Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 14:26 - ಪರಿಶುದ್ದ ಬೈಬಲ್‌

26 ಆಗ ಯೆಹೋವನು ಮೋಶೆಗೆ, “ನಿನ್ನ ಕೈಯನ್ನು ಸಮುದ್ರದ ಮೇಲೆ ಚಾಚು; ನೀರು ಈಜಿಪ್ಟಿನವರ ರಥಗಳನ್ನು ಮತ್ತು ರಾಹುತರನ್ನು ಮುಚ್ಚಿಕೊಳ್ಳುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅಷ್ಟರಲ್ಲಿ ಯೆಹೋವನು ಮೋಶೆಗೆ, “ಸಮುದ್ರದ ಮೇಲೆ ನಿನ್ನ ಕೈಚಾಚು, ಆಗ ಅದರ ನೀರು ಮೊದಲಿನಂತೆ ಬಂದು ಐಗುಪ್ತ್ಯರನ್ನೂ, ಅವರ ರಥಗಳನ್ನೂ, ರಾಹುತರನ್ನೂ ಮುಳುಗಿಸುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅಷ್ಟರಲ್ಲಿ ಸರ್ವೇಶ್ವರ, “ಸಮುದ್ರದ ಮೇಲೆ ನಿನ್ನ ಕೈಚಾಚು; ಆಗ ಅದರ ನೀರು ಮೊದಲಿನಂತೆ ಬಂದು ಈಜಿಪ್ಟಿನವರನ್ನೂ ಅವರ ರಥಗಳನ್ನೂ, ರಾಹುತರನ್ನೂ ಮುಳುಗಿಸುವುದು,” ಎಂದು ಮೋಶೆಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅಷ್ಟರಲ್ಲಿ ಯೆಹೋವನು ಮೋಶೆಗೆ - ಸಮುದ್ರದ ಮೇಲೆ ನಿನ್ನ ಕೈ ಚಾಚು; ಆಗ ಅದರ ನೀರು ಮೊದಲಿನಂತೆ ಬಂದು ಐಗುಪ್ತ್ಯರನ್ನೂ ಅವರ ರಥಗಳನ್ನೂ ರಾಹುತರನ್ನೂ ಮುಣುಗಿಸುವದೆಂದು ಹೇಳಿದನು. ಮೋಶೆ ಸಮುದ್ರದ ಮೇಲೆ ಕೈಚಾಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆಗ ಯೆಹೋವ ದೇವರು ಮೋಶೆಗೆ, “ಈಜಿಪ್ಟಿನವರನ್ನೂ ಅವರ ರಥಗಳ ಕುದುರೆಯ ಸವಾರರನ್ನೂ ಸಮುದ್ರವು ಮುಳುಗಿಸುವಂತೆ ಸಮುದ್ರದ ಮೇಲೆ ಕೈಚಾಚು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 14:26
12 ತಿಳಿವುಗಳ ಹೋಲಿಕೆ  

ನಿನ್ನ ಕೈಯಲ್ಲಿರುವ ಊರುಗೋಲನ್ನು ಕೆಂಪುಸಮುದ್ರದ ಮೇಲೆ ಚಾಚು. ಆಗ ಸಮುದ್ರವು ಇಬ್ಭಾಗವಾಗುವುದು. ಜನರು ಒಣನೆಲದ ಮೇಲೆ ಸಮುದ್ರವನ್ನು ದಾಟಬಹುದು.


ಬಳಿಕ ಯೆಹೋವನು ಮೋಶೆಗೆ, “ನೀನು ಆರೋನನಿಗೆ, ‘ನಿನ್ನ ಕೋಲನ್ನು ಹಿಡಿದುಕೊಂಡು ಹೊಳೆಗಳ, ಕಾಲುವೆಗಳ ಮತ್ತು ಕೆರೆಗಳ ಮೇಲೆ ಕೈಚಾಚು’ ಎಂದು ಹೇಳು. ಆಗ ಈಜಿಪ್ಟ್ ದೇಶದ ಮೇಲೆ ಕಪ್ಪೆಗಳು ಹೊರಬರುವವು” ಎಂದು ಹೇಳಿದನು.


ಹೌದು, ಇತರರಿಗೆ ನೀವು ಕರುಣೆ ತೋರಬೇಕು. ಇಲ್ಲವಾದರೆ ದೇವರು ತೀರ್ಪು ನೀಡುವಾಗ ನಿಮಗೂ ಕರುಣೆ ತೋರನು. ಕರುಣೆ ತೋರುವವನು ದೇವರ ನ್ಯಾಯತೀರ್ಪಿನಲ್ಲಿ ಭಯವಿಲ್ಲದೆ ಇರುವನು.


ಜನರೆಲ್ಲರೂ ಆಶ್ಚರ್ಯಪಟ್ಟರು. “ಈತನು ಎಂತಹ ಮನುಷ್ಯ? ಬಿರುಗಾಳಿ ಮತ್ತು ನೀರು ಈತನಿಗೆ ವಿಧೇಯವಾಗುತ್ತವೆಯಲ್ಲಾ” ಎಂದು ಮಾತಾಡಿಕೊಂಡರು.


ನೀವು ಬೇರೆಯವರಿಗೆ ತೀರ್ಪು ಮಾಡಿದರೆ, ಅದೇ ಪ್ರಕಾರ ನಿಮಗೂ ತೀರ್ಪಾಗುವುದು. ನೀವು ಬೇರೆಯವರನ್ನು ಕ್ಷಮಿಸಿದರೆ ನಿಮಗೂ ಕ್ಷಮೆ ದೊರೆಯುವುದು.


ಯೆಹೋವನು ಮೋಶೆಗೆ, “ನೀನು ಆರೋನನಿಗೆ, ‘ನಿನ್ನ ಕೈಯಲ್ಲಿರುವ ಊರುಗೋಲನ್ನು ನದಿಗಳ, ಕಾಲುವೆಗಳ, ಕೆರೆಗಳ ಮತ್ತು ನೀರಿರುವ ಪ್ರತಿಯೊಂದು ಸ್ಥಳದ ಮೇಲೆ ಚಾಚು’ ಎಂದು ಹೇಳು. ಅವನು ಚಾಚಿದಾಗ ನೀರೆಲ್ಲಾ ರಕ್ತವಾಗುವುದು. ಮರದ ಮತ್ತು ಕಲ್ಲಿನ ಪಾತ್ರೆಗಳಲ್ಲಿರುವ ನೀರು ಸಹ ರಕ್ತವಾಗುವುದು” ಎಂದು ಹೇಳಿದನು.


ಆದ್ದರಿಂದ ಫರೋಹನು ತನ್ನ ಜನರಿಗೆಲ್ಲಾ, “ಇಬ್ರಿಯರಿಗೆ ಹುಟ್ಟುವ ಗಂಡುಕೂಸುಗಳನ್ನೆಲ್ಲಾ ನೈಲ್ ನದಿಗೆ ಎಸೆದುಬಿಡಬೇಕು. ಆದರೆ ಎಲ್ಲಾ ಹೆಣ್ಣುಮಕ್ಕಳು ಬದುಕಲಿ” ಎಂದು ಆಜ್ಞಾಪಿಸಿದನು.


ಆ ಜನರು ನಿನ್ನ ಪರಿಶುದ್ಧ ಜನರ ಮತ್ತು ನಿನ್ನ ಪ್ರವಾದಿಗಳ ರಕ್ತವನ್ನು ಸುರಿಸಿದರು. ಈಗ ನೀನು ಅವರಿಗೆ ಕುಡಿಯಲು ರಕ್ತವನ್ನೇ ನೀಡಿರುವೆ. ಅವರು ಇದಕ್ಕೆ ಪಾತ್ರರಾಗಿದ್ದಾರೆ.”


ಅಳಿದುಳಿದ ದೇವಜನರು ಅಶ್ಶೂರ ದೇಶವನ್ನು ಬಿಡಲು ಒಂದು ಮಾರ್ಗವಿರುವದು. ಅದು ದೇವರು ತನ್ನ ಜನರನ್ನು ಈಜಿಪ್ಟಿನಿಂದ ಬಿಡಿಸಿದ ಕಾಲದಂತಿರುವುದು.


ಬಳಿಕ ಮೋಶೆ ಮತ್ತು ಇಸ್ರೇಲರು ಯೆಹೋವನಿಗೆ ಈ ಗೀತೆಯನ್ನು ಹಾಡತೊಡಗಿದರು: “ನಾನು ಯೆಹೋವನಿಗೆ ಹಾಡುವೆನು. ಆತನು ಮಹಾಕಾರ್ಯಗಳನ್ನು ಮಾಡಿದ್ದಾನೆ. ಆತನು ಕುದುರೆಗಳನ್ನೂ ಸವಾರರನ್ನೂ ಸಮುದ್ರದೊಳಗೆ ಮುಳುಗಿಸಿದನು.


ಆತನು ಫರೋಹನ ರಥಗಳನ್ನೂ ಸೈನಿಕರನ್ನೂ ಸಮುದ್ರದೊಳಗೆ ಕೆಡವಿದನು; ಫರೋಹನ ಮಹಾವೀರರನ್ನು ಕೆಂಪು ಸಮುದ್ರದಲ್ಲಿ ಮುಳುಗಿಸಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು