ವಿಮೋಚನಕಾಂಡ 14:27 - ಪರಿಶುದ್ದ ಬೈಬಲ್27 ಆದ್ದರಿಂದ ಹಗಲಿನ ಬೆಳಕು ಪ್ರಕಾಶಿಸುವುದಕ್ಕಿಂತ ಸ್ವಲ್ಪ ಮೊದಲು, ಮೋಶೆಯು ತನ್ನ ಕೈಯನ್ನು ಸಮುದ್ರದ ಮೇಲೆ ಚಾಚಿದನು. ನೀರು ತನ್ನ ಸರಿಯಾದ ಮಟ್ಟಕ್ಕೆ ಹಿಂತಿರುಗಿತು. ಈಜಿಪ್ಟಿನವರು ನೀರಿನಿಂದ ಓಡಿಹೋಗಲು ಬಹಳವಾಗಿ ಪ್ರಯತ್ನಿಸಿದರು. ಆದರೆ ಯೆಹೋವನು ಈಜಿಪ್ಟಿನವರನ್ನು ಸಮುದ್ರದಲ್ಲಿ ಕೆಡವಿಬಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಮೋಶೆ ಸಮುದ್ರದ ಮೇಲೆ ಕೈಚಾಚಿದನು. ಬೆಳಗಾಗುವಾಗಲೇ ಸಮುದ್ರದ ನೀರು ಮೊದಲಿದ್ದಂತೆಯೇ ತುಂಬಿಕೊಂಡಿತು. ಐಗುಪ್ತ್ಯರು ಓಡಿಹೋಗುತ್ತಾ ಅದರ ಎದುರಾಗಿಯೇ ಬಂದರು. ಹೀಗೆ ಯೆಹೋವನು ಐಗುಪ್ತ್ಯರನ್ನು ಸಮುದ್ರದೊಳಗೆ ತಳ್ಳಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಅಂತೆಯೇ ಮೋಶೆ ಸಮುದ್ರದ ಮೇಲೆ ಕೈ ಚಾಚಿದನು. ಬೆಳಗಾಗುವಾಗಲೇ ಸಮುದ್ರದ ನೀರು ಮೊದಲಿದ್ದಂತೆಯೇ ತುಂಬಿಕೊಂಡಿತು. ಈಜಿಪ್ಟಿನವರು ಓಡಿಹೋಗುತ್ತಾ ಅದಕ್ಕೆ ಎದುರಾಗಿಯೇ ಬಂದರು. ಹೀಗೆ ಸರ್ವೇಶ್ವರ ಈಜಿಪ್ಟಿನವರನ್ನು ಸಮುದ್ರದೊಳಗೆ ಕೆಡವಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಬೆಳಗಾಗುವಾಗಲೇ ಸಮುದ್ರದ ನೀರು ಮೊದಲಿದ್ದಂತೆಯೇ ತುಂಬಿಕೊಳ್ಳಲು ಐಗುಪ್ತ್ಯರು ಓಡಿಹೋಗುತ್ತಾ ಅದರ ಎದುರಾಗಿಯೇ ಬಂದರು. ಹೀಗೆ ಯೆಹೋವನು ಐಗುಪ್ತ್ಯರನ್ನು ಸಮುದ್ರದೊಳಗೆ ಕೆಡವಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆಗ ಮೋಶೆಯು ಸಮುದ್ರದ ಮೇಲೆ ಕೈಚಾಚಲಾಗಿ ಸಮುದ್ರವು ಬೆಳಗಾಗುವಾಗಲೇ ಮೊದಲಿನಂತೆ ತುಂಬಿಕೊಂಡಿತು. ಈಜಿಪ್ಟಿನವರು ಓಡಿಹೋಗುತ್ತಾ ಅದಕ್ಕೆ ಎದುರಾಗಿಯೇ ಬಂದರು. ಹೀಗೆ ಯೆಹೋವ ದೇವರು ಈಜಿಪ್ಟಿನವರನ್ನು ಸಮುದ್ರದೊಳಗೆ ಕೆಡವಿಬಿಟ್ಟರು. ಅಧ್ಯಾಯವನ್ನು ನೋಡಿ |
ಆ ಬಳಿಕ ಸರ್ವಶಕ್ತನಾದ ಯೆಹೋವನು ಕೊರಡೆಯಿಂದ ಅಶ್ಶೂರವನ್ನು ಹೊಡೆಯುವನು. ಹಿಂದಿನ ಕಾಲದಲ್ಲಿ ಓರೇಬ್ ಬಂಡೆಯ ಮೇಲೆ ಮಿದ್ಯಾನ್ಯರನ್ನು ಯೆಹೋವನು ಹೇಗೆ ಸೋಲಿಸಿದನೋ ಹಾಗೆಯೇ ಅಶ್ಶೂರವನ್ನು ಸೋಲಿಸುವನು. ಹಿಂದಿನ ಕಾಲದಲ್ಲಿ ಯೆಹೋವನು ಈಜಿಪ್ಟನ್ನು ಶಿಕ್ಷಿಸಿದನು. ಆತನು ಕೋಲನ್ನೆತ್ತಿ ಸಮುದ್ರ ಮಾರ್ಗವಾಗಿ ತನ್ನ ಜನರನ್ನು ಈಜಿಪ್ಟಿನಿಂದ ಹೊರನಡಿಸಿದನು. ಅದೇ ರೀತಿಯಲ್ಲಿ ಅಶ್ಶೂರದಿಂದ ಯೆಹೋವನು ತನ್ನ ಜನರನ್ನು ರಕ್ಷಿಸಿ ಬಿಡಿಸುವನು.