ಗುರಾಣಿಗಳನ್ನೂ ಮುರಿದುಹಾಕುವನು; ಗುರಾಣಿಗಳನ್ನು ಬೆಂಕಿಯಿಂದ ಸುಟ್ಟುಹಾಕುವನು.


ದುಷ್ಟನು ಬಿರುಗಾಳಿಯ ಶಕ್ತಿಯಿಂದ ಓಡಿಹೋಗಲು ಪ್ರಯತ್ನಿಸುವನು. ಆದರೆ ಬಿರುಗಾಳಿಯು ಕರುಣೆಯಿಲ್ಲದೆ ಅವನಿಗೆ ಬಡಿಯುವುದು.


ಆದರೆ ದುಷ್ಟರು ಸಹಾಯಕ್ಕಾಗಿ ಎದುರುನೋಡಿದರೂ ತಮ್ಮ ಆಪತ್ತುಗಳಿಂದ ಪಾರಾಗಲು ಅವರಿಗೆ ಸಾಧ್ಯವಿಲ್ಲ. ಅವರ ನಿರೀಕ್ಷೆಯೇ ಅವರನ್ನು ಮರಣಕ್ಕೆ ನಡೆಸುತ್ತದೆ.”


ಆದ್ದರಿಂದ ನಾನು ರಬ್ಬದ ಗೋಡೆಗಳಲ್ಲಿ ಬೆಂಕಿ ಹಾಕುವೆನು. ಆ ಬೆಂಕಿಯು ರಬ್ಬದ ಉನ್ನತ ಗೋಪುರಗಳನ್ನು ನಾಶಮಾಡುವದು; ಹಗಲಿನ ಯುದ್ಧದ ಕೂಗಾಟದಂತೆಯೂ ಸುಂಟರಗಾಳಿಯಂತೆಯೂ ಸಂಕಟವು ಅವರ ದೇಶಕ್ಕೆ ಬರುವದು.


ಬಾರಾಕ ಮತ್ತು ಅವನ ಜನರು ಸೀಸೆರನ ಮೇಲೆ ಧಾಳಿ ಮಾಡಿದರು. ಯೆಹೋವನು ಸೀಸೆರನಲ್ಲಿ ಮತ್ತು ಅವನ ಸೈನ್ಯದಲ್ಲಿ ಮತ್ತು ಅವನ ರಥಗಳಲ್ಲಿ ಗಲಿಬಿಲಿ ಉಂಟುಮಾಡಿದನು. ಏನು ಮಾಡಬೇಕೆಂದು ಅವರಿಗೆ ತಿಳಿಯಲಿಲ್ಲ. ಬಾರಾಕ ಮತ್ತು ಅವನ ಸೈನಿಕರು ಸೀಸೆರನ ಸೈನ್ಯವನ್ನು ಸೋಲಿಸಿದರು. ಆದರೆ ಸೀಸೆರನು ತನ್ನ ರಥವನ್ನು ಬಿಟ್ಟು ಓಡಿಹೋದನು.


ನಾನು ಫರೋಹನ ಹೃದಯವನ್ನು ಕಠಿಣಪಡಿಸುವುದರಿಂದ ಅವನು ನಿಮ್ಮನ್ನು ಬೆನ್ನಟ್ಟುವನು. ಆದರೆ ನಾನು ಫರೋಹನನ್ನು ಮತ್ತು ಅವನ ಸೈನ್ಯವನ್ನು ಸೋಲಿಸುವೆನು. ಇದು ನನಗೆ ಗೌರವವನ್ನು ತರುವುದು. ಆಗ ನಾನೇ ಯೆಹೋವನೆಂದು ಈಜಿಪ್ಟಿನ ಜನರು ತಿಳಿದುಕೊಳ್ಳುವರು” ಎಂದು ಹೇಳಿದನು. ಇಸ್ರೇಲರು ದೇವರಿಗೆ ವಿಧೇಯರಾಗಿ ಆತನು ಹೇಳಿದ್ದನ್ನು ಮಾಡಿದರು.


ಆಗ ನಾನೇ ಯೆಹೋವನೆಂದು ಈಜಿಪ್ಟಿಗೆ ತಿಳಿಯುವುದು. ನಾನು ಫರೋಹನನ್ನೂ ಅವನ ರಾಹುತರನ್ನೂ ರಥಗಳನ್ನೂ ಸೋಲಿಸಿದಾಗ ಅವರು ನನ್ನನ್ನು ಸನ್ಮಾನಿಸುವರು” ಎಂದು ಹೇಳಿದನು.


ನಮ್ಮ ವೈರಿಗಳ ಬಂಡೆಯು ನಮ್ಮ ಬಂಡೆಯಂತೆ ಬಲಶಾಲಿಯಲ್ಲ. ವೈರಿಗಳಿಗೂ ಇದು ಗೊತ್ತಿದೆ.


ನಮ್ಮ ವೈರಿಗಳೆಲ್ಲಾ ಕೆಲಸ ಸಂಪೂರ್ಣವಾದದ್ದನ್ನು ಕೇಳಿದರು. ನಮ್ಮ ಸುತ್ತಮುತ್ತಲಿನ ಪ್ರಾಂತ್ಯಗಳವರಿಗೂ ದೇಶಗಳವರಿಗೂ ಈ ಸುದ್ದಿಮುಟ್ಟಿತು. ಆಗ ಅವರ ಧೈರ್ಯವು ಕುಗ್ಗಿತು. ಯಾಕೆಂದರೆ ಈ ಮಹಾಕಾರ್ಯವನ್ನು ನಮ್ಮ ದೇವರ ಸಹಾಯದಿಂದಲೇ ನಾವು ಮಾಡಿದ್ದೇವೆಂದು ಅವರಿಗೆ ಅರ್ಥವಾಯಿತು.


ಯೆಹೋವನೇ ಯುದ್ಧವೀರನು. ಆತನ ನಾಮಧೇಯವು ಯೆಹೋವನೇ.


ನಿಮ್ಮ ದೇವರಾದ ಯೆಹೋವನು ನಿಮ್ಮ ಮುಂದೆ ಹೋಗಿ ಅವರೊಂದಿಗೆ ಯುದ್ಧಮಾಡುವನು. ಈಜಿಪ್ಟ್‌ನಲ್ಲಿ ಆತನು ಮಾಡಿದಂತೆಯೇ ಇಲ್ಲಿಯೂ ಮಾಡುವನು.


ಅದಕ್ಕಿಂತ ಮೊದಲೆಂದೂ ಹೀಗಾಗಿರಲಿಲ್ಲ; ಆಮೇಲೆಯೂ ಆಗಲಿಲ್ಲ. ಯೆಹೋವನು ಒಬ್ಬ ಮಾನವನ ಆಜ್ಞೆಯನ್ನು ಪಾಲಿಸಿದ ದಿನ ಅದಾಗಿತ್ತು. ಇಸ್ರೇಲರಿಗೋಸ್ಕರ ಯೆಹೋವನು ನಿಜವಾಗಿಯೂ ಯುದ್ಧಮಾಡುತ್ತಿದ್ದನು.


ಯೆಹೋವನು ಇಸ್ರೇಲರ ವೈರಿಗಳಿಗೆ ವಿರುದ್ಧವಾಗಿ ಯುದ್ಧ ಮಾಡಿದನೆಂದು ಕೇಳಿ ಎಲ್ಲಾ ದೇಶಗಳವರು ಆತನಿಗೆ ಭಯಪಟ್ಟರು.


ನಮಗೆದುರಾಗಿ ಬಂದಿದ್ದ ಪರಿಸ್ಥಿತಿಯನ್ನು ನಾನು ಚೆನ್ನಾಗಿ ಅವಲೋಕಿಸಿ ನಮ್ಮ ಜನರೊಂದಿಗೆ ಕುಟುಂಬ ಕುಟುಂಬವಾಗಿ, ಅಧಿಕಾರಿಗಳಿಗೆ ಮತ್ತು ಉಳಿದ ಜನರಿಗೆ ಹೀಗೆ ಹೇಳಿದೆನು: “ನಮ್ಮ ವೈರಿಗಳ ಬಗ್ಗೆ ನೀವು ಏನೂ ಹೆದರಬೇಡಿರಿ. ನಮ್ಮ ದೇವರನ್ನು ನೆನಪುಮಾಡಿರಿ. ಯೆಹೋವನು ಬಲಶಾಲಿಯೂ ಸರ್ವಶಕ್ತನೂ ಆಗಿದ್ದಾನೆ. ನೀವು ನಿಮ್ಮ ಸಹೋದರರಿಗಾಗಿ, ನಿಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ನಿಮ್ಮನಿಮ್ಮ ಹೆಂಡತಿಯರಿಗಾಗಿ ಮತ್ತು ಮನೆಗಳಿಗಾಗಿ ಹೋರಾಡಿರಿ.”


ಕೆಂಪುಸಮುದ್ರವನ್ನು ಅವರ ಕಣ್ಣು ಮುಂದೆಯೇ ಇಬ್ಬಾಗ ಮಾಡಿದೆ. ಅವರು ಆ ಒಣನೆಲದಲ್ಲಿ ನಡೆದರು. ಈಜಿಪ್ಟಿನ ವೈರಿಗಳು ಅವರನ್ನು ಹಿಂಬಾಲಿಸುತ್ತಿದ್ದರು. ಆದರೆ ಆ ವೈರಿಗಳನ್ನು ನೀನು ಸಮುದ್ರದೊಳಗೆ ಬಿಸಾಡಿದೆ; ಅವರು ಗುಂಡುಕಲ್ಲಿನಂತೆ ಸಮುದ್ರದಲ್ಲಿ ಮುಳುಗಿದರು.


ಯೆಹೋವನೇ, ನನ್ನ ವ್ಯಾಜ್ಯಗಳಲ್ಲಿ ವಾದಿಸು! ನನ್ನ ಯುದ್ಧಗಳಲ್ಲಿ ಹೋರಾಡು!


ಯೆಹೋವನು ನನಗೆ ಹೀಗೆ ಹೇಳಿದನು: “ಸಿಂಹವು ಅಥವಾ ಪ್ರಾಯದ ಸಿಂಹವು ಒಂದು ಪ್ರಾಣಿಯನ್ನು ಹಿಡಿದು ಕೊಂದಾಗ ಅದರ ಮೇಲೆ ನಿಂತು ಗರ್ಜಿಸುವದು. ಆ ಸಮಯದಲ್ಲಿ ಯಾವುದೂ ಆ ಸಿಂಹವನ್ನು ಹೆದರಿಸಲಾರದು. ಜನರು ಬಂದು ಗಟ್ಟಿಯಾಗಿ ಚೀರಿಕೊಂಡರೂ ಸಿಂಹಕ್ಕೆ ಹೆದರಿಕೆಯುಂಟಾಗದು; ದೊಡ್ಡ ಶಬ್ದ ಮಾಡಿದರೂ ಸಿಂಹವು ಓಡಿಹೋಗದು.” ಅದೇ ರೀತಿಯಲ್ಲಿ ಸರ್ವಶಕ್ತನಾದ ಯೆಹೋವನು ಚೀಯೋನ್ ಪರ್ವತಕ್ಕೆ ಬಂದು ಯುದ್ಧ ಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು